ಕೇಂದ್ರ, ರಾಜ್ಯ ಸರ್ಕಾರಗಳು ಕನ್ನಡದ ಕತ್ತು ಹಿಸುಕುವ ಕೆಲಸ ಮಾಡುತ್ತಿವೆ: ಕುಮಾರಸ್ವಾಮಿ

Public TV
2 Min Read
HDK 2

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯದಲ್ಲಿ ಕನ್ನಡವನ್ನು ಧಿಕ್ಕರಿಸಿ ಹಿಂದಿ ದಿವಸ ಆಚರಿಸುತ್ತಿರುವುದು, ಅದಕ್ಕೆ ರಾಜ್ಯ ಬಿಜೆಪಿ(BJP) ಸರ್ಕಾರ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ. ‌ಕುಮಾರಸ್ವಾಮಿ(HD Kumaraswamy) ವಾಗ್ದಾಳಿ ನಡೆಸಿದರು.

ಹಿಂದಿ ದಿವಸ ಆಚರಣೆ ಖಂಡಿಸಿ ವಿಧಾನಸೌಧ ಬಳಿಯ ಮಹಾತ್ಮ ಗಾಂಧೀಜಿ ಪ್ರತಿಮೆ ಎದುರು ಕನ್ನಡ ಶಾಲು ಧರಿಸಿ ಹಾಗೂ ಕಪ್ಪು ಪಟ್ಟಿ ಕಟ್ಟಿಕೊಂಡು ಜೆಡಿಎಸ್(JDS) ಶಾಸಕರು ಪ್ರತಿಭಟನೆ ನಡೆಸಿದರು. ಕನ್ನಡ(Kannada) ಹಾಡು ಹಾಡಿ ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

bjP

ಕೇಂದ್ರ ಸರ್ಕಾರಕ್ಕೆ ಭಾಷಾ ಸಹಿಷ್ಣುತೆ ಇಲ್ಲ. ರಾಜ್ಯಗಳ ಮೇಲೆ, ಅದರಲ್ಲೂ ಕರ್ನಾಟಕದ ಮೇಲೆ ಪದೇಪದೆ ಹಿಂದಿ ಹೇರಿಕೆ ಮಾಡುತ್ತಲೇ ಇದೆ. ಪ್ರಾದೇಶಿಕ ಭಾಷೆಗಳನ್ನು, ಮುಖ್ಯವಾಗಿ ಕನ್ನಡವನ್ನು ಹತ್ತಿಕ್ಕುವ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ನೇರವಾಗಿ ಆರೋಪಿಸಿದರು.

ಕೇಂದ್ರ ಸರ್ಕಾರದಿಂದ ಇವತ್ತು ಹಿಂದಿ ಆಚರಣೆ ಮಾಡುತ್ತಿರುವುದಕ್ಕೆ ನಮ್ಮ ಪಕ್ಷ ಜಾತ್ಯತೀತ ಜನತಾದಳದ ವಿರೋಧ ಇದೆ. ಸ್ವಾತಂತ್ರ್ಯ ಬಂದು 75 ವರ್ಷಗಳ ನಂತರವೂ ದೇಶದಲ್ಲಿ ನಾನಾ ಭಾಷೆ ಮಾತಾಡುವ ನಾಗರಿಕರು ಇದ್ದಾರೆ. ಈಗಾಗಲೇ ಅಮೃತ ಮಹೋತ್ಸವ ಮಾಡಿದ್ದೇವೆ. ಅದರೂ ಕೇಂದ್ರ ಬಿಜೆಪಿ ಸರ್ಕಾರ ಕೇವಲ ಒಂದು ಭಾಷೆಯನ್ನು ರಾಜ್ಯಗಳ ಮೇಲೆ ಹೇರಿಕೆ ಮಾಡುತ್ತಿದೆ ಎಂದು ಕಿಡಿಕಾರಿದರು.

ಒಂದು ಭಾಷೆ(Language) ಒಂದು ರಾಷ್ಟ್ರ ಎಂಬ ಗೃಹ ಸಚಿವರ ಹೇಳಿಕೆ ಸರಿಯಲ್ಲ. ಕೇವಲ ಹಿಂದಿ ಒಂದು ಭಾಷೆಯಿಂದ ಭಾರತ ಒಂದಾಗಿ ಉಳಿದಿಲ್ಲ. ವಿವಿಧತೆಯಲ್ಲಿ ಏಕತೆ ಭಾರತದ ಶಕ್ತಿ. ಅದನ್ನೇ ಹಾಳು ಮಾಡಿದರೆ ದೇಶವನ್ನು ಒಡೆದಂತೆ. ಅವರು ಕೆಲ ಭಾವನಾತ್ಮಕ ವಿಚಾರ ಕೆಣಕುತ್ತಾ ದೇಶವನ್ನು ವಿಭಜಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇವತ್ತು ಉತ್ತರ ಭಾರತದ ಕೆಲವು ಭಾಗದಲ್ಲಿ ಹಿಂದಿ(Hindi) ಇಲ್ಲ. ಅನೇಕ ರಾಜ್ಯಗಳಲ್ಲಿ ಅವರವರದ್ದೇ ಭಾಷೆ ಇದೆ. ತಮ್ಮ ಭಾಷೆಯನ್ನೇ ಮಾತನಾಡುತ್ತಾ ನೆಮ್ಮದಿಯಿಂದ ಇದ್ದಾರೆ. ಸಾವಿರಾರು ವರ್ಷಗಳ ಇತಿಹಾಸ ಇರುವ ಪ್ರಾದೇಶಿಕ ಭಾಷೆಗಳ ಕತ್ತನ್ನು ಹಿಸುಕುವ ಕೇಂದ್ರದ ನಡೆಗೆ ನಮ್ಮ ವಿರೋಧ ಇದೆ. ಕನ್ನಡದ ಬಗ್ಗೆ ಯಾಕಿಷ್ಟು ಅಸಹನೆ ಇವರಿಗೆ ಎಂದು ನನಗೆ ಅರ್ಥವಾಗುತ್ತಿಲ್ಲ ಎಂದರು. ಇದನ್ನೂ ಓದಿ: ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿತ – 7 ಸಾವು, ಒಬ್ಬರ ಸ್ಥಿತಿ ಗಂಭೀರ

jds logo

ಹಿಂದಿ ದಿವಸದ ಹೆಸರಿನಲ್ಲಿ ಕನ್ನಡಿಗರ ತೆರಿಗೆ ಹಣ ವ್ಯಯ ಮಾಡೋದು ಎಷ್ಟು ಸರಿ? ಜನ ಈಗಾಗಲೇ ನೆರೆ ಹಾವಳಿಯಿಂದ ತತ್ತರಿಸಿದ್ದಾರೆ. ಅವರ ನೆರವಿಗೆ ಬಾರದೆ ಹಿಂದಿ ಭಾಷೆಯ ವಿಚಾರ ಸರ್ಕಾರಕ್ಕೆ ಮುಖ್ಯವಾಗಿದೆ. ಇದಕ್ಕೆ ಕನ್ನಡಿಗರ ಧಿಕ್ಕಾರವಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಉಮೇಶ್‌ ಕತ್ತಿ ಕುಟುಂಬಕ್ಕೆ ಸಚಿವ ಸ್ಥಾನ ನೀಡಲು ಅಭಿಮಾನಿಗಳ ಆಗ್ರಹ

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *