ಮತ್ತೆ ಒಂದಾದ ʻಪಂಚರಂಗಿ’ ದಿಗಂತ್‌- ನಿಧಿ ಸುಬ್ಬಯ್ಯ ಜೋಡಿ

Public TV
1 Min Read
diganth

ಕೊಡಗಿನ ಬ್ಯೂಟಿ ನಿಧಿ ಸುಬ್ಬಯ್ಯ (Nidhi Subbaiah) ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. 12 ವರ್ಷಗಳ ನಂತರ ಗುಳಿಕೆನ್ನೆ ನಟ ದಿಗಂತ್ (Diganth) ಜೊತೆ ಮತ್ತೆ ನಿಧಿ ಸುಬ್ಬಯ್ಯ ಕಾಣಿಸಿಕೊಳ್ಳುತ್ತಿದ್ದಾರೆ. `ಪಂಚರಂಗಿ'(Pancharangi) ಜೋಡಿ ಮತ್ತೆ ತೆರೆಯ ಮೇಲೆ ಒಂದಾಗುತ್ತಿದ್ದಾರೆ.

nidhi subbaiah

ಟಿವಿ ಬಿಗ್ ಬಾಸ್‌ನಲ್ಲಿ ಮಿಂಚಿದ ನಿಧಿ ಸುಬ್ಬಯ್ಯ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ಆಕ್ಟೀವ್ ಆಗಿದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತ ಕೊಡಗಿನ ಕುವರಿ ನಿಧಿ ಬ್ಯುಸಿಯಾಗಿದ್ದಾರೆ. `ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಚಿತ್ರದ ಮೂಲಕ ಮತ್ತೆ ದಿಗಂತ್ ಜೊತೆ ತೆರೆಹಂಚಿಕೊಳ್ಳುತ್ತಿದ್ದಾರೆ ನಟಿ ನಿಧಿ ಸುಬ್ಬಯ್ಯ. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕರಾಳ ಅನುಭವ ಬಿಚ್ಚಿಟ್ಟ ನಟಿ ಶಮಾ ಸಿಕಂದರ್

diganth

ಸಮರ್ಥ್ ಬಿ ಕಡಗೋಳ್ ನಿರ್ದೇಶನದ ಎಡಗೈ ಬಳಸುವವರ ಸುತ್ತ ಸುತ್ತವ ಕಥೆಯಲ್ಲಿ ದಿಗಂತ್‌ಗೆ ನಾಯಕಿಯಾಗಿ ಧನು ಹರ್ಷ ಕಾಣಿಸಿಕೊಳ್ತಿದ್ದಾರೆ. ಈ ಚಿತ್ರದಲ್ಲಿ ನಿಧಿ ಸುಬ್ಬಯ್ಯ ಪ್ರಮುಖ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ನಿಧಿ ಈಗಾಗಲೇ ಚಿತ್ರತಂಡ ಸೇರಿಕೊಂಡಿದ್ದು, ತಮ್ಮ ಭಾಗದ ಚಿತ್ರೀಕರಣದಲ್ಲಿ  ಬ್ಯುಸಿಯಾಗಿದ್ದಾರೆ.

ಗುರುದತ್ತ ಗಾಣಿಗ ಮತ್ತು ಸಮರ್ಥ್ ಜಂಟಿ ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬರುತ್ತಿದೆ. ಮುಂದಿನ ವರ್ಷ ಈ ಸಿನಿಮಾ ತೆರೆಗೆ ಅಪ್ಪಳಿಸಲಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *