ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಸೋನಿಯಾ, ಪ್ರಿಯಾಂಕಾ ಭಾಗಿ – ಡಿಕೆಶಿ

Public TV
2 Min Read
sonia gandhi priyanka gandhi

ಬೆಂಗಳೂರು: ಕಾಂಗ್ರೆಸ್ (Congress) ನಾಯಕ ರಾಹುಲ್‌ಗಾಂಧಿ (Rahul Gandhi) ನೇತೃತ್ವದಲ್ಲಿ ನಡೆಯಲಿರುವ ಭಾರತ್ ಜೋಡೋ (Bharath Jodo Yatra) ಪಾದಯಾತ್ರೆಯಲ್ಲಿ ಕಾಂಗ್ರೆಸ್ ಮಹಾ ನಾಯಕಿಯರಾದ ಸೋನಿಯಾ ಗಾಂಧಿ (Sonia Gandhi) ಹಾಗೂ ಪ್ರಿಯಾಂಕಾ ಗಾಂಧಿ (Priyanka Gandhi) ಅವರು ಭಾಗವಹಿಸಲಿದ್ದಾರೆ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

DK SHIVAKUMAR 4

ಖಾಸಗಿ ಹೋಟೆಲ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ (DK Shivakumar), ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯಲಿರುವ ಭಾರತ ಜೋಡೋ ಯಾತ್ರೆಯಲ್ಲಿ ಎಐಸಿಸಿ (AICC) ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ಭಾಗವಹಿಸಲಿದ್ದಾರೆ. ಅವರು ಭಾಗವಹಿಸಲಿರುವ ದಿನಾಂಕ ಶೀಘ್ರದಲ್ಲೇ ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ನೆಪ ಹೇಳೋ ಬದಲು PFIಯನ್ನು ನಿಷೇಧಿಸಲಿ: ದಿನೇಶ್ ಗುಂಡೂರಾವ್

DK SHIVAKUMAr 5

ಇಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್ (KC Venugopal) ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಹೊತ್ತಿರುವ ರಣದೀಪ್ ಸುರ್ಜೇವಾಲ ಅವರು ಭಾರತ ಜೋಡೋ ಯಾತ್ರೆಯ ಸಿದ್ಧತೆಗಳ ಪರಿಶೀಲನೆ ಮಾಡುತ್ತಿದ್ದಾರೆ. ಈ ಯಾತ್ರೆ ಪ್ರಮುಖ 5 ವಿಚಾರಗಳನ್ನು ಒಳಗೊಂಡಿದೆ. ಈ ಯಾತ್ರೆಯಲ್ಲಿ ಎಲ್ಲಾ ಪ್ರಮುಖ ನಾಯಕರಿಗೆ ಜವಾಬ್ದಾರಿ ನೀಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

sonia gandhi priyanka gandhi 2

ಹೇಗಿರಲಿದೆ ರೂಪುರೇಷೆ?
ರಾಜ್ಯದಲ್ಲಿ ಸೆ.30 ರಂದು ಬೆಳಗ್ಗೆ 9 ಗಂಟೆಗೆ ಚಾಮರಾಜನಗರ (Chamarajanagar) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನಿಂದ ಭಾರತ ಐಕ್ಯತಾ ಯಾತ್ರೆ ಆರಂಭವಾಗಲಿದೆ. ಅ.2 ರಂದು ಬದನವಾಳು ಗ್ರಾಮದಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಂತರ ದಸರಾ (Mysuru Dasara) ಹಬ್ಬದ ಪ್ರಯುಕ್ತ 2 ದಿನಗಳ ಕಾಲ ಯಾತ್ರೆಗೆ ಬಿಡುವು ನೀಡಲಾಗುವುದು. ಆಮೇಲೆ ಬಳ್ಳಾರಿಯಲ್ಲಿ (Bellary) ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಫಿಸಿಕಲ್ ಟ್ರೈನರ್‌ಗೆ ಉಂಗುರ ತೊಡಿಸಿ ಎಂಗೇಜ್ಡ್ ಆದ ಆಮೀರ್ ಖಾನ್ ಪುತ್ರಿ

dk shivakumar siddaramaiah

ಯಾತ್ರೆಯ ಭಾಗವಾಗಿ ರಾಹುಲ್ ಗಾಂಧಿ ಅವರು ಯುವಕರು, ಮಹಿಳೆಯರು, ರೈತರು, ನಾಗರಿಕ ಸಮುದಾಯಗಳು, ವಿದ್ಯಾರ್ಥಿಗಳು, ಬುಡಕಟ್ಟು ಜನರ ಜೊತೆ ಒಂದೊಂದು ದಿನ ಮಾತುಕತೆ ನಡೆಸಲಿದ್ದಾರೆ. ಪ್ರತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ, ಪಕ್ಷದ ಘಟಕಗಳು, ಪರಾಜಿತ ಅಭ್ಯರ್ಥಿಗಳು ಜನರನ್ನು ಕರೆ ತಂದ ದಿನ ರಾಹುಲ್ ಗಾಂಧಿ ಅವರ ಜತೆ ಹೆಜ್ಜೆ ಹಾಕಲು ಅವಕಾಶ ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ನಾಗರಿಕ ಸಮಾಜದ ಗಣ್ಯರು, ಕಲಾವಿದರು, ಕೈಗಾರಿಕೋದ್ಯಮಿಗಳು, ಚಿಂತಕರು ಸೇರಿದಂತೆ ಪ್ರಮುಖರಿಗೆ ಅವಕಾಶ ಮಾಡಿಕೊಡಲಾಗುವುದು. ಈ ಯಾತ್ರೆ ಮಾರ್ಗದಲ್ಲಿ ಬರುವ ಅತಿ ದೊಡ್ಡ ನಗರ ಮೈಸೂರು ಆಗಿದ್ದು, ಮೈಸೂರು ಜನರು ಬೆಳಗ್ಗೆ 7 ಗಂಟೆಗೆ ರಾಹುಲ್ ಗಾಂಧಿ ಜತೆಗೆ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು ಎಂದು ಹೇಳಿದ್ದಾರೆ.

ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆ (Congress Presidential Election) ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆಶಿ, ರಾಹುಲ್ ಗಾಂಧಿಯವರು ಪಕ್ಷದ ಮುಂದಾಳತ್ವ ವಹಿಸಬೇಕು ಎಂದು ನಮ್ಮ ರಾಜ್ಯದ ಎಲ್ಲಾ ನಾಯಕರ ಒತ್ತಾಸೆಯಾಗಿದೆ. ಆದರೆ ಅವರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕು ಎಂದಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *