ಕೆಜಿಎಫ್ ಸಿನಿಮಾದ ಮೂಲಕ ಭಾರತೀಯ ಸಿನಿಮಾ ರಂಗದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಿರುವ, ಕನ್ನಡದ ಹೊಂಬಾಳೆ ಫಿಲ್ಮ್ಸ್ (Hombale Films) ಈಗಾಗಲೇ ಹಲವು ಚಿತ್ರಗಳನ್ನು ನಿರ್ಮಾಣ ಮಾಡಿದೆ. ತೆಲುಗು, ತಮಿಳು ಮತ್ತು ಮಲೆಯಾಳಂ ಸಿನಿಮಾ ರಂಗದಲ್ಲೂ ಹಣ ಹೂಡಿಕೆ ಮಾಡುತ್ತಿದೆ. ಇದೀಗ ಬಾಲಿವುಡ್ (Bollywood) ನತ್ತ ಮುಖ ಮಾಡಿದೆ. ಮುಂದಿನ ದಿನಗಳಲ್ಲಿ ನೇರವಾಗಿ ಹಿಂದಿಯಲ್ಲೂ ಹೊಂಬಾಳೆ ಫಿಲ್ಮ್ಸ್ ಸಿನಿಮಾ ಮಾಡಲಿದ್ದು, ಅಂಥದ್ದೊಂದು ಸುದ್ದಿ ಸ್ಯಾಂಡಲ್ ವುಡ್ ನಲ್ಲಿ ಹರಿದಾಡುತ್ತಿದೆ.
ಹೊಂಬಾಳೆ ಬ್ಯಾನರ್ ನಿಂದ ಮೂಡಿ ಬಂದಿರುವ ಕಾಂತಾರ, ರಾಘವೇಂದ್ರ ಸ್ಟೋರ್ಸ್ ಸೇರಿದಂತೆ ಹಲವು ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಈ ನಡುವೆ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಗಾಗಿ ಹೊಂಬಾಳೆ ಫಿಲ್ಮ್ಸ್ ಸಿನಿಮಾ ಮಾಡಲು ಹೊರಟಿದೆಯಂತೆ. ಈ ಕುರಿತು ಶಾರುಖ್ (Shah Rukh Khan) ಜೊತೆ ಮಾತುಕತೆ ಕೂಡ ನಡೆದಿದೆ ಎನ್ನಲಾಗುತ್ತಿದೆ. ಅಂದುಕೊಂಡಂತೆ ನಡೆದರೆ ಮುಂದಿನ ವರ್ಷದಿಂದಲೇ ಈ ಸಿನಿಮಾ ಸೆಟ್ಟೇರುವ ಸಾಧ್ಯತೆ ಇದೆ. ಇದನ್ನೂ ಓದಿ:`ಕಮಲಿ’ ಖ್ಯಾತಿಯ ಅಮೂಲ್ಯಗೌಡರ ಹಾಟ್ ಫೋಟೋ ವೈರಲ್
ಅಧಿಕೃತವಾಗಿ ಹೊಂಬಾಳೆ ಫಿಲ್ಮಸ್ ಆಗಲಿ, ಶಾರುಖ್ ಖಾನ್ ಆಗಲಿ ಹೇಳದೇ ಇದ್ದರೂ, ಮಾತುಕತೆ ಆಗಿದ್ದಂತೂ ಪಕ್ಕಾ ಅನ್ನುತ್ತವೆ ಮೂಲಗಳು. ಈ ಸಿನಿಮಾವನ್ನು ಯಾರು ನಿರ್ದೇಶನ ಮಾಡುತ್ತಾರೆ ಎನ್ನುವುದು ಸದ್ಯಕ್ಕೆ ಸಸ್ಪೆನ್ಸ್. ಆದರೆ, ಸಿನಿಮಾ (Cinema) ಮಾಡುವುದು ಪಕ್ಕಾ ಎಂದೇ ಹೇಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬಹುಶಃ ಮತ್ತಷ್ಟು ವಿಷಯಗಳು ಆಚೆ ಬರಬಹುದು. ಅಥವಾ ಹೊಂಬಾಳೆಯವರೆ ಹೊಸ ಅಪ್ ಡೇಟ್ ನೀಡಬಹುದು.