ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ (Accident) ಜನಪ್ರಿಯ ಗೇಮಿಂಗ್ ಯೂಟ್ಯೂಬರ್ (Youtuber) ಅಭಿಯುದಯ್ ಮಿಶ್ರಾ ಮೃತಪಟ್ಟಿದ್ದಾರೆ.
ಭೋಪಾಲ್‌ನಿಂದ 122 ಕಿ.ಮೀ ದೂರದಲ್ಲಿರುವ ಸೊಹಾಗ್‌ಪುರ ಬಳಿ ಇರುವ ರಾಜ್ಯ ಹೆದ್ದಾರಿಯಲ್ಲಿ ಟ್ರಕ್‌ಗೆ ಮಿಶ್ರಾ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಈ ವೇಳೆ ಮಿಶ್ರಾ ಸಾವನ್ನಪ್ಪಿದ್ದಾರೆ.
View this post on Instagram
ಅಭಿಯುದಯ್ ಮಿಶ್ರಾ ಅವರು ಪಬ್ಜಿಯಂತೆಯೇ ಮೊಬೈಲ್‌ನಲ್ಲಿರುವ ಫ್ರೀ ಪೈರ್‌ನಂತಹ ಗೇಮ್‌ನ ವೀಡಿಯೋಗಳನ್ನು ಅಪ್‌ಲೋಡ್ ಮಾಡುತ್ತಿದ್ದರು. ಇದರಿಂದಲೇ ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಅಧಿಕ ಅಭಿಮಾನಿಗಳನ್ನು ಹೊಂದಿದ್ದರು. ಅಭಿಯುದಯ್ ಮಿಶ್ರಾ ಅವರನ್ನು ಸ್ಕೈಲಾರ್ಡ್ (Sky Lord) ಎಂಬ ಹೆಸರಿನಿಂದ ಕರೆಯಲಾಗುತ್ತಿತ್ತು. ಇದನ್ನೂ ಓದಿ: ಪೆರಿಷಬಲ್ ಸರಕು ಸಾಗಣೆ – ಮತ್ತೆ ಮೊದಲ ಸ್ಥಾನ ಪಡೆದುಕೊಂಡ ಬೆಂಗಳೂರು ವಿಮಾನ ನಿಲ್ದಾಣ
ಇನ್‌ಸ್ಟಾಗ್ರಾಂನಲ್ಲಿ ಇವರಿಗೆ ಒಟ್ಟಾರೆ 4.24 ಲಕ್ಷ ಫಾಲೋವರ್ಸ್ ಇದ್ದಾರೆ. ಯೂಟ್ಯೂಬ್‌ನಲ್ಲಿ 10 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದರು. ಎರಡು ವಾರಗಳ ಹಿಂದೆ ಕೊನೆಯ ವೀಡಿಯೋವನ್ನು ಪೋಸ್ಟ್ ಮಾಡಿದ್ದರು. ಘಟನೆಗೆ ಸಂಬಂಧಿಸಿ ಮಿಶ್ರಾ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಾಪವನ್ನು ಸೂಚಿಸಿದ್ದಾರೆ. ಇದನ್ನೂ ಓದಿ: ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ – ಪೊಲೀಸರಿಗೆ ವಾರ್ನಿಂಗ್ ನೀಡಿದ ಡಿಕೆಶಿ