ಚೆನ್ನೈ: ತಮಿಳುನಾಡಿನ (Tamil Nadu) ಚೆನ್ನೈನ (Chennai) ಮೈಲಾಪುರ (Mylapore) ಪ್ರದೇಶದಲ್ಲಿ ರಸ್ತೆಬದಿಯ ವ್ಯಾಪಾರಿಗಳಿಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಶನಿವಾರ ತರಕಾರಿಗಳನ್ನು ಖರೀದಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.
Some glimpses from Smt @nsitharaman‘s visit to Mylapore market in Chennai. https://t.co/GQiPiC5ui5 pic.twitter.com/fjuNVhfY8e
— NSitharamanOffice (@nsitharamanoffc) October 8, 2022
ಈ ವೀಡಿಯೋವನ್ನು ನಿರ್ಮಲಾ ಸೀತಾರಾಮನ್ ಅವರ ಕಚೇರಿ ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದು, ವೀಡಿಯೋದಲ್ಲಿ ತಮಿಳುನಾಡಿನ ಚೆನ್ನೈನ ಮೈಲಾಪುರ ಪ್ರದೇಶದ ಬೀದಿಬದಿ ವ್ಯಾಪಾರಿಗಳೊಂದಿಗೆ ಸಂವಾದ ನಡೆಸುತ್ತಾ ತರಕಾರಿಗಳನ್ನು ಖರೀದಿಸಿರುವುದನ್ನು ಕಾಣಬಹುದಾಗಿದೆ. ಮೊದಲಿಗೆ ಕೆಲವು ಗೆಣಸುಗಳನ್ನು ಆಯ್ದುಕೊಳ್ಳತ್ತಾರೆ, ಬಳಿಕ ಅದನು ಬಿಟ್ಟು ಹಾಗಲಕಾಯಿಯನ್ನು ಆಯ್ದು ತೂಕ ಮಾಡಿಸಿಕೊಂಡು ಖರೀದಿಸಿದ್ದಾರೆ. ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರದಲ್ಲಿ ನಡುವೆ ತರಕಾರಿ ಬೆಲೆಯಲ್ಲಿ ಕೂಡ ಗಗನಕ್ಕೇರಿದೆ. ಇದನ್ನೂ ಓದಿ: ಡಿಎಂಕೆ ಅಧ್ಯಕ್ಷರಾಗಿ 2ನೇ ಬಾರಿಗೆ ಎಂ.ಕೆ.ಸ್ಟಾಲಿನ್ ಅವಿರೋಧವಾಗಿ ಆಯ್ಕೆ
During her day-long visit to Chennai, Smt @nsitharaman made a halt at Mylapore market where she interacted with the vendors & local residents and also purchased vegetables. pic.twitter.com/emJlu81BRh
— NSitharamanOffice (@nsitharamanoffc) October 8, 2022
ಸದ್ಯ ವೀಡಿಯೋಗೆ ಟ್ವಿಟ್ಟರ್ ಬಳಕೆದಾರರೊಬ್ಬರು, ವ್ಯಾಪಾರಿಗಳು ಮತ್ತು ಗ್ರಾಹಕರು ಹಣದುಬ್ಬರದಿಂದ ಹೇಗೆ ಉಳಿತಾಯ ಮಾಡಬಹುದು ಮತ್ತು ಬೆಲೆ ಏರಿಕೆಯನ್ನು ನಿಯಂತ್ರಣಕ್ಕೆ ತರಲು ಸರ್ಕಾರ ಯಾವ ರೀತಿಯ ಕ್ರಮ ಕೈಗೊಳ್ಳಬಹುದು ಎಂದು ತಿಳಿದುಕೊಳ್ಳುತ್ತಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ಕಾಂಡೋಮ್‍ಗಳನ್ನು ಹೆಚ್ಚಾಗಿ ಬಳಸ್ತಿರೋದು ನಾವು – ಭಾಗವತ್‍ಗೆ ಓವೈಸಿ ತಿರುಗೇಟು