ಚಿಕ್ಕಮಗಳೂರು: ಜಮೀನು ವಿವಾದದ ಹಿನ್ನೆಲೆಯಲ್ಲಿ ಮಾತುಕತೆಗೆ ತೆರಳಿದ್ದವರ ಮೇಲೆ ರೈತ ಸಂಘದ ಜಿಲ್ಲಾಧ್ಯಕ್ಷ ಶೂಟ್ ಮಾಡಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಲಿಗೆ ಗುಂಡು ತಾಗಿದ ವ್ಯಕ್ತಿಯನ್ನು ನಾರಾಯಣ್ ರಾಜ್ ಎಂದು ಗುರುತಿಸಲಾಗಿದೆ. ಮಾಕೋನಹಳ್ಳಿ ಗ್ರಾಮದ ರೈತ (Farmer) ಸಂಘದ ದುಗ್ಗಪ್ಪಗೌಡ ಹಾಗೂ ಮಂಚೇಗೌಡ ನಡುವೆ ಜಮೀನು ವಿವಾದವಿದ್ದು, ಮಂಚೇಗೌಡ ತಮ್ಮ ಜಮೀನನ್ನು ಮನೋಜ್ ಎಂಬವರಿಗೆ ಮಾರಾಟ ಮಾಡಿದ್ದರು. ಮಂಚೇಗೌಡ ಅವರ ಜಮೀನು (Land) ಖರೀದಿಸಿದ ಮನೋಜ್ ಜಮೀನಿನ ಸರ್ವೇ ಕಾರ್ಯ ಮುಗಿಸಿದ್ದರು. ಈ ವೇಳೆ ಮನೋಜ್ ಖರೀದಿಸಿದ ಜಾಗವನ್ನು ದುಗ್ಗಪ್ಪಗೌಡ ಅವರು ಒತ್ತುವರಿ ಮಾಡಿ ಮನೆ ಕಟ್ಟಿದ್ದರು ಎಂದು ಹೇಳಲಾಗಿದೆ.
ಹಾಗಾಗಿ, ಜಮೀನು ಖರೀದಿಸಿದ ಮನೋಜ್ ಹಾಗೂ ಅದೇ ಜಮೀನು ಪಕ್ಕದಲ್ಲಿದ್ದ ದುಗ್ಗಪ್ಪಗೌಡರಿಗೆ ಜಮೀನು ವಿವಾದ ಕೂಡ ಇತ್ತು. ಈ ಬಗ್ಗೆ ಮಾತನಾಡಲು ದುಗ್ಗಪ್ಪಗೌಡ ಅವರ ಮನೆ ಬಳಿ ಹೋದಾಗ ಮಹಡಿ ಮೇಲೆ ನಿಂತಿದ್ದ ದುಗ್ಗಪ್ಪಗೌಡ ಕೋವಿಯಿಂದ ಮಾತುಕತೆಗೆ ಬಂದವರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ನಾರಾಯಣ್‍ರಾಜ್ ಎಂಬುವರ ಕಾಲಿಗೆ ಗುಂಡು ತಗುಲಿದ್ದು, ಕೂಡಲೇ ಅವರನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಕುಂಭ ಕಳಶ ಹೊತ್ತು ಮಹಿಳೆಯರೊಂದಿಗೆ ಹೆಜ್ಜೆ ಹಾಕಿದ ಶಶಿಕಲಾ ಜೊಲ್ಲೆ
ಮೂಡಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿ ಮೂಡಿಗೆರೆ ಪೊಲೀಸರು ರೈತ ಸಂಘದ ಅಧ್ಯಕ್ಷ ದುಗ್ಗಪ್ಪಗೌಡರನ್ನು ಬಂಧಿಸಿದ್ದಾರೆ. ಮೂಡಿಗೆರೆ ಮಾಜಿ ಶಾಸಕ ಬಿ.ಬಿ.ನಿಂಗಯ್ಯ ಆಸ್ಪತ್ರೆಗೆ ಭೇಟಿ ನೀಡಿ ಗುಂಡು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾರಾಯಣ್ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ. ಇದನ್ನೂ ಓದಿ: ನಿದ್ದೆಯಿಂದ ಎದ್ದೇಳಿ- ಬೊಮ್ಮಾಯಿಯವರನ್ನು ಕುಂಭಕರ್ಣನಿಗೆ ಹೋಲಿಸಿ, 150ನೇ ದಿನದ ಏಮ್ಸ್ ಹೋರಾಟ