ಬೀದರ್: ಬಾವಿಯೊಂದರಲ್ಲಿ ಬಾರ್ (Bar) ಉದ್ಯಮಿ ಶವವಾಗಿ ಪತ್ತೆಯಾದ ಘಟನೆ ಬೀದರ್ (Bidar) ಜಿಲ್ಲೆಯ ಚಿಟಗುಪ್ಪ ಪಟ್ಟಣದ ಮಹಾದೇವ ದೇವಾಲಯ (Temple) ಹತ್ತಿರ ನಡೆದಿದೆ.
ಚಿಟಗುಪ್ಪ ಪಟ್ಟಣದ ಕೇತಕಿ ಬಾರ್ ಅಂಡ್ ರೆಸ್ಟೋರೆಂಟ್ ಹಾಗೂ ಸಂಗಮ್ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕರಾಗಿದ್ದ ರಾಜು ಗಾಂಜಿ ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ `108′ ಸಮಸ್ಯೆ – 2 ತಿಂಗಳಲ್ಲಿ ಬಗೆಹರಿಯಲಿದೆ ಎಂದ ಸುಧಾಕರ್
ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂದು ಪೊಲೀಸರು ತನಿಖೆ ಮಾಡುತ್ತಿದ್ದು, ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಬಾವಿಯಲ್ಲಿ ಶವ ತೇಲುತ್ತಿರುವುದನ್ನು ನೋಡಿದ ಸ್ಥಳೀಯರು ಠಾಣೆಗೆ ಕರೆ ಮಾಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಬಂದ ಚಿಟಗುಪ್ಪ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೊರಾರ್ಜಿ ದೇಸಾಯಿ ಶಾಲೆಯಲ್ಲಿ RSS ಶಿಬಿರಕ್ಕೆ ಅವಕಾಶ ಆರೋಪ- ಅನುಮತಿ ಕೊಟ್ಟಿಲ್ಲ ಎಂದ ಕೋಟಾ