ಹಾವೇರಿ: ಆರ್‌ಎಸ್‌ಎಸ್(RSS) ಕಾರ್ಯಕರ್ತರ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ ಘಟನೆ ಹಾವೇರಿ(Haveri) ಜಿಲ್ಲೆ ರಟ್ಟೀಹಳ್ಳಿ ಪಟ್ಟಣದಲ್ಲಿ ನಡೆದಿದೆ.
ಓರ್ವ ಕಾರ್ಯಕರ್ತನ ತಲೆಗೆ ಏಟು ಬಿದ್ದಿದ್ದು, ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪಟ್ಟಣದಲ್ಲಿ ಪಥಸಂಚಲನ ನಡೆಸುವ ಸಲುವಾಗಿ ಮಾರ್ಗ ವೀಕ್ಷಣೆಗೆ ತೆರಳಿದ್ದ ವೇಳೆ ಮಂಗಳವಾರ ರಾತ್ರಿ ಹಲ್ಲೆ ಮಾಡಿದ್ದಾರೆ.
ಕಾರ್ಯಕರ್ತನ ಕಾರಿನ ಹಿಂಭಾಗದ ಗ್ಲಾಸ್ ಜಖಂಗೊಂಡಿದೆ. ಗಾಯಾಳುವಿಗೆ ರಟ್ಟೀಹಳ್ಳಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಅನ್ಯಕೋಮಿನ ಹತ್ತು ಜನರನ್ನು ಬಂಧಿಸಿದ್ದೇವೆ ಎಂದು ಎಸ್‌ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಪತಿ 2ನೇ ಮದುವೆಯಾಗುವಂತಿಲ್ಲ – ಕುರಾನ್ ಉಲ್ಲೇಖಿಸಿ ಹೈಕೋರ್ಟ್ ತೀರ್ಪು
ಮುಂಜಾಗ್ರತಾ ಕ್ರಮವಾಗಿ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಸದ್ಯ ಪಟ್ಟಣದಲ್ಲಿ ಪರಿಸ್ಥಿತಿ ಶಾಂತವಾಗಿದೆ. ರಟ್ಟೀಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.