Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಳೆ ಅವಾಂತರ – ತುರ್ತು ಪರಿಹಾರ ಕಾರ್ಯಾಚರಣೆಗೆ ಸಿಎಂ‌ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಳೆ ಅವಾಂತರ – ತುರ್ತು ಪರಿಹಾರ ಕಾರ್ಯಾಚರಣೆಗೆ ಸಿಎಂ‌ ಸೂಚನೆ

Bengaluru City

ಮಳೆ ಅವಾಂತರ – ತುರ್ತು ಪರಿಹಾರ ಕಾರ್ಯಾಚರಣೆಗೆ ಸಿಎಂ‌ ಸೂಚನೆ

Public TV
Last updated: October 13, 2022 12:10 pm
Public TV
Share
2 Min Read
cm meeting
SHARE

ಬೆಂಗಳೂರು: ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಅವಾಂತರಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಹಿರಿಯ ಅಧಿಕಾರಿಗಳ ಜತೆ ವೀಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಿದರು.

ಜಿಲ್ಲಾ ಪ್ರವಾಸದಲ್ಲಿ ಇರುವ ಸಿಎಂ ಸದ್ಯ ಹೊಸಪೇಟೆಯ ಕಮಲಾಪುರದಲ್ಲಿ ವಾಸ್ತವ್ಯ ಹೂಡಿದ್ದಾರೆ. ಕಮಲಾಪುರದ ಹೋಟೆಲ್‌ನಿಂದಲೇ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಕಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠರ ಜೊತೆಗೆ ವರ್ಚ್ಯುಯಲ್ ಸಭೆ ನಡೆಸಿದರು. ಸಚಿವರಾದ ಗೋವಿಂದ ಎಂ. ಕಾರಜೋಳ (Govind Karjol) ಹಾಗೂ ಶಶಿಕಲಾ ಜೊಲ್ಲೆ (Shashikala Jolle), ಸಂಬಂಧಿಸಿದ ಜಿಲ್ಲಾ ಉಸ್ತುವಾರಿ ಸಚಿವರು, ಸರ್ಕಾರದ ಹಿರಿಯ ಅಧಿಕಾರಿಗಳು ವೀಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಬಿಜೆಪಿಯವರಿಗೆ ನನ್ನ ಕಂಡರೆ ಭಯ; ಶತ್ರುಗಳಿದ್ದಷ್ಟು ನಾವು ಹೆಚ್ಚು ಬಲಶಾಲಿಗಳಾಗ್ತೀವಿ – ಸಿದ್ದು

cm meeting1

ಬೆಳಗಾವಿ, ಧಾರವಾಡ, ದಾವಣಗೆರೆ, ಗದಗ, ಕಲ್ಬುರ್ಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಕೊಪ್ಪಳ, ಬೀದರ್, ಮೈಸೂರು ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, ಜನ, ಜಾನುವಾರುಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮಳೆ ಹಾನಿ ಕುರಿತು ಸಮಗ್ರ ಮಾಹಿತಿ ಪಡೆದ ಸಿಎಂ ತುರ್ತು ಪರಿಹಾರ ಕಾರ್ಯಾಚರಣೆಗೆ ಸೂಚಿಸಿದರು.

ಮನೆಗಳಿಗೆ ಸಂಬಂಧಿಸಿದ ಹಾನಿ ದಾಖಲಿಸುವಲ್ಲಿ ಯಾವುದೇ ಲೋಪವಾಗದಂತೆ ಜಿಲ್ಲಾಧಿಕಾರಿಗಳು ಖುದ್ದು ಮೇಲ್ವಿಚಾರಣೆ ವಹಿಸಬೇಕು. ವಸ್ತುಸ್ಥಿತಿ ಆಧರಿಸಿ, ಪರಿಹಾರ ಕೋರಿ ಬಂದ ಮನವಿಗಳನ್ನು ದಾಖಲಿಸಬೇಕು. ಮನೆ ಹಾನಿಗೆ ಸಂಬಂಧಿಸಿದಂತೆ ಹೆಚ್ಚುವರಿ ಪರಿಹಾರ ವಿತರಣೆಗೆ ಸುತ್ತೋಲೆ ಹೊರಡಿಸುವಂತೆ ವಿಪತ್ತು ನಿರ್ವಹಣೆ ಆಯುಕ್ತರಿಗೆ ಸೂಚನೆ ನೀಡಿದರು. ಇದನ್ನೂ ಓದಿ: 1 ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕ್ ಬಸ್‍ಗಳ ಸಂಚಾರ: KSRTC ಅಧ್ಯಕ್ಷ ಎಂ.ಚಂದ್ರಪ್ಪ

basavaraj bommai 6

ಬೆಳೆಹಾನಿ ಪರಿಹಾರ ವಿತರಣೆಯನ್ನೂ ತ್ವರಿತವಾಗಿ ವಿತರಿಸಬೇಕು. ಅಕ್ಟೋಬರ್ ತಿಂಗಳಿನಲ್ಲಿ ಸಂಭವಿಸಿದ ಬೆಳೆ ಹಾನಿಯನ್ನು ಸಹ ಕೂಡಲೇ ಜಂಟಿ ಸಮೀಕ್ಷೆ ನಡೆಸಿ, ಈ ತಿಂಗಳೊಳಗೆ ಪರಿಹಾರ ವಿತರಿಸಬೇಕು. ಕೆರೆಗಳು ಒಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

ಮೂಲಸೌಲಭ್ಯ ಹಾನಿಗೆ ಸಂಬಂಧಿಸಿದಂತೆ ಹಾನಿಯ ತೀವ್ರತೆಯನ್ನು ಆಧರಿಸಿ, ಸಿ ವರ್ಗ- ಎನ್‌ಡಿಆರ್‌ಎಫ್‌ ಮಾರ್ಗಸೂಚಿಯನ್ವಯ ದುರಸ್ತಿ, ಬಿ ವರ್ಗ- ಸರ್ಕಾರದಿಂದ ಹೆಚ್ಚುವರಿ ನೆರವು ಅಗತ್ಯವಿರುವ ಕಾಮಗಾರಿಗಳು, ಎ- ಸಂಪೂರ್ಣ ಪುನರ್ ನಿರ್ಮಾಣ ಅಗತ್ಯವಿರುವ ಕಾಮಗಾರಿಗಳು- ಎಂದು ಗುರುತಿಸಿ, ಪ್ರಸ್ತಾವನೆ ಸಲ್ಲಿಸಬೇಕು. ಸೇತುವೆಗಳ ನಿರ್ಮಾಣದ ವಿಷಯದಲ್ಲಿಯೂ ಆದ್ಯತೆಯನ್ನು ಗುರುತಿಸಿ, ಅದರಂತೆ ದುರಸ್ತಿ, ಮರುನಿರ್ಮಾಣ ಮಾಡಬೇಕು. ಕೆರೆಗಳು ದುರ್ಬಲವಾಗಿರುವುದು, ನೀರಿನ ಒತ್ತಡ ಹೆಚ್ಚಿರುವ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ, ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಇದನ್ನೂ ಓದಿ: ಮಂಗಳೂರಿನ SDPI, PFI ನಾಯಕರ ಮನೆ ಮೇಲೆ ದಾಳಿ – ಐವರು ಅರೆಸ್ಟ್‌

ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮ್‌ಗಳನ್ನು 24 ಗಂಟೆಗಳೊಳಗೆ ಸರಿಪಡಿಸಿ, ವಿದ್ಯುತ್ ಸಂಪರ್ಕ ಒದಗಿಸಬೇಕು. ದಿಢೀರ್ ಪ್ರವಾಹ ಉಂಟಾಗುವ ಹೊಳೆ, ಹಳ್ಳಗಳ ವ್ಯಾಪ್ತಿಯಲ್ಲಿ ಸೂಕ್ತ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಮಳೆ ಹಾನಿಯಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿಗಳು ಖುದ್ದು ಭೇಟಿ ನೀಡಿ, ಪರಿಹಾರ ವಿತರಣೆ, ಮಾಹಿತಿ ದಾಖಲಿಸುವಲ್ಲಿ ಲೋಪಗಳಾಗದಂತೆ ತಹಶೀಲ್ದಾರರಿಗೆ ಮಾರ್ಗಸೂಚಿ ನೀಡಬೇಕು. ಬೆಳೆ ಹಾನಿ ಹಾಗೂ ಮನೆ ಹಾನಿಗೆ ಪರಿಹಾರ ನೀಡಲು ಅನುದಾನದ ಕೊರತೆ ಇಲ್ಲ. ಮೂಲಸೌಕರ್ಯ ಹಾನಿಗೆ ಬಿಡುಗಡೆ ಮಾಡಲಾದ ಅನುದಾನಕ್ಕೆ ಕ್ರಿಯಾಯೋಜನೆ ರೂಪಿಸಿ, ಅನುಷ್ಠಾನಗೊಳಿಸುವಂತೆ ಸೂಚಿಸಿದರು.

Live Tv
[brid partner=56869869 player=32851 video=960834 autoplay=true]

TAGGED:Basavaraj Bommaibengalururainಬಸವರಾಜ ಬೊಮ್ಮಾಯಿಬೆಂಗಳೂರುಮಳೆ
Share This Article
Facebook Whatsapp Whatsapp Telegram

Cinema news

ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories

You Might Also Like

Chalavadi narayanaswamy
Bengaluru City

ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ

Public TV
By Public TV
59 seconds ago
CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
31 minutes ago
Delhi Capitals Net Bowler Sahil Parakh injured
Cricket

ಪ್ರಾಕ್ಟೀಸ್ ವೇಳೆ ಚೆಂಡು ಬಡಿದು ಡೆಲ್ಲಿ ಕ್ಯಾಪಿಟಲ್ಸ್ ಆಟಗಾರನಿಗೆ ಗಂಭೀರ ಗಾಯ – ಆಸ್ಪತ್ರೆಗೆ ರವಾನೆ

Public TV
By Public TV
50 minutes ago
Vinay Kulkarni 1 1
Bengaluru City

ಯೋಗೇಶ್ ಗೌಡ ಕೊಲೆ ಕೇಸ್ – ಜೀವಾವಧಿ ಶಿಕ್ಷೆ ತೀರ್ಪಿಗೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

Public TV
By Public TV
1 hour ago
Mallikarjun Kharge DK Shivakumar DK Suresh
Bengaluru City

ದೆಹಲಿ ಅಂಗಳದಲ್ಲಿ ಡಿಕೆ ಬ್ರದರ್ಸ್ ಪವರ್ ಗೇಮ್ – ಹೈಕಮಾಂಡ್ ಮುಂದೆ 2 ದಿನ, 2 ಭೇಟಿ, 2 ಖಡಕ್ ಷರತ್ತು!

Public TV
By Public TV
2 hours ago
HR Ranganath
Bengaluru City

AI ಕಾಲದಲ್ಲಿ ನಾಳೆ ಏನಾಗುತ್ತೆ ಅಂತ ಹೇಳೋದೇ ಕಷ್ಟ, ಜೋತಿಷ್ಯಿಗಳಂತೆ ಭವಿಷ್ಯವನ್ನು ಊಹೆ ಮಾಡ್ಬೇಕು: ಹೆಚ್.ಆರ್ ರಂಗನಾಥ್

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?