Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ FIR – ಆರೋಪಿ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ FIR – ಆರೋಪಿ ಅರೆಸ್ಟ್

Bengaluru City

ಮತಾಂತರ ನಿಷೇಧ ಕಾಯ್ದೆ ಜಾರಿ ಬಳಿಕ ರಾಜ್ಯದಲ್ಲಿ ಮೊದಲ FIR – ಆರೋಪಿ ಅರೆಸ್ಟ್

Public TV
Last updated: October 14, 2022 10:53 am
Public TV
Share
2 Min Read
Conversion
SHARE

ಬೆಂಗಳೂರು: ಮತಾಂತರ ನಿಷೇಧ ಕಾಯ್ದೆ (Religious Conversion Act) ಜಾರಿಯಾದ ಬಳಿಕ ರಾಜ್ಯದಲ್ಲಿ ಮೊದಲ ಪ್ರಕರಣ (FIR) ದಾಖಲಾಗಿದೆ. ಪ್ರೀತಿ ಮಾಡಿದ ಮೇಲೆ ಮದುವೆಯಾಗಬೇಕಾದ್ರೆ ಮತಾಂತರ ಆಗಲೇಬೇಕೆಂದು ಯುವತಿಯನ್ನ ಬಲವಂತವಾಗಿ ಮತಾಂತರ ಮಾಡಿದ್ದವನ ವಿರುದ್ಧ ರಾಜಧಾನಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಯಶವಂತಪುರ ಠಾಣಾ (Yeshwanthpur Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸೈಯದ್ ಮೊಯಿನ್ (24) ಮತಾಂತರ ನಿಷೇಧ ಕಾಯ್ದೆಯಲ್ಲಿ ಬಂಧಿತನಾದ ಮೊದಲ ಆರೋಪಿ. ಇದನ್ನೂ ಓದಿ: ಕೇರಳದಲ್ಲಿ ನರಬಲಿ ಕೇಸ್‌ – ಮಾಟ ಮಂತ್ರ ತಡೆಗೆ ಕಠಿಣ ಕಾನೂನು: ಕೇರಳ ಸರ್ಕಾರ ನಿರ್ಧಾರ

crime

ಪೊಲೀಸರಿಗೆ (Police) ಮೊದಲಿಗೆ ಇದೊಂದು ಮಿಸ್ಸಿಂಗ್ ಕೇಸ್ ಆಗಿತ್ತು, ತನಿಖೆ ವೇಳೆ ಮತಾಂತರ ಪ್ರಕರಣ ಎಂಬುದು ಬೆಳಕಿಗೆ ಬಂದಿದೆ.

ಏನಿದು ಪ್ರಕರಣ?
ಮತಾಂತರಕ್ಕೆ ಒಳಗಾದ ಯುವತಿ ಕುಟುಂಬ ಯಶವಂತಪುರ ಠಾಣಾ (Yeshwanthpur Police Station) ವ್ಯಾಪ್ತಿಯಲ್ಲಿ ಕಳೆದ 15 ವರ್ಷಗಳಿಂದ ವಾಸ ಮಾಡುತ್ತಿದ್ದರು. ಯುವತಿಯು ತಮ್ಮ ಪಕ್ಕದ ಏರಿಯಾದಲ್ಲೇ ಇದ್ದ ಯುವಕನನ್ನು ಪ್ರೀತಿಸುತ್ತಿದ್ದಳು. ಹಾಗಾಗಿ ಯುವಕ ಪ್ರೀತಿ (love) ಮಾಡಿದ ಮೇಲೆ ಮದುವೆಯಾಗಬೇಕಾದರೆ ಮತಾಂತರವಾಗಲೇಬೇಕು ಎಂದು ಒತ್ತಡ ಹೇರಿದ್ದಾನೆ. ಯುವಕನ ಒತ್ತಡದಿಂದ ಯುವತಿ ಮತಾಂತರಗೊಂಡಿದ್ದಾಳೆ.

Conversion 2

ಇದೇ ತಿಂಗಳ ಅಕ್ಟೋಬರ್ 5ರಂದು ಯುವತಿ ಕಾಣೆಯಾಗಿದ್ದಳು. ಈ ಬಗ್ಗೆ ಪೋಷಕರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಯುವತಿಯನ್ನು ಪತ್ತೆಹಚ್ಚಿ ಕರೆತರುವಾಗ ಆಕೆ ಬುರ್ಕಾ ಧರಿಸಿದ್ದನ್ನು ಕಂಡು ಅನುಮಾನಗೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕವೇ ಯಶವಂತಪುರ ಠಾಣೆ ವ್ಯಾಪ್ತಿಯ ಮಸೀದಿಗೆ ಕರೆದೊಯ್ದು ಮತಾಂತರ ಮಾಡಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.

ಸದ್ಯ ಯಶವಂತಪುರ ಠಾಣೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಸೆಕ್ಷನ್ 5ರ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಸೈಯದ್ ಮೊಯಿನ್ (24)ನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ರಷ್ಯಾದಿಂದ ದೆಹಲಿಗೆ ಬಂದ ವಿಮಾನದಲ್ಲಿ ಬಾಂಬ್ ಬೆದರಿಕೆ – ದೆಹಲಿ ಏರ್‌ಪೋರ್ಟ್ ಹೈ ಅಲರ್ಟ್

ಮತಾಂತರ ಕಾಯ್ದೆ ಎಂದರೇನು?
ಯಾವುದೇ ಧರ್ಮದ ವ್ಯಕ್ತಿ ಮತ್ತೊಂದು ಧರ್ಮಕ್ಕೆ ಮತಾಂತರವಾಗಬೇಕಾದರೇ ಕಾನೂನುಬದ್ಧವಾಗಿರಬೇಕು. ಅದಕ್ಕಾಗಿ ಮೊದಲು ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಬೇಕು. ನಂತರ ಜಿಲ್ಲಾಧಿಕಾರಿಗಳು ಮತಾಂತರದ ಬಗ್ಗೆ ಪೋಷಕರು ಹಾಗೂ ಆಪ್ತರಿಂದ ಹೇಳಿಕೆ ಪಡೆಯುತ್ತಾರೆ. ಬಳಿಕ 30 ದಿನಗಳ ಗಡುವು ನೀಡುತ್ತಾರೆ. ಒಂದು ವೇಳೆ ಯಾವುದೇ ಒತ್ತಡವಿಲ್ಲದೇ ತಮ್ಮ ಇಷ್ಟದಂತೆ ಮತಾಂತರವಾಗುತ್ತಿದ್ದರೆ ಡಿಸಿ ಅನುಮತಿ ನೀಡುತ್ತಾರೆ. ಒತ್ತಡ ಅಥವಾ ಆಮಿಷಕ್ಕೆ ಬಲಿಯಾಗಿ ಮತಾಂತರವಾದರೆ ಕಾನೂನು ಕ್ರಮ ಜರುಗಿಸುತ್ತಾರೆ. ಮತಾಂತರಕ್ಕೆ ಸಹಾಯ ಮಾಡುವ ಎಲ್ಲಾ ವ್ಯಕ್ತಿಗಳ ಮೇಲೂ ಕ್ರಮ ತೆಗೆದುಕೊಳ್ಳಲಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Bengaluru city policeGovernment of KarnatakamosqueReligious Conversion ActYeshwanthpur Police Stationಪೊಲೀಸ್ಬೆಂಗಳೂರುಮತಾಂತರ ನಿಷೇಧ ಕಾಯ್ದೆ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
44 minutes ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
51 minutes ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
59 minutes ago
Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
1 hour ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
1 hour ago
hassan women
Chikkamagaluru

ಪ್ರಿಯಕರನ ಜೊತೆ ಸಂಸಾರ ಮಾಡಲು ಮಾಸ್ಟರ್ ಪ್ಲ್ಯಾನ್‌ – ಪ್ರಿಯಾಂಕಳ ರಹಸ್ಯ ಭೇದಿಸಿದ ಪೊಲೀಸರು!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?