ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮವಾಗಿ ರಾಜ್ಯದಲ್ಲಿ ಮಳೆ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ ಆಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 18ರ ವರೆಗೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: 5 ವರ್ಷದ ಬಳಿಕ ಮತ್ತೆ ದಾಖಲೆಯತ್ತ ಬೆಂಗಳೂರು ಮಹಾಮಳೆ!
ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ಗದಗ ರಾಯಚೂರು, ಬೀದರ್, ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಹಾಗೂ ದಕ್ಷಿಣ ಒಳನಾಡಿಗೆ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಚಿತ್ರದುರ್ಗ, ಬಳ್ಳಾರಿ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯಾದ್ಯಂತ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ