ಶಿವಮೊಗ್ಗ: ಅಯೋಧ್ಯೆಯಲ್ಲಿ ರಾಮ ಮಂದಿರ (Ram Mandir) ನಿರ್ಮಾಣ ಹಿಂದೂ ಸಮಾಜದ ಬಹುದಿನದ ಕನಸು. ಆ ಕನಸು ನನಸಾಗುತ್ತಿದೆ. ಆದರೆ ರಾಷ್ಟ್ರದ್ರೋಹಿ ಪಿಎಫ್‍ಐ (PFI) ಸಂಘಟನೆಯ ಕುತಂತ್ರ ಬೆಳಕಿಗೆ ಬಂದಿದೆ. ಇದು ಹಿಂದೂ ಸಮಾಜಕ್ಕೆ ದೊಡ್ಡ ಆಘಾತ ಉಂಟು ಮಾಡಿದೆ. ರಾಮ ಮಂದಿರವನ್ನು ಪಿಎಫ್‍ಐ ಅಲ್ಲ, ರಾವಣ (Ravana), ಜಿನ್ನಾ (Muhammad Ali Jinnah) ವಂಶಸ್ಥರಿಂದಲೂ ಸ್ಫೋಟಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ K.S Eshwarappa) ಗುಡುಗಿದ್ದಾರೆ.
ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಮ ಮಂದಿರ ಸ್ಫೋಟ ವಿಷಯವನ್ನು ಪಿಎಫ್‍ಐನವರು ಕನಸಿನಲ್ಲೂ ನೆನಪು ಮಾಡಿಕೊಳ್ಳುವುದು ಬೇಡ. ಪ್ರಜಾಪ್ರಭುತ್ವದ ಬಗ್ಗೆ, ಸಂವಿಧಾನದ ಬಗ್ಗೆ ಗೌರವ, ನಂಬಿಕೆ ಇರುವ ಪ್ರತಿಯೊಬ್ಬರೂ ಪಿಎಫ್‍ಐ ಹೇಳಿಕೆಯನ್ನು ಖಂಡಿಸಬೇಕು. ಅಯೋಧ್ಯೆ ರಾಮ ಜನಿಸಿದ ಸ್ಥಳ. ಹೀಗಾಗಿಯೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾಮಗಾರಿ ಬಹಳ ವೇಗವಾಗಿ ನಡೆಯುತ್ತಿದೆ. ರಾಮ ಮಂದಿರ ಉದ್ಘಾಟನೆಗಾಗಿ ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಇಂತಹ ಸಂದರ್ಭದಲ್ಲಿ ದೇಶದ್ರೋಹಿಗಳು ಸ್ಫೋಟಕ್ಕೆ ಸಂಚು ರೂಪಿಸಿದ್ದ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ ಎಂದು ಆಘಾತ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಂತಾರ ಎಫೆಕ್ಟ್ – ದೈವನರ್ತಕರಿಗೆ ಸರ್ಕಾರದಿಂದ ಗುಡ್ ನ್ಯೂಸ್
ಇಂತಹ ದೇಶದ್ರೋಹಿಗಳನ್ನು ಕೇವಲ ಜೈಲಿಗೆ ಕಳುಹಿಸಿದರಷ್ಟೇ ಸಾಲದು. ಸಂವಿಧಾನಕ್ಕೆ ತಿದ್ದುಪಡಿ ತಂದು ಕಠಿಣ ಕಾನೂನು ಜಾರಿಗೊಳಿಸಬೇಕು. ಅಂತಹ ಕಠಿಣ ಕಾನೂನು ಶೀಘ್ರವಾಗಿ ಜಾರಿಗೆ ತರುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಒತ್ತಾಯಿಸುತ್ತೇನೆ. ಹೊಸ ರೂಪದ ಕಾನೂನು ಜಾರಿಗೆ ತರುವ ಮೂಲಕ ದೇಶ ದ್ರೋಹಿಗಳಿಗೆ ಭಯ ಹುಟ್ಟಿಸಬೇಕು. ತುರ್ತಾಗಿ ಲೋಕಸಭೆ ಅಧಿವೇಶನ ಕರೆದು ನೂತನ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ