ನ.1ರಂದು ನಟ ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಸಿಎಂ ಬೊಮ್ಮಾಯಿ

Public TV
1 Min Read
puneeth r

ವರ್ ಸ್ಟಾರ್ ಪುನೀತ್ ರಾಜ್‌ಕುಮಾರ್(Puneeth Rajkumar) ಅಗಲಿ ಇದೇ ಅಕ್ಟೋಬರ್ ಅಂತ್ಯಕ್ಕೆ ಒಂದು ವರ್ಷವಾಗಲಿದೆ. ಚಿತ್ರರಂಗಕ್ಕೆ ಅವರು ನೀಡಿರುವ ಕೊಡುಗೆ, ಸಾಕಷ್ಟು ಜನರ ಸಂಕಷ್ಟಕ್ಕೆ ಸಾಥ್ ಕೊಟ್ಟ ಪುನೀತ್‌ಗೆ ಕರ್ನಾಟಕ ರತ್ನ ಪ್ರಶಸ್ತಿ (Karnataka Ratna Award) ಪ್ರದಾನದ ಕುರಿತು ಸಿಎಂ ಬೊಮ್ಮಾಯಿ ಅವರು ಮಾತನಾಡಿದ್ದಾರೆ.

appu bommai

ಚಿತ್ರರಂಗದಲ್ಲಿ ಸಿನಿಮಾಗಳ ಮೂಲಕ ಹೈಪ್ ಕ್ರಿಯೇಟ್ ಮಾಡಿದ್ದ ಅಪ್ಪು ಬಳಿಕ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಗುರುತಿಸಿಕೊಂಡಿದ್ದರು. ಅಪ್ಪು ಸಾಧನೆಯನ್ನ ಗಮನಿಸಿ, ಕರ್ನಾಟಕ ರತ್ನ ಪ್ರಶಸ್ತಿ ಕೊಡುವುದಾಗಿ ಈ ಹಿಂದೆಯೇ ಘೋಷಣೆ ಮಾಡಲಾಗಿತ್ತು. ಅದರಂತೆ ಇಂದು ಸಿಎಂ ಬೊಮ್ಮಾಯಿ(Cm Basavaraj Bommai) ಅವರು ನವೆಂಬರ್ 1ರಂದು ವಿಧಾನಸೌಧದಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡುವುದಾಗಿ ತಿಳಿಸಿದ್ದಾರೆ. ಈ ಸಭೆಯಲ್ಲಿ ರಾಜ್‌ಕುಮಾರ್ ಕುಟುಂಬದ ಸದಸ್ಯರು ಭಾಗಿಯಾಗಿದ್ದರು.

puneeth rajkumar 1

ವಿಧಾನಸೌಧದ ಮೆಟ್ಟಿಲುಗಳ ಮೇಲೆ ನವೆಂಬರ್ 1ರಂದು ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. 2019ರ ನಂತರ ಯಾರಿಗೂ ಕೂಡ `ಕರ್ನಾಟಕ ರತ್ನ ಪ್ರಶಸ್ತಿ’ ಕೊಟ್ಟಿರಲಿಲ್ಲ. ಈಗ 8 ಜನರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಲಾಗಿದೆ. ಎಲ್ಲರ ಮನದಾಳದಲ್ಲಿ ಚಿರಸ್ಥಾಯಿಯಾಗಿ ಉಳಿದಿರುವ ಪುನೀತ್ ನಿಜವಾಗಿಯೂ ಕರ್ನಾಟಕ ರತ್ನವಾಗಿದ್ದಾರೆ. ಯುವಜನತೆಗೆ ಅಪ್ಪು ಸದಾ ಪ್ರೇರಣೆ ನೀಡುತ್ತಿದ್ದರು. ಇದನ್ನೂ ಓದಿ:ದೊಡ್ಮನೆಗೆ ಮತ್ತೆ ಎಂಟ್ರಿ ಕೊಡಲಿದ್ದಾರೆ ಸೋನು ಶ್ರೀನಿವಾಸ್ ಗೌಡ

Industry Kannadigas Foreign Investment Hubli CM Basavaraj Bommai

ಇನ್ನೂ ಪುನೀತ್ ಹೆಸರು ಚಿರಸ್ಥಾಯಿಯಾಗಬೇಕು, ಪ್ರೇರಣೆಯಾಗಬೇಕು ಎಂದು ಈ ಪುರಸ್ಕಾರ ನೀಡಲಾಗುತ್ತಿದೆ. ಹಲವಾರು ಶ್ರೇಷ್ಠ ಸಾಹಿತಿಗಳು, ಮುಖ್ಯ ಅತಿಥಿಗಳು, ನಟರು, ಸಚಿವರು, ಶಾಸಕರು, ಹಿರಿಯ ರಾಜಕಾರಣಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅರ್ಥಪೂರ್ಣ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸಿಎಂ ಮಾತನಾಡಿದ್ದಾರೆ. ನವೆಂಬರ್ 1ರ ಬಳಿಕ ಬೆಂಗಳೂರಿನಲ್ಲಿ ಮೂರು ಕಾರ್ಯಕ್ರಮ ಮಾಡಲಿದ್ದೇವೆ. 10 ದಿನಗಳ ಅಂತರದಲ್ಲಿ ಬೆಂಗಳೂರಿನ ಮೂರು ಭಾಗಗಳಲ್ಲಿ ಅಪ್ಪು ಕಾರ್ಯಕ್ರಮ ಮಾಡಲು ತೀರ್ಮಾನ ಮಾಡಲಿದ್ದೇವೆ ಎಂದು ಈ ವೇಳೆ ಸಿಎಂ ಬೊಮ್ಮಾಯಿಯವರು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *