ಅಧಿಕಾರ ಚುಕ್ಕಾಣಿಗೂ ಮುನ್ನ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ಖರ್ಗೆ

Public TV
2 Min Read
Mallikarjun Kharge 2

ನವದೆಹಲಿ: ಕಾಂಗ್ರೆಸ್ (Congress) ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುವ ಮುನ್ನ ಕಾಂಗ್ರೆಸ್‍ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಇಂದು ರಾಜ್‍ಘಾಟ್‍ನಲ್ಲಿ (Rajghat) ಮಹಾತ್ಮ ಗಾಂಧಿ (Mahatma Gandhi) ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ನವದೆಹಲಿಯಲ್ಲಿ (New Delhi) ಇಂದು ನಡೆಯುವ ಸಮಾರಂಭದಲ್ಲಿ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಅವರು, 24 ವರ್ಷಗಳಲ್ಲೇ ಮೊದಲ ಬಾರಿಗೆ ಗಾಂಧಿಯೇತರ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪ್ರಮಾಣಪತ್ರ ವಿತರಿಸಲಿದ್ದಾರೆ. ಅಲ್ಲದೇ ಈ ಕಾರ್ಯಕ್ರಮದಲ್ಲಿ ಭಾರತ್ ಜೋಡೋ (Bharat Jodo Yatra) ಪಾದಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿ ಅವರು ಕೂಡ ಪಾಲ್ಗೊಳ್ಳಲಿದ್ದಾರೆ.

Mallikarjun Kharge And Sonia Gandhi

ಎಐಸಿಸಿ ಅಧ್ಯಕೀಯ ಚುನಾವಣೆಯಲ್ಲಿ ಒಟ್ಟು 9,385 ಮತಗಳು ಚಲಾವಣೆಗೊಂಡಿದ್ದವು. ಇದರಲ್ಲಿ 415 ಮತಗಳನ್ನು ಅಮಾನ್ಯಗೊಳಿಸಲಾಗಿತ್ತು. ಈ ಪೈಕಿ 7,897 ಮತಗಳನ್ನು ಪಡೆದ ಮಲ್ಲಿಕಾರ್ಜುನ ಖರ್ಗೆ ಜಯಭೇರಿ ಭಾರಿಸಿದ್ದಾರೆ. ಪ್ರತಿಸ್ಪರ್ಧಿಯಾಗಿದ್ದ ಶಶಿ ತರೂರ್ 1,072 ಮತಗಳನ್ನು ಪಡೆದು ಸೋಲನ್ನು ಅನುಭವಿಸಿದರು.

ಗಾಂದಿ ಕುಟುಂಬಕ್ಕೆ ಆಪ್ತರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು, ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಕೇಂದ್ರ ಕ್ಯಾಬಿನೆಟ್ ಸಚಿವ- ಕಾರ್ಮಿಕ ಮತ್ತು ಉದ್ಯೋಗ, ರೈಲ್ವೆ ಮತ್ತು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರಗಳಲ್ಲಿ ವಿವಿಧ ಖಾತೆಗಳನ್ನು ಹೊಂದಿದ್ದಲ್ಲದೇ ಮತ್ತು ಕರ್ನಾಟಕ ಕಾಂಗ್ರೆಸ್‍ನ ಅಧ್ಯಕ್ಷರೂ ಮತ್ತು ರಾಜ್ಯ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯನಿರ್ವಹಿಸಿದ್ದಾರೆ. ಇಷ್ಟಾದರೂ ಮನೋಧರ್ಮ ಮತ್ತು ಸ್ವಭಾವದಿಂದ ಸಮಚಿತ್ತರಾಗಿರುವ ಖರ್ಗೆ ಅವರು, ಯಾವುದೇ ರಾಜಕೀಯ ವಿವಾದಕ್ಕೀಡಾಗಿಲ್ಲ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *