ಲೈಗರ್ (Ligar) ಸಿನಿಮಾಗೆ ಸಂಬಂಧಿಸಿದ ವಿವಾದ ಇದೀಗ ಜೀವ ಬೆದರಿಕೆ ಹಂತಕ್ಕೂ ಹೋಗಿದ್ದು, ತಮಗೆ ಜೀವ ಬೆದರಿಕೆ ಇದೆ ಎಂದು ನಿರ್ದೇಶಕ ಪುರಿ ಜಗನ್ನಾಥ್ (Puri Jagannath) ಪೊಲೀಸ್ ಠಾಣೆ ಮೆಟ್ಟಿಲು ಏರಿದ್ದಾರೆ. ಸಿನಿಮಾ ವಿತರಕರಿಂದ ತಮಗೆ ಜೀವ ಬೆದರಿಕೆ ಇದೆ ಎಂದು ಚೆನ್ನೈನ ಜೂಬ್ಲಿ ಹಿಲ್ಸ್ ಪೊಲೀಸ್ ಠಾಣೆಗೆ ದೂರು (Complaint) ಸಲ್ಲಿಸಿದ್ದಾರೆ. ಆಗಸ್ಟ್ 25ಕ್ಕೆ ಬಿಡುಗಡೆ ಆಗಿದ್ದ ಲೈಗರ್ ಸಿನಿಮಾ ಭಾರೀ ಸೋಲು ಕಂಡಿತ್ತು. ವಿತರಕರಿಗೆ ಭಾರೀ ನಷ್ಟವನ್ನುಂಟು ಮಾಡಿತ್ತು.
ಪುರಿ ಜಗನ್ನಾಥ್ ಮತ್ತು ವಿಜಯ್ ದೇವರಕೊಂಡ (Vijay Devarakonda) ಕಾಂಬಿನೇಷನ್ ನ ಈ ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಳ್ಳಲಾಗಿತ್ತು. ಆ ಕಾರಣದಿಂದಾಗಿಯೇ ಅದ್ಧೂರಿ ಪ್ರಚಾರ ಮತ್ತು ಭಾರೀ ಸಂಖ್ಯೆಯ ಥಿಯೇಟರ್ ನಲ್ಲಿ ಚಿತ್ರವನ್ನು ಬಿಡುಗಡೆ ಮಾಡಲಾಯಿತು. ತುಂಬಾ ನಿರೀಕ್ಷೆಯ ಸಿನಿಮಾ ಎನ್ನುವ ಕಾರಣಕ್ಕಾಗಿ ದೊಡ್ಡ ಮೊತ್ತದ ಹಣಕೊಟ್ಟು ವಿತರಕರು ಈ ಸಿನಿಮಾವನ್ನು ಖರೀದಿಸಿದ್ದರು. ಆದರೆ, ಸಿನಿಮಾ ಸೋಲು ಕಂಡಿತ್ತು. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ
ನಷ್ಟಕ್ಕೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ವಿತರಕರು ಪುರಿ ಜಗನ್ನಾಥ್ ಮನೆಯ ಮುಂದೆ ಧರಣಿ ಕೂರುವುದಾಗಿ ಹೇಳಿದ್ದರು. ಅದಕ್ಕೂ ಪ್ರತಿಕ್ರಿಯೆ ನೀಡಿದ್ದ ಪುರಿ, ಇಂತಹ ಬೆದರಿಕೆಗೆ ನಾನು ಬಗ್ಗುವುದಿಲ್ಲ. ಹೆದರುವುದೂ ಇಲ್ಲ ಎಂದಿದ್ದರು. ಇದೀಗ ಜೂಬ್ಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ವಿತರಕರಾದ ವರಂಗಲ್ ಶ್ರೀನು ಹಾಗೂ ಫೈನಾನ್ಸಿಯರ್ ಶೋಭನ್ ವಿರುದ್ಧ ದೂರು ದಾಖಲಿಸಿದ್ದಾರೆ.