ಯೋಗಿ, ಮೋದಿ ವಿರುದ್ಧ ದ್ವೇಷದ ಭಾಷಣ – ಅಜಂ ಖಾನ್‍ಗೆ 3 ವರ್ಷ ಜೈಲು

Public TV
1 Min Read
azam khan web

ಲಕ್ನೋ: ದ್ವೇಷದ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್‍ಗೆ (Azam Khan) ಕೋರ್ಟ್ 25 ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು (Jail) ಶಿಕ್ಷೆಯನ್ನು ವಿಧಿಸಿದೆ.

2019ರಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹಾಗೂ ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಅಜಂ ಖಾನ್ ದ್ವೇಷದ ಭಾಷಣ ಮಾಡಿದ್ದರು. ಈ ಆರೋಪದ ಹಿನ್ನೆಲೆಯಲ್ಲಿ ಇಂದು ರಾಂಪುರ ನ್ಯಾಯಾಲಯ (Court) ದೋಷಿ ಎಂದು ತೀರ್ಪು ನೀಡಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದೆ.

Yogi Adityanath Narendra Modi 1

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ (ಎರಡು ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕಾರಣವಾಗುವ ಹೇಳಿಕೆ) ಮತ್ತು ಜನತಾ ಪ್ರಾತಿನಿಧ್ಯ ಕಾಯಿದೆ 1951ರ ಸೆಕ್ಷನ್ 125ರ ಅಡಿಯಲ್ಲಿ ಅಜಂ ಖಾನ್ ಅವರನ್ನು ದೋಷಿ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ಪಿಒಕೆ ಮರಳಿ ಪಡೆದಾಗಲೇ ನಮ್ಮ ಸಂಕಲ್ಪ ಪೂರ್ಣಗೊಳ್ಳುತ್ತದೆ: ರಾಜನಾಥ್ ಸಿಂಗ್

court getty

ಅಜಂ ಖಾನ್‍ಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದ್ದರಿಂದ ಶಾಸಕ ಸ್ಥಾನವನ್ನು ಕಳೆದುಕೊಳ್ಳಲಿದ್ದಾರೆ. ಸಮಾಜವಾದಿ ಪಕ್ಷದ ನಾಯಕರಾದ ಅಜಂ ಖಾನ್ ಭ್ರಷ್ಟಾಚಾರ ಮತ್ತು ಕಳ್ಳತನ ಸೇರಿದಂತೆ ಸುಮಾರು 90 ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ವಂಚನೆ ಪ್ರಕರಣದಲ್ಲಿ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. ಇದನ್ನೂ ಓದಿ: ನ.11ಕ್ಕೆ ಬೆಂಗಳೂರಿಗೆ ಮೋದಿ – ಅಂದು ಏನೇನು ಕಾರ್ಯಕ್ರಮ ನಡೆಯುತ್ತೆ?

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *