IPC, CRPC ಸುಧಾರಣೆಗೆ ಶೀಘ್ರದಲ್ಲೇ ನೂತನ ಕರಡು ಮಂಡನೆ – ಶಾ ಹೇಳಿಕೆ

Public TV
2 Min Read
Amit Shah 2

ಸೂರಜ್‌ಕುಂಡ್: ಭಾರತೀಯ ದಂಡ ಸಂಹಿತೆ (IPC) ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಗಳಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಶೀಗ್ರವೇ ಸದನದಲ್ಲಿ ಹೊಸ ಕರಡನ್ನು ಮಂಡಿಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ.

ಹರಿಯಾಣದ ಸೂರಜ್‌ಕುಂಡ್‌ನಲ್ಲಿ ನಡೆಯುತ್ತಿರುವ ಎರಡು ದಿನಗಳ ಚಿಂತನ ಶಿಬಿರದಲ್ಲಿ ಮಾತನಾಡಿದ ಅವರು, ಭಾರತೀಯ ದಂಡ ಸಂಹಿತೆ (IPC) ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಸುಧಾರಿಸುವ ನಿಟ್ಟಿನಲ್ಲಿ ಹಲವು ಸಲಹೆಗಳನ್ನು ಸ್ವೀಕರಿಸಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಎರಡೂ ಶಾಸನಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಸದನದಲ್ಲಿ ಹೊಸದಾಗಿ ಕರಡು ಮಂಡಿಸಲಾಗುವುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರೆನ್ಸಿ ನೋಟುಗಳಲ್ಲಿರಲಿ ಗಣೇಶ, ಲಕ್ಷ್ಮೀ ಚಿತ್ರ – ಮೋದಿಗೆ ಕೇಜ್ರಿವಾಲ್ ಪತ್ರ

ಐಪಿಸಿ, ಸಿಆರ್‌ಪಿಸಿ ಸುಧಾರಣೆಗಳಿಗಾಗಿ ಸಾಕಷ್ಟು ಸಮಯ ವಿನಿಯೋಗಿಸಿದ್ದು, ಆಳವಾಗಿ ಅಧ್ಯಯನ ಮಾಡಲಾಗುತ್ತಿದೆ. ಭಾರತದಲ್ಲಿ ಕ್ರಿಮಿನಲ್ ಕಾನೂನು (Law) ಸುಧಾರಣೆ ಶಿಫಾರಸ್ಸು ಮಾಡುವಂತೆ ಗೃಹ ಸಚಿವರು 2020ರ ಮೇನಲ್ಲಿ ಐವರು ಸದಸ್ಯರ ಸಮಿತಿಯನ್ನು ರಚಿಸಿದ್ದರು. ದೆಹಲಿಯ ಕಾನೂನು ವಿಶ್ವವಿದ್ಯಾಲಯದ (Delhi Law University) ಕುಲಪತಿ ಪ್ರೊ. ರಣಬೀರ್ ಸಿಂಗ್ ಅವರು ಸಮಿತಿಯ ನೇತೃತ್ವ ವಹಿಸಿದ್ದಾರೆ. ಇದನ್ನೂ ಓದಿ: ದುಷ್ಕರ್ಮಿಗಳಿಂದ 52 ಅಡಿಕೆ ಗಿಡಗಳ ನಾಶ- ಜಮೀನಿನಲ್ಲಿಯೇ ಹೊರಳಾಡಿ ರೈತ ಕಣ್ಣೀರು

FotoJet 3 56

ಸಮಿತಿ ರಚಿಸಿದಾಗ ವೈವಿಧ್ಯತೆ ಮತ್ತು ಪಾರದರ್ಶಕತೆ ಕೊರತೆಯ ಹಿನ್ನೆಲೆಯಲ್ಲಿ ವಕೀಲರು, ನಿವೃತ್ತ ನ್ಯಾಯಮೂರ್ತಿಗಳು, ಶಿಕ್ಷಣ ತಜ್ಞರು ಆತಂಕ ವ್ಯಕ್ತಪಡಿಸಿದ್ದರು. ಇದಕ್ಕೆ ಸಮಿತಿಯು ಎಲ್ಲಾ ರೀತಿಯ ಅಭಿಪ್ರಾಯ ಮತ್ತು ಸಲಹೆಗಳನ್ನು ಗೌರವಿಸುವುದಾಗಿ ಹೇಳಿತ್ತು. ಪಾರದರ್ಶಕತೆಯ ದೃಷ್ಟಿಯಿಂದ ಎಲ್ಲಾ ರೀತಿಯ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದಾಗಿ ಹೇಳಿತ್ತು. ಹಾಗಾಗಿ ಸೂಕ್ತ ಸಲಹೆಗಳನ್ನು ಸ್ವೀಕರಿಸಿದ್ದು, ಶೀಘ್ರದಲ್ಲೇ ಕರಡು ಮಂಡಿಸುವುದಾಗಿ ಅವರು ಘೋಷಿಸಿದ್ದಾರೆ.

ಪ್ರತಿ ರಾಜ್ಯದಲ್ಲೂ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೇಂದ್ರ ಆರಂಭಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಅಮಿತ್ ಶಾ ಮಾಹಿತಿ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *