ಬೆಂಗಳೂರು: ಸ್ವಿಗ್ಗಿ ಡೆಲಿವರಿ ಬಾಯ್ (Swiggy Deliver Boy)ಗೆ ಚಾಕುವಿನಿಂದ ಚುಚ್ಚಿ ಸುಲಿಗೆ ಮಾಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಜ್ಜಾದ್ ಖಾನ್ ಹಾಗೂ ಸೈಫ್ ಮೌಲಾನ ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ಒಬ್ಬಂಟಿಯಾಗಿ ತೆರಳುವ ಸ್ವಿಗ್ಗಿ ಡೆಲಿವರಿ ಬಾಯ್ಸ್ ಗಳನ್ನೇ ಟಾರ್ಗೆಟ್ ಮಾಡ್ತಿದ್ದರು.
ಅಕ್ಟೋಬರ್ 10ರಂದು ಮೊಬೈಲ್ (Mobile) ಗಾಗಿ ಆರೋಪಿಗಳು ಚಾಕುವಿನಿಂದ ಇರಿದಿದ್ದರು. ಆರೋಪಿಗಳು ಹಲವು ಪ್ರಕರಣಗಳಲ್ಲಿ ಭಾಗಿಯಾಗಿರೋದು ತನಿಖೆ ವೇಳೆ ಬಹಿರಂಗವಾಗಿದೆ. ಚಾಮರಾಜಪೇಟೆ, ವಿಲ್ಸನ್ ಗಾರ್ಡನ್, ಕಲಾಸಿಪಾಳ್ಯ ವ್ಯಾಪ್ತಿಯಲ್ಲಿ ಕೂಡ ಆರೋಪಿಗಳು ಸುಲಿಗೆ ಮಾಡಿದ್ದರು.
ಮೊಬೈಲ್ ಸುಲಿಗೆ ಪ್ರಕರಣ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.