Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ.6 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ – ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನ.6 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ – ಡಿಕೆಶಿ

Bengaluru City

ನ.6 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ – ಡಿಕೆಶಿ

Public TV
Last updated: November 2, 2022 5:29 pm
Public TV
Share
5 Min Read
DKSHI 1
SHARE

ಬೆಂಗಳೂರು: ಎಐಸಿಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಇದೇ ನವೆಂಬರ್‌ 6 ರಂದು ಬೆಂಗಳೂರಿಗೆ (Bengaluru) ಅದ್ಧೂರಿ ಸ್ವಾಗತ ಕೋರಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (D.K.Shivakumar) ತಿಳಿಸಿದ್ದಾರೆ.

ಕೆಪಿಸಿಸಿ (KPCC) ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿಸಿ ಅವರು ಮಾತನಾಡಿದರು. ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಮೊದಲ ಬಾರಿಗೆ ಇದೇ 6 ರಂದು ಆಗಮಿಸುತ್ತಿದ್ದಾರೆ. ಅವರು ದೇಶದಲ್ಲಿ ಬೇರೆ ರಾಜ್ಯಗಳಿಗೆ ಪ್ರವಾಸ ಹೋಗುವ ಮುನ್ನ ನಮ್ಮ ರಾಜ್ಯಕ್ಕೆ ಆಗಮಿಸಬೇಕು. ನಾವೆಲ್ಲ ನಾಯಕರು ಚರ್ಚೆ ಮಾಡಿ ನವೆಂಬರ್ 6 ರಂದು ರಾಜ್ಯಕ್ಕೆ ಆಗಮಿಸುವಂತೆ ಮನವಿ ಮಾಡಿದ್ದೇವೆ. ಅವರು 6 ರಂದು ಬೆಳಗ್ಗೆ 10:50 ಗಂಟೆಗೆ ಆಗಮಿಸುತ್ತಾರೆ. ನಂತರ ಮಧ್ಯಾಹ್ನ 2:35ಕ್ಕೆ ಅರಮನೆ ಮೈದಾನದಲ್ಲಿ ‘ಸರ್ವೋದಯ ಸಮಾವೇಶ’ ಹಮ್ಮಿಕೊಂಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾವಿರಾರು ಮಂದಿ ಕಾರ್ಯಕರ್ತರು, ನಾಯಕರು ಸ್ವಾಗತ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಜಿಮ್‌ ಸಮಾವೇಶ – ಮೊದಲ ದಿನವೇ ಕರ್ನಾಟಕದಲ್ಲಿ ಬಂಪರ್ ಹೂಡಿಕೆ

Mallikarjun Kharge 3

ರಾಜ್ಯದ ವಿವಿಧ ಮೂಲೆಯಿಂದ ಜನ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮಧ್ಯಾಹ್ನ ಹಮ್ಮಿಕೊಂಡಿದ್ದೇವೆ. ರಾಜ್ಯದ ಎಲ್ಲ ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಆಗಮಿಸಲಿದ್ದಾರೆ. ಅವರು ಎರಡು ದಿನ ಮುಂಚಿತವಾಗಿ ಆಗಮಿಸಲಿದ್ದಾರೆ. ರಾಜ್ಯದ ವಿವಿಧ ನಾಯಕರ ಜತೆ ಒಂದು ವಾರ ಸಭೆ ನಡೆಸಲಿದ್ದಾರೆ.

ಖರ್ಗೆ ಅವರು 1972ರಲ್ಲಿ ವಿಧಾನಸಭೆಗೆ ಪ್ರವೇಶಿಸಿದ್ದು, 50 ವರ್ಷಗಳ ಸುದೀರ್ಘ ಸೇವೆ ಮಾಡಿದ್ದಾರೆ. ಇಂತಹ ಹಿರಿಯ ನಾಯಕರು ನಮ್ಮ ರಾಜ್ಯದಿಂದ ಈ ಸ್ಥಾನಕ್ಕೆ ಆಯ್ಕೆ ಆಗಿರುವುದು ನಮ್ಮ ಹೆಮ್ಮೆ. ಹೀಗಾಗಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಮುಂದಾಗಿದ್ದೇವೆ. ಪಕ್ಷ ಮಾತ್ರವಲ್ಲದೆ ಹಲವು ಸಂಘಟನೆಗಳು ಕೂಡ ಸ್ವಾಗತ ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದಾರೆ. ಈ ಸರ್ವೋದಯ ಸಮಾವೇಶಕ್ಕೆ ಪ್ರತಿ ಗ್ರಾಮ ಪಂಚಾಯ್ತಿಯಿಂದ, ವಾರ್ಡ್ ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಆಗಮಿಸಬೇಕು. ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಕಿಸಾನ್ ಘಟಕ, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಘಟಕ ಸೇರಿದಂತೆ ನಾನಾ ಘಟಕಗಳ ಮುಖಂಡರು ಈ ಕಾರ್ಯಕ್ರಮಕ್ಕೆ ಆಗಮಿಸಬೇಕು. ಖರ್ಗೆ ಅವರ ಮಾರ್ಗದರ್ಶನದ ಮಾತು, ಸಂದೇಶವನ್ನು ಹಳ್ಳಿ ಹಳ್ಳಿಗೆ ಕೊಂಡೊಯ್ಯಬೇಕು. ಜಿಲ್ಲಾ, ತಾಲೂಕು, ರಾಜ್ಯ ಮಟ್ಟದ ಕಾರ್ಯಕರ್ತರು ಮಾಧ್ಯಮಗಳಲ್ಲಿ ಜಾಹೀರಾತು ನೀಡಲು ನಾವು ಮುಕ್ತ ಅವಕಾಶ ನೀಡುತ್ತಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕಾಡು ಪ್ರಾಣಿಗಳ ದಾಳಿಯಿಂದ ಮೃತರಾದ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡಿ – ಜೆಡಿಎಸ್ ಶಾಸಕರ ಆಗ್ರಹ

ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೆ ಅರ್ಜಿ ಆಹ್ವಾನ
ಕಾಂಗ್ರೆಸ್ (Congress) ಪಕ್ಷ ಮುಂದಿನ ಚುನಾವಣೆಗೆ ಸಜ್ಜಾಗುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಬಯಸಿರುವವರು ಅರ್ಜಿ ಹಾಕಲು ಅವಕಾಶ ಕಲ್ಪಿಸಲಾಗಿದೆ. ನವೆಂಬರ್ 5 ರಿಂದ 15 ರವರೆಗೆ ಅರ್ಜಿ ಹಾಕಬಹುದು. ಅರ್ಜಿಗೆ 5 ಸಾವಿರ ರೂ. ಶುಲ್ಕ. ಅರ್ಜಿ ಸಲ್ಲಿಸುವಾಗ ಸಾಮಾನ್ಯ ವರ್ಗದವರು 2 ಲಕ್ಷ ರೂ. ಡಿಡಿ, ಕಾಂಗ್ರೆಸ್ ಸದಸ್ಯತ್ವ ವಿವರ ಲಗತ್ತಿಸಬೇಕು. ಪರಿಶಿಷ್ಟ ವರ್ಗದವರಿಗೆ ಶೇ.50 ರಷ್ಟು ವಿನಾಯಿತಿ ನೀಡಲಾಗಿದೆ. ಈ ಹಣ ಪಕ್ಷದ ಕಟ್ಟಡ ಕಾಮಗಾರಿ ನಿಧಿಗೆ ಜಮೆ ಆಗಲಿದೆ. 2023ರ ಚುನಾವಣೆಯಲ್ಲಿ ಹಾಲಿ ಶಾಸಕರ ಸಮೇತ ಟಿಕೆಟ್ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ನಾನು ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಈ ಅರ್ಜಿ ಹಾಕಬೇಕು. ಇಲ್ಲಿ ವ್ಯಕ್ತಿಗಿಂತ ಪಕ್ಷ ಮುಖ್ಯ ಎಂದು ಸ್ಪಷ್ಟಪಡಿಸಿದ್ದಾರೆ.

mallikarjun kharge 1 1

ಮತ್ತೆ ಸದಸ್ಯತ್ವ ನೋಂದಣಿ ಆರಂಭ
ಹಲವು ಮಂದಿ ಕಾಂಗ್ರೆಸ್ ಸದಸ್ಯತ್ವ ಪಡೆಯಲು ಉತ್ಸುಕರಾಗಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಆನ್‌ಲೈನ್ ಮೂಲಕ ನೋಂದಣಿ ಆರಂಭಿಸಿದ್ದೇವೆ. ಕೆಲವು ನಾಯಕರು ಕಾಂಗ್ರೆಸ್ ಸೇರಲು ಬಯಸಿದ್ದು, ನನ್ನ ಸಂಪರ್ಕದಲ್ಲಿದ್ದಾರೆ. ಅವರ ಹೆಸರನ್ನು ಈಗ ಬಹಿರಂಗ ಪಡಿಸುವುದಿಲ್ಲ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ್ ಖರ್ಗೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಬೇಷರತ್ತಾಗಿ ಪಕ್ಷ ಸೇರಲು ಬಯಸುವವರು ಅರ್ಜಿ ಹಾಕಬಹುದು. ಅವರಿಗೆ ಮುಕ್ತ ಅವಕಾಶ ನೀಡಲಾಗಿದೆ. ಅರ್ಜಿ ಹಾಕಿದ ನಂತರ ಅಲ್ಲಂ ವೀರಭದ್ರಪ್ಪ ಅವರ ನೇತೃತ್ವದ ಸಮಿತಿ ಯಾರನ್ನು ಸೇರಿಸಿಕೊಳ್ಳಬೇಕು ಎಂದು ತೀರ್ಮಾನಿಸಲಿದೆ.

ಪಕ್ಷ ಬಿಟ್ಟು ಹೋದವರನ್ನು ಸೇರಿಸಿಕೊಳ್ಳುತ್ತೀರಾ ಎಂಬ ಪ್ರಶ್ನೆಗೆ, ‘ಈ ವಿಚಾರದಲ್ಲಿ ಮುಕ್ತ ಅವಕಾಶ ನೀಡಿದ್ದೇವೆ. ಅದಕ್ಕಾಗಿ ಒಂದು ಸಮಿತಿ ಇದೆ. ಪಕ್ಷದ ಸಿದ್ಧಾಂತ ಒಪ್ಪಿಕೊಳ್ಳುವ ಯಾರು ಬೇಕಾದರೂ ಅರ್ಜಿ ಹಾಕಬಹುದು. ನಾವು ಎಲ್ಲ ನಾಯಕರ ಜತೆ ಚರ್ಚೆ ಮಾಡಿ, ಪಕ್ಷದ ಅಧ್ಯಕ್ಷನಾಗಿ ಈ ವಿಚಾರ ತಿಳಿಸುತ್ತಿದ್ದೇನೆ. ಯಾರನ್ನು ಸೇರಿಸಿಕೊಳ್ಳಬೇಕು ಯಾರನ್ನು ಸೇರಿಸಿಕೊಳ್ಳಬಾರದು ಎಂಬ ನಿರ್ಧಾರವನ್ನು ಸಮಿತಿ ಕೈಗೊಳ್ಳಲಿದೆ’ ಎಂದಿದ್ದಾರೆ. ಇದನ್ನೂ ಓದಿ: ಶಾಸಕ ಸುರೇಶ್ ಕುಮಾರ್ ಹೆಸರಿನಲ್ಲಿ ನಕಲಿ ಫೇಸ್‍ಬುಕ್ ಖಾತೆ- ಹಣ ಕೇಳಿದ ಕಿಡಿಗೇಡಿಗಳು

congress 5

ಪಕ್ಷದ ಟಿಕೆಟ್‌ಗೆ ಹಣ ಯಾವ ಮಾನದಂಡದಲ್ಲಿ ನೀಡಬೇಕು ಎಂಬ ಪ್ರಶ್ನೆಗೆ, ‘ಯಾವುದೇ ಮಾನದಂಡವಿಲ್ಲ. ನಾವು ಪಕ್ಷದ ಕಟ್ಟಡ, ಪಕ್ಷದ ನಿಧಿ, ಚುನಾವಣಾ ಪ್ರಚಾರ, ಜಾಹೀರಾತು ನೀಡಲು ಹಣ ಬೇಕಿದೆ. ಪತ್ರಕರ್ತರಿಗೆ ಹಣ ನೀಡುವುದಿಲ್ಲ. ಮುಖಪುಟದ ಜಾಹೀರಾತು ನೀಡಲು ನಮ್ಮ ಬಳಿ ಸರ್ಕಾರ ಇಲ್ಲ. ಪಕ್ಷಕ್ಕೆ 20 ಸಾವಿರಕ್ಕಿಂತ ಹೆಚ್ಚಿನ ನಗದು ಪಡೆಯುವಂತಿಲ್ಲ. ನಮಗೆ ಯಾವುದೇ ಚುನಾವಣಾ ಬಾಂಡ್ ಬರುತ್ತಿಲ್ಲ. ಎಲ್ಲ ಬಿಜೆಪಿಗೆ ಹೋಗುತ್ತಿದೆ. ಹೀಗಾಗಿ ಕಾರ್ಯಕರ್ತರಾದರೂ ಪಕ್ಷಕ್ಕೆ ಹಣ ನೀಡಲಿ’ ಎಂದು ತಿಳಿಸಿದ್ದಾರೆ.

ಅರ್ಜಿ ಹಾಕಲು ವಯೋಮಿತಿ ಇದೆಯೇ ಎಂಬ ಪ್ರಶ್ನೆಗೆ, ‘ನಮ್ಮಲ್ಲಿ ವಯೋಮಿತಿ ಇಲ್ಲ. ನಮ್ಮಲ್ಲಿ ಮಾರ್ಗದರ್ಶಕ ಮಂಡಲಿ ಇಲ್ಲ. ನಾವು 92 ವರ್ಷದ ಶಾಮನೂರು ಶಿವಶಂಕರಪ್ಪ ಅವರನ್ನು ಇಟ್ಟುಕೊಂಡಿದ್ದೇವೆ. ಅವರು ಬೇರೆಯವರಿಗಿಂತ ಹೆಚ್ಚು ಓಡಾಡುತ್ತಿದ್ದಾರೆ. ಕ್ಷೇತ್ರದ ಎಲ್ಲ ಬೂತ್‌ಗಳಿಗೂ ಭೇಟಿ ನೀಡುತ್ತಿದ್ದಾರೆ. ನಮ್ಮ ತಂದೆ-ತಾಯಿಯನ್ನು ನಾವು ಮನೆಯಿಂದ ಆಚೆ ಹಾಕುವುದಿಲ್ಲ. ಅದಕ್ಕೆ ನಾನು ಅವಕಾಶ ನೀಡುವುದಿಲ್ಲ’ ಎಂದು ಹೇಳಿದ್ದಾರೆ.

Sriramulu 1 1

ಬಿಜೆಪಿಯವರು ಸಮುದಾಯಗಳ ಸಮಾವೇಶ ಮಾಡುತ್ತಿರುವ ಬಗ್ಗೆ ಕೇಳಿದಾಗ, ‘ಅವರಿಗೆ ಜಾತಿ ಇಲ್ಲ. ಹೀಗಾಗಿ ಜಾತಿಗಳ ಬೆಂಬಲ ಹುಡುಕಿಕೊಂಡು ಹೋಗುತ್ತಿದ್ದಾರೆ. ನಾವು ಸರ್ವೋದಯ ಸಮಾವೇಶ ಮಾಡುತ್ತಿದ್ದೇವೆ. ಗಾಂಧಿ ಅವರು ಆರಂಭಿಸಿದ ಸರ್ವೋದಯವನ್ನೇ ಮಲ್ಲಿಕಾರ್ಜುನ ಖರ್ಗೆ ಅವರು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಕೇಸ್- ಪ್ರಕರಣ ರದ್ದು ಕೋರಿ ಡಿಕೆಶಿ ಅರ್ಜಿ

ಶ್ರೀರಾಮುಲು ಅವರ ಧರಣಿ ಬಗ್ಗೆ ಕೇಳಿದಾಗ, ‘ಸರ್ಕಾರ ಎಷ್ಟು ವೇಗವಾಗಿದೆ ಎಂಬುದಕ್ಕೆ ಶ್ರೀರಾಮುಲು ಅವರ ಧರಣಿ ಸಾಕ್ಷಿ. ಶ್ರೀರಾಮ ಮಲಗಿರುವುದು ರಾಮ ರಾಜ್ಯ ಏನಾಗುತ್ತಿದೆ ಎಂಬುದಕ್ಕೆ ಸಾಕ್ಷಿ’ ಎಂದು ಟಾಂಗ್‌ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:aiccbengalurucongressd k shivakumarmallikarjun khargeಎಐಸಿಸಿಕಾಂಗ್ರೆಸ್ಡಿ.ಕೆ.ಶಿವಕುಮಾರ್ಬೆಂಗಳೂರುಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

HANUMATH PUTANI
Bengaluru City

ಮಹಿಳೆಯ ಸರ ಕಸಿದು ಓಡ್ತಿದ್ದ ಕಳ್ಳನನ್ನು ಒಂದು ಕಿಮೀ ಬೆನ್ನತ್ತಿ ಹಿಡಿದ ಕಾನ್ಸ್‌ಟೇಬಲ್!

Public TV
By Public TV
55 seconds ago
SSLC Exams
Bengaluru City

ಮಾರ್ಚ್‌ 18 ರಿಂದ SSLC ಪರೀಕ್ಷೆ – ಮಧು ಬಂಗಾರಪ್ಪ

Public TV
By Public TV
2 minutes ago
Fortis Hospital
Crime

ಪಂಜಾಬ್ ಸಿಎಂ ಭಗವಂತ್ ಮಾನ್ ದಾಖಲಾಗಿದ್ದ ಆಸ್ಪತ್ರೆಗೆ ಬಾಂಬ್ ಬೆದರಿಕೆ – ತೀವ್ರ ಶೋಧ

Public TV
By Public TV
17 minutes ago
Supreme Court 1
Court

158 ಸಿವಿಲ್ ನ್ಯಾಯಾಧೀಶರ ನೇಮಕಾತಿ ಆಯ್ಕೆ ಪ್ರಕ್ರಿಯೆ ಮುಂದುವರಿಸಲು ಹೈಕೋರ್ಟ್‌ಗೆ ‘ಸುಪ್ರೀಂ’ ಸೂಚನೆ

Public TV
By Public TV
32 minutes ago
Yuvraj Samra
Cricket

T20 World Cup | ಬಲಿಷ್ಠ ಕಿವೀಸ್‌ ವಿರುದ್ಧ ಭರ್ಜರಿ ಶತಕ – ಇತಿಹಾಸ ನಿರ್ಮಿಸಿದ ಕೆನಡಾ ʻಸಾಮ್ರಾʼಟ್‌

Public TV
By Public TV
32 minutes ago
Congress MLA Sivaganga Basavaraj
Davanagere

ಈಗ ನುಡಿದಂತೆ ನಡೆಯುವವರು ಯಾರ್‌ ಇರ್ತಾರೆ ಹೇಳಿ – ಶಿವಗಂಗಾ ಬಸವರಾಜ್

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?