Breaking – ವ್ಯಾಕ್ಸಿನ್ ಮೇಲೆ ಸಿನಿಮಾ ಮಾಡಲಿದ್ದಾರೆ ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್

Public TV
1 Min Read
FotoJet 47

ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, (Vivek Agnihotri) ಇದೀಗ ತಮ್ಮ ಹೊಸ ಸಿನಿಮಾವನ್ನು ಘೋಷಿಸಿದ್ದು, ಈ ಸಿನಿಮಾ ವ್ಯಾಕ್ಸಿನ್ ವಾರ್ ಮೇಲೆ ಇರಲಿದೆಯಂತೆ. ಹಾಗಾಗಿಯೇ ಈ ಚಿತ್ರಕ್ಕೆ ಅವರು ‘ದಿ ವ್ಯಾಕ್ಸಿನ್ ವಾರ್’ (The Vaccine War) ಎಂದು ಹೆಸರಿಟ್ಟಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಸೇರಿದಂತೆ ಒಟ್ಟು 11 ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬರುತ್ತಿರುವುದು ವಿಶೇಷ.

kashmir

ಕೊರೋನಾ ಸಮಯದಲ್ಲಿ ವ್ಯಾಕ್ಸಿನ್ ಏನೆಲ್ಲ ಆವಾಂತರ ಸೃಷ್ಟಿ ಮಾಡಿತು ಎನ್ನುವ ಅರಿವು ಬಹುತೇಕರಿಗಿದೆ. ಈ ವ್ಯಾಕ್ಸಿನ್ ಏನೆಲ್ಲ ಕೆಲಸ ಮಾಡಿತು ಎಂದು ಕಂಡವರು ಇದ್ದಾರೆ. ವ್ಯಾಕ್ಸಿನ್ ಮಾಫಿಯಾ ಬಗ್ಗೆಯೂ ಹಲವು ಅನುಮಾನಗಳು ವ್ಯಕ್ತವಾದವು. ಹೀಗಾಗಿಯೇ ವ್ಯಾಕ್ಸಿನ್ ಸುತ್ತ ಕಥೆಯನ್ನು ಬರೆದಿರುವ ವಿವೇಕ್, ವ್ಯಾಕ್ಸಿನ್ ಸಾಧಕ ಬಾಧಕಗಳ ಬಗ್ಗೆಯೇ ಸಿನಿಮಾ ಮಾಡುತ್ತಿದ್ದಾರಂತೆ. ಇದನ್ನೂ ಓದಿ:ಮುತ್ತೆತ್ತರಾಯನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

vivek agnihotri

ದಿ ಕಾಶ್ಮೀರ್ ಫೈಲ್ಸ್  (The Kashmir Files) ಸಿನಿಮಾ ತಯಾರಿ ವೇಳೆಯಲ್ಲೇ ವ್ಯಾಕ್ಸಿನ್ ಬಗ್ಗೆ ಸಂಶೋಧನೆ ಮಾಡಿದ್ದರಂತೆ ವಿವೇಕ್. ಕೋವಿಡ್ ಕಾರಣದಿಂದಾಗಿ ಕಾಶ್ಮೀರ್ ಫೈಲ್ಸ್ ಶೂಟಿಂಗ್ ಮುಂದೂಡಲ್ಪಟ್ಟಾಗ  ವ್ಯಾಕ್ಸಿನ್ ಹಿಂದೆ ಬಿದ್ದಿದ್ದರಂತೆ. ತಮ್ಮ ಸಂಶೋಧನೆಯಲ್ಲಿ ಕಂಡ  ಅನುಭವಗಳನ್ನು ಈ ಸಿನಿಮಾದಲ್ಲಿ ಅವರು ಅಳವಡಿಸಿಕೊಂಡಿದ್ದಾರಂತೆ. ವ್ಯಾಕ್ಸಿನ ತಯಾರಿಕೆಯಲ್ಲಿ ಗೆದ್ದಿರುವ ವಿಜ್ಞಾನಿಗಳ ಶ್ರಮ, ಅದನ್ನು ಅಷ್ಟೇ ವೇಗವಾಗಿ ತಲುಪಿಸಿದ ರೋಚಕ ಕಥೆಯೂ ಈ ಸಿನಿಮಾದಲ್ಲಿ ಇರಲಿದೆಯಂತೆ.

vivek agnihotri

ತಮ್ಮದೇ ಬ್ಯಾನರ್ ನಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿರುವ ವಿವೇಕ್, ಪತ್ನಿ ನಟಿ ಪಲ್ಲವಿ ಜೋಷಿ ಅವರೇ ಈ ಚಿತ್ರದ ನಿರ್ಮಾಪಕರು ಎಂದು ಘೋಷಣೆ ಮಾಡಿದ್ದಾರೆ. ತಾರಾಗಣದ ಬಗ್ಗೆ ಇನ್ನೂ ಯಾವುದೇ ಮಾಹಿತಿ ಕೊಟ್ಟಿಲ್ಲವಾದರೂ, ಶೀಘ್ರದಲ್ಲೇ ಎಲ್ಲ ವಿಷಯವನ್ನೂ ಹಂಚಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *