2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಭಾರತಕ್ಕೆ ಈಗಿಂದಲೇ ತಯಾರಿ ಅಗತ್ಯ – ಪ್ರಹ್ಲಾದ್ ಜೋಶಿ

Public TV
2 Min Read
vision india @ 2047

ಬೆಂಗಳೂರು: ಮೂರು ಟ್ರಿಲಿಯನ್ ಡಾಲರ್ ಆರ್ಥಿಕತೆ ಹೊಂದಿರುವ ಭಾರತ 2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಷ್ಟ್ರವನ್ನಾಗಿಸುವುದೇ ವಿಷನ್ ಇಂಡಿಯಾ@2047 (Vision India @ 2047) ಗುರಿ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ವಿಷನ್ ಇಂಡಿಯಾ@2047 ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.

ಭಾರತ 2047ಕ್ಕೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ದೇಶವಾಗಲಿದೆ ಎಂದು ಅಂದಾಜಿಸಲಾಗಿದ್ದು, ಇದಕ್ಕೆ ಈಗಿನಿಂದಲೇ ಎಲ್ಲ ಕ್ಷೇತ್ರಗಳಲ್ಲೂ ತಯಾರಿ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.‌ 30 ಟ್ರಿಲಿಯನ್ ಡಾಲರ್ ಆರ್ಥಿಕತೆ ದೇಶವಾದಾಗ ಅಭಿವೃದ್ದಿ ಹೊಂದಿದ ರಾಷ್ಟ್ರವಾಗಿ ಭಾರತ ಬದಲಾಗಿರುತ್ತೆ. ದೇಶಕ್ಕೆ ಹೇರಳವಾದ ವಿದ್ಯುತ್ ಅವಶ್ಯಕತೆ ಇದ್ದು, ಅದಕ್ಕಾಗಿ ಕಲ್ಲಿದ್ದಲು ಉತ್ಪಾದನೆಯನ್ನೂ ಹೆಚ್ಚಿಸುವತ್ತ ಕೇಂದ್ರ ಕಲ್ಲಿದ್ದಲು ಸಚಿವಾಲಯ ಗಮನ ಹರಿಸಿದೆ ಎಂದು ಹೇಳಿದರು‌. ಇದನ್ನೂ ಓದಿ: ರಾಯಚೂರಿನಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಭರ್ಜರಿ ಫೈಟ್ – ಒಂದೇ ಕ್ಷೇತ್ರಕ್ಕೆ 17 ಅರ್ಜಿ

vision india @ 2047..

ಕೇಂದ್ರ ಸಚಿವ ಪೀಯೂಷ್ ಗೋಯಲ್ (Piyush Goyal) ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಾಗಾರವು ಮುಂಬರುವ 25 ವರ್ಷಗಳಲ್ಲಿ ಭಾರತವನ್ನು ಹೇಗೆ ಪ್ರಗತಿಯ ಪಥದಲ್ಲಿ ಮುನ್ನಡೆಸಬಹುದು ಎಂಬ ಬಗ್ಗೆ ಸ್ಟಾರ್ಟಪ್‌ಗಳು ಮತ್ತು ಉದ್ಯಮಶೀಲತೆ ಕೇಂದ್ರೀಕರಿಸಲಿದೆ ಎಂದು ವಿವರಿಸಿದರು.

“ಅಮೃತ್ ಕಾಲ” ಎಂದು ಕರೆಯಲ್ಪಡುವ ಮುಂದಿನ ಎರಡೂವರೆ ದಶಕಗಳು ಭಾರತದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸಲಿವೆ. ಈ ಅವಧಿಯಲ್ಲಿ ಭಾರತವನ್ನು ಅಭೂತಪೂರ್ವ ರೀತಿಯಲ್ಲಿ ಪರಿವರ್ತಿಸುವುದು ಪ್ರಧಾನಿ ಮೋದಿಯವರ ದೃಷ್ಟಿಯಾಗಿದೆ ಎಂದು ಜೋಶಿ ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: 69ನೇ ಅಖಿಲ ಭಾರತ ಸಹಕಾರ ಸಪ್ತಾಹ – 54 ಸಹಕಾರಿಗಳಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಇದೇ ವೇಳೆ ಮಾತನಾಡಿದ ಕೇಂದ್ರ ಸಚಿವ ಪೀಯೂಷ್ ಗೋಯಲ್, ದೇಶದ ತಂತ್ರಜ್ಞಾನದ ರಾಜಧಾನಿಯಾಗಿರುವ ಬೆಂಗಳೂರು ಸಹಭಾಗಿತ್ವ ಸಹಕಾರ ಮತ್ತು ಸ್ಪರ್ಧೆಗಳಿಂದ ಜಾಗತಿಕ ಮಟ್ಟದಲ್ಲಿ ವಿರಾಜಮಾನವಾಗಿದೆ ಎಂದು ಬಣ್ಣಿಸಿದರು. ಭಾರತವು ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದ್ದು, 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಹೊರಹೊಮ್ಮಲಿದೆ. ಕೇಂದ್ರ ಸರ್ಕಾರವು ದೊಡ್ಡ ಉದ್ಯಮಿಗಳಂತೆಯೇ ಸಣ್ಣಪುಟ್ಟ ವ್ಯಾಪಾರಿಗಳಿಗೂ ಸಮಾನ ಅವಕಾಶ ಕಲ್ಪಿಸುವ ಉದ್ದೇಶದಿಂದ ಓಪನ್ ಡೇಟಾ ಇ-ಕಾಮರ್ಸ್‌ ವ್ಯವಸ್ಥೆಗೆ ಚಾಲನೆ ನೀಡಿದ್ದು, ಇದೂ ಸಹ ಬೆಂಗಳೂರಿನಿಂದಲೇ ಆರಂಭವಾಗಬೇಕು ಎಂದು ಗೋಯಲ್‌ ಆಶಯ ವ್ಯಕ್ತಪಡಿಸಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *