ಚಿಲುಮೆ ವಿರುದ್ಧ ಕೇಸ್‌: ತನಿಖೆ ನಡೆಸಲು ಸರ್ಕಾರಕ್ಕೆ ಅಧಿಕಾರವಿಲ್ಲ ಎಂದ ಚುನಾವಣಾ ಆಯೋಗ

Public TV
1 Min Read
CHILUME 1

ಬೆಂಗಳೂರು: ವೋಟರ್ ಐಡಿ ಹಗರಣಕ್ಕೆ(Voter Data Theft Case) ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ(Karnataka Government) ಯಾವುದೇ ತನಿಖೆಗೆ ಆದೇಶ ಮಾಡುವಂತಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಚಿಲುಮೆ(Chilume) ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಚುನಾವಣಾ ಆಯೋಗ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಏನೇ ಅಕ್ರಮ ನಡೆದರೂ ಚುನಾವಣಾ ಆಯೋಗಕ್ಕೆ(Election Commission) ಮಾತ್ರ ತನಿಖೆ ನಡೆಸುವ ಅಧಿಕಾರ ಇದೆ ಎಂದು ಹೇಳಿದೆ.

Karnataka Chilime Voter data theft case No Govt can order any probe in such matters election commission

ಹೇಳಿಕೆಯಲ್ಲಿ ಏನಿದೆ?
ಸರ್ಕಾರ ಮತದಾರರ ಮಾಹಿತಿ ಕಲೆ ಹಾಕಿದ ಖಾಸಗಿ ಸಂಸ್ಥೆ ವಿರುದ್ಧ ತನಿಖೆಗ ಆದೇಶಿಸಿದ್ದು ಕಾಡುಗೋಡಿ ಮತ್ತು ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ವಿಚಾರ ಮಾಧ್ಯಮಗಳಲ್ಲಿ ವರದಿಯಾಗಿದೆ. ಭಾರತದ ಚುನಾವಣಾ ಆಯೋಗ ಸ್ವತಂತ್ರ ಅಂಗವಾಗಿದ್ದು ಮತದಾರರ ಪಟ್ಟಿಗಳ ತಯಾರಿ, ಪ್ರಕಟಣೆ ಮತ್ತು ಪರಿಷ್ಕರಣೆ ಕೈಗೊಳ್ಳುತ್ತದೆ.  ಇದನ್ನೂ ಓದಿ: ಚಿಲುಮೆ ಅಕ್ರಮ ಪ್ರಕರಣ – ಪ್ರಮುಖ ಆರೋಪಿ ರವಿಕುಮಾರ್ ಬಂಧನ

ಭಾರತದ ಚುನಾವಣಾ ಆಯೋಗದ ನಿರ್ದೇಶನದೊಂದಿಗೆ ಎಲ್ಲಾ ಚಟುವಟಿಕೆಗಳನ್ನು ನೇರವಾಗಿ ಅಧೀಕ್ಷಕರ ಅಡಿಯಲ್ಲಿ ನಡೆಸಲಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರವು ಯಾವುದೇ ಪಾತ್ರವನ್ನು ಹೊಂದಿಲ್ಲ.

ಮತದಾರರ ಪಟ್ಟಿಗಳ ನಿರ್ವಹಣೆ, ಚುನಾವಣೆಗಳನ್ನು ನಡೆಸುವುದು, ಚುನಾವಣಾ ವಿಷಯಗಳಲ್ಲಿ ಅಕ್ರಮ ಆರೋಪ ಬಂದಾಗ ತನಿಖೆ ನಡೆಸಲು ಚುನಾವಣಾ ಆಯೋಗಕ್ಕೆ ಮಾತ್ರ ಅಧಿಕಾರವಿದೆ ಹೊರತು ರಾಜ್ಯ ಸರ್ಕಾರಕ್ಕಿಲ್ಲ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *