ಶಿವಮೊಗ್ಗ: ತಾನು ವಿವಾಹವಾಗಲು (Marriage) ಹುಡುಗಿ (Girl) ಹುಡುಕಿಕೊಡಿ ಎಂದು ಯುವಕನೊಬ್ಬ (Man) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅವರಿಗೆ ಪತ್ರ (Letter) ಬರೆದಿರುವ ವಿಚಿತ್ರ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ಹೊಸಮನೆ ಬಡಾವಣೆ ನಿವಾಸಿ ಪ್ರವೀಣ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅವರಿಗೆ ಮದುವೆಯಾಗಲು ವಧು (Bride) ಹುಡುಕಿಕೊಡುವಂತೆ ಪತ್ರ ಬರೆದು ಮನವಿ ಮಾಡಿಕೊಂಡಿರುವ ಯುವಕ.
ಪ್ರವೀಣ್ ಈ ಹಿಂದೆ ಸಾಫ್ಟ್‌ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ. ಆದರೆ ಇದೀಗ ತನ್ನ ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದಾನೆ. ಮದುವೆ ಆಗಲು ಸಾಕಷ್ಟು ಹುಡುಗಿಯರ ಅನ್ವೇಷಣೆ ನಡೆಸಿದ್ದ ಈತ ತನಗೆ ಸೂಕ್ತ ವಧು ಸಿಗದ ಹಿನ್ನೆಲೆಯಲ್ಲಿ ಎಸ್‌ಪಿ ಕಚೇರಿಗೆ ಆಗಮಿಸಿ ತಮ್ಮ ವ್ಯಾಪ್ತಿಯಲ್ಲಿ ಸೂಕ್ತ ವಧು ಸಿಕ್ಕಿದರೆ ಮದುವೆ ಮಾಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಬಿಜೆಪಿ 140 ಸ್ಥಾನ ಗೆದ್ದರೆ ಕಾಂಗ್ರೆಸ್ ಧೂಳಿಪಟ – ಯಡಿಯೂರಪ್ಪ
ಪತ್ರವನ್ನು ಸ್ವೀಕರಿಸಿರುವ ಪೊಲೀಸರು ಇದೀಗ ಏನು ಮಾಡೋದು ಎಂಬ ಪೇಚಿಗೆ ಸಿಲುಕಿದ್ದಾರೆ. ಅಲ್ಲದೇ ಇದೀಗ ಯುವಕ ಎಸ್‌ಪಿ ಅವರಿಗೆ ಬರೆದಿರುವ ಪತ್ರ ಸಾಮಾಜಿಕ ಮಾಧ್ಯಮಗಳಲ್ಲೂ ಹರಿದಾಡುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಬಣ ಸಂಘರ್ಷ – ಡಿಕೆಶಿ ನಡೆಗೆ ಸಿದ್ದರಾಮಯ್ಯ ಕೊತಕೊತ!