ಭಯೋತ್ಪಾದನೆ ಟಾರ್ಗೆಟ್‌ ಮಾಡಿ ಅಂದ್ರೆ, ಕಾಂಗ್ರೆಸ್‌ ಸರ್ಕಾರ ನನ್ನನ್ನು ಟಾರ್ಗೆಟ್‌ ಮಾಡಿತ್ತು – ಮೋದಿ ಟೀಕೆ

Public TV
1 Min Read
NARENDRA MODI 12

ಗಾಂಧೀನಗರ: ಕಾಂಗ್ರೆಸ್‌ (Congress) ಆಡಳಿತದ ಸಂದರ್ಭದಲ್ಲಿ ಭಯೋತ್ಪಾದನೆ ಉತ್ತುಂಗದಲ್ಲಿತ್ತು. ಭಯೋತ್ಪಾದನೆಯನ್ನು ಟಾರ್ಗೆಟ್‌ ಮಾಡಿ ಎಂದರೆ, ಆಗಿನ ಕಾಂಗ್ರೆಸ್‌ ಸರ್ಕಾರ ನನ್ನನ್ನ ಟಾರ್ಗೆಟ್‌ ಮಾಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಟೀಕಾಪ್ರಹಾರ ನಡೆಸಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಗೆ (Gujarat Election) ಮುನ್ನ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ವೋಟ್ ಬ್ಯಾಂಕ್ ರಾಜಕೀಯದ ಕಾರಣ ಕಾಂಗ್ರೆಸ್ ಭಯೋತ್ಪಾದಕರ ಬದಲಿಗೆ ತನ್ನನ್ನು ಗುರಿಯಾಗಿಸಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: 24 ಗಂಟೆಯೊಳಗೆ ಸರ್ಕಾರಿ ವಸತಿ ಗೃಹ ಖಾಲಿ ಮಾಡಿ – ಕಾಶ್ಮೀರ ಮಾಜಿ ಸಿಎಂ ಮುಫ್ತಿ ಸೇರಿ 7 ಮಂದಿಗೆ ನೋಟಿಸ್‌

CONGRESS 4

ಗುಜರಾತ್ ಬಹಳ ಹಿಂದಿನಿಂದಲೂ ಭಯೋತ್ಪಾದನೆಯ ಗುರಿಯಾಗಿತ್ತು. ಸೂರತ್ ಮತ್ತು ಅಹಮದಾಬಾದ್‌ನಲ್ಲಿ ನಡೆದ ಸ್ಫೋಟಗಳಲ್ಲಿ ಗುಜರಾತ್‌ನ ಜನರು ಸಾವನ್ನಪ್ಪಿದರು. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಇತ್ತು, ನಾವು ಭಯೋತ್ಪಾದನೆಯನ್ನು ಗುರಿಯಾಗಿಸಲು ಹೇಳಿದ್ರೆ, ಅವರು ನನ್ನನ್ನು ಟಾರ್ಗೆಟ್‌ ಮಾಡಿದ್ದರು ಎಂದು ತಿಳಿಸಿದ್ದಾರೆ.

ಭಯೋತ್ಪಾದನೆಯನ್ನು ಕಾಂಗ್ರೆಸ್ ತನ್ನ ಮತಬ್ಯಾಂಕ್ ಆಗಿ ಪರಿಗಣಿಸಿದೆ. ತುಷ್ಟೀಕರಣ ರಾಜಕಾರಣದಲ್ಲಿ ತೊಡಗಿರುವ ಹಲವಾರು ಪಕ್ಷಗಳೂ ಹುಟ್ಟಿಕೊಂಡಿವೆ ಎಂದು ವಿಪಕ್ಷಗಳಿಗೆ ಪರೋಕ್ಷವಾಗಿ ಟಾಂಗ್‌ ಕೊಟ್ಟಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಹೌರಾ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ

BJP 3

2014 ರಲ್ಲಿ ನಿಮ್ಮ ಒಂದು ಮತವು ದೇಶದಲ್ಲಿ ಭಯೋತ್ಪಾದನೆ ನಿರ್ಮೂಲನೆ ಮಾಡುವ ಅವಕಾಶ ಸೃಷ್ಟಿಸಿದೆ. ಭಯೋತ್ಪಾದಕರು ನಮ್ಮ ಗಡಿಯ ಮೇಲೆ ದಾಳಿ ಮಾಡುವ ಮುನ್ನ ಸಾಕಷ್ಟು ಯೋಚಿಸಬೇಕು. ಆದರೆ ಕಾಂಗ್ರೆಸ್ ನಮ್ಮ ಸರ್ಜಿಕಲ್ ಸ್ಟ್ರೈಕ್ ಅನ್ನು ಪ್ರಶ್ನಿಸುತ್ತದೆ. ರಾಜ್ಯದ ಯುವಕರು 25 ವರ್ಷ ವಯಸ್ಸಿನವರು, ಕರ್ಫ್ಯೂ ಹೇಗಿರುತ್ತದೆ ಎಂದು ನೋಡಿಲ್ಲ. ನಾವು ಅವರನ್ನು ಬಾಂಬ್ ಸ್ಫೋಟದಿಂದ ರಕ್ಷಿಸಬೇಕು. ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಮಾತ್ರ ಇದನ್ನು ಮಾಡಬಹುದು ಎಂದು ಹೇಳಿದ್ದಾರೆ.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಹೊರಬೀಳಲಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *