ಬೆಳಗಾವಿ: ಮನೆ ಮುಂದಿನ ಹೈಟೆನ್ಷನ್ ತಂತಿ (High Tension Wire) ತಾಗಿ 13 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಮಚ್ಛೆ ಗ್ರಾಮದಲ್ಲಿ ನಡೆದಿದೆ.
ಮಧುರಾ ಮೋರೆ (13) ಮೃತಪಟ್ಟ ಬಾಲಕಿ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದ್ದು, ತನ್ನ ಮನೆಯ ಒಂದನೇ ಮಹಡಿಯ ಮೇಲೆ ಆಟ ಆಡುತ್ತಿದ್ದ ಸಂದರ್ಭ ಹೈಟೆನ್ಷನ್ ವಯರ್ ತಾಗಿ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೈಟೆನ್ಷನ್ ತಂತಿ ಇದ್ದ ಹಿನ್ನೆಲೆ ಮನೆ ಕಟ್ಟದಂತೆ ಮೋರೆ ಕುಟುಂಬಕ್ಕೆ ಹೆಸ್ಕಾಂ (HESCOM) ಮೊದಲೇ ನೋಟಿಸ್ ನೀಡಿತ್ತು. ಹೆಸ್ಕಾಂ ನೋಟಿಸ್ ನೀಡಿದ್ದರೂ ಸಹಿತ ಅದನ್ನು ನಿರ್ಲಕ್ಷ್ಯ ಮಾಡಿ ಮೋರೆ ಕುಟುಂಬ ಮನೆ ನಿರ್ಮಿಸಿದ್ದರು. ಇದನ್ನೂ ಓದಿ: ಭಾರೀ ಗಾಳಿ, ಮಳೆ – ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಮರ ಬಿದ್ದು ವ್ಯಕ್ತಿ ಸಾವು
ಘಟನೆಯ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ಕುಟುಂಬಸ್ಥರಿಗೆ ಶವವನ್ನು ಹಸ್ತಾಂತರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಇದನ್ನೂ ಓದಿ: ರಾಯಚೂರಿನಲ್ಲಿ ಮೊಸಳೆ ದಾಳಿಗೆ ಬಾಲಕ ಬಲಿ – ಮೃತದೇಹಕ್ಕಾಗಿ ಹುಡುಕಾಟ