ಬೆಂಗಳೂರು: ಬೆನ್ನುಮೂಳೆಯ ಡಿಸ್ಕ್‌ಲೊಕೇಟ್ (ಬೆನ್ನು ಮೂಳೆ ಪಲ್ಲಟಗೊಳ್ಳುವುದು) ಆಗಿದ್ದ ಪರಿಣಾಮ, ಪಾರ್ಶ್ವವಾಯುಗೆ ಒಳಗಾಗಬೇಕಿದ್ದ 111 ಕೆ.ಜಿ. ತೂಕದ 15 ವರ್ಷದ ಬಾಲಕನಿಗೆ, ʻಮೈಕ್ರೋ-ಲುಂಬಾರ್ ಡಿಸ್ಸೆಕ್ಟಮಿʼ (Micro Lumbar Discectomy) ಎಂಬ ಕಾಲು ಉಳಿಸುವ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆಯನ್ನು ಬನ್ನೇರುಘಟ್ಟ ಫೋರ್ಟಿಸ್ ಆಸ್ಪತ್ರೆ (Fortis Hospital) ವೈದ್ಯರ ತಂಡ ಯಶಸ್ವಿಯಾಗಿ ಮಾಡಿದೆ.
ಫೋರ್ಟಿಸ್ ಆಸ್ಪತ್ರೆಯ ನರಶಸ್ತ್ರಚಿಕಿತ್ಸಕ ಸಲಹೆಗಾರ ಡಾ.ವಿ ಗಣೇಶ್ ನೇತೃತ್ವದ ತಂಡ ಒಂದು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ (Surgery) ನಡೆಸಿದೆ. ಇದನ್ನೂ ಓದಿ: NEET: ಪರೀಕ್ಷಾ ಮಂಡಳಿ ಟ್ರಂಕ್‌ನಿಂದ ಪ್ರಶ್ನೆಪತ್ರಿಕೆ ಕದ್ದಿದ್ದ ಎಂಜಿನಿಯರ್ ಬಂಧನ
Advertisement
Advertisement
ಈ ಕುರಿತು ಮಾತನಾಡಿದ ವೈದ್ಯರು, 111 ಕೆ.ಜಿ. ತೂಕವಿದ್ದ 15 ವರ್ಷದ ಸೈಯದ್ ಸಲಾಹುದೀನ್ ಕ್ವಾದ್ರಿ ಎಂಬ ಬಾಲಕನಿಗೆ ಕಾರಣಾಂತರಗಳಿಂದ ಬೆನ್ನಿನ ಮೂಳೆಯ ಡಿಸ್‌ಲೊಕೇಟ್ ನಿಂದ (Back Bone Dislocated) ಅಸಾಧ್ಯ ನೋವು ಕಾಣಿಸಿಕೊಂಡಿತ್ತು. ಈ ನೋವು ಕ್ರಮೇಣ ಬೆನ್ನಿನಿಂದ ಕಣಕಾಲುವರೆಗೂ ಹಬ್ಬಿತ್ತು. 4 ತಿಂಗಳ ಕಾಲ ಈ ನೋವನ್ನು ಹಾಗೆಯೇ ನಿರ್ಲಕ್ಷಿಸಿದ್ದರು. ಇದರಿಂದಾಗಿ ಬಾಲಕ ನಡೆಯಲು ಹಾಗೂ ಕೂರಲು ಸಹ ಆಗದಷ್ಟು ಅಗಾಧ ನೋವಿಗೆ ಒಳಗಾಗಿದ್ದ. ಇದನ್ನೂ ಓದಿ: ವಿವಾದಿತ ಭೋಜಶಾಲಾ ಮಸೀದಿಯಲ್ಲಿ ಮಂದಿರದ ಕುರುಹು – ಪುರಾತತ್ವ ಇಲಾಖೆಯ 2,000 ಪುಟಗಳ ವರದಿಯಲ್ಲಿ ಏನಿದೆ?
Advertisement
Advertisement
ಫೋರ್ಟಿಸ್ ಆಸ್ಪತ್ರೆಗೆ ದಾಖಲಾದ ಬಳಿಕ ಅವರಿಗೆ MRI ಸ್ಕ್ಯಾನ್ ಮಾಡುವ ಮೂಲಕ ಅವರ ಬೆನ್ನುಮೂಳೆಯ L3-L4 ಮಟ್ಟದಲ್ಲಿ ತೀವ್ರವಾದ ಪೋಸ್ಟರೊಸೆಂಟ್ರಲ್ ಡಿಸ್ಕ್ ಎಕ್ಸ್‌ಟ್ರಶನ್ ಆಗಿರುವುದು ಬಹಿರಂಗವಾಯಿತು. ಹೀಗಾಗಿ ಬಾಲಕನ ಕಣಕಾಲಿನವರೆಗೂ ಡಿಸ್‌ಲೊಕೇಟ್‌ನ ಪರಿಣಾಮ ಸಂಭವಿಸಿತ್ತು. ಬಾಲಕ ಈ ನೋವನ್ನು ಹೀಗೆಯೇ ನಿರ್ಲಕ್ಷ್ಯ ಮಾಡಿದ್ದರೇ ಮುಂದೊಂದುದಿನ ಆ ಕಾಲು ಪಾರ್ಶ್ವವಾಯುವಿಗೆ ಒಳಗಾಗುವ ಸಾಧ್ಯತೆ ಹೆಚ್ಚಾಗಿಯೇ ಇತ್ತು. ಇದನ್ನೂ ಓದಿ: Jammu Terrorist Attack: ಜಮ್ಮುವಿನಲ್ಲಿ ದಿಢೀರ್ ಭಯೋತ್ಪಾದಕ ದಾಳಿ ಹೆಚ್ಚಾಗುತ್ತಿರುವುದು ಏಕೆ?
ಬಾಲಕನ ಆರೋಗ್ಯದ ಗಂಭೀರತೆ ಪರಿಗಣಿಸಿ ಆತನಿಗೆ ಮೈಕ್ರೊ-ಲುಂಬರ್ ಡಿಸೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಶಿಫಾರಸು ಮಾಡಿದೆವು. ಇದು ನರಗಳ ಮೇಲಿನ ಒತ್ತಡ ನಿವಾರಿಸಲು ಡಿಸ್‌ಲೊಕೇಟ್ ಆಗಿರುವ ಡಿಸ್ಕ್ ಅನ್ನು ತೆಗೆದುಹಾಕುವ ಶಸ್ತ್ರಚಿಕಿತ್ಸಾ ವಿಧಾನವಾಗಿದೆ. ಬಾಲಕನ ತೂಕ ಅಧಿಕವಾಗಿದ್ದರಿಂದ ಈ ಶಸ್ತ್ರಚಿಕಿತ್ಸೆ ಸಾಕಷ್ಟು ಸವಾಲಾಗಿತ್ತು, ಆದರೂ ನಮ್ಮ ತಂಡ ಕಾರ್ಯಕ್ರಮತೆಯಿಂದ ಸುರಕ್ಷತೆಯಾಗಿ ಈ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದೇವೆ. ಈ ಶಸ್ತ್ರಚಿಕಿತ್ಸೆಯ ನಂತರ ಬಾಲಕನ ನೋವು ಸಂಪೂರ್ಣ ನಿವಾರಣೆಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ಹರ್ಷವ್ಯಕ್ತಪಡಿಸಿದ್ದಾರೆ.