ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಗುತ್ತಿಹೆಸಗೋಡು ಮನೆಯ ನೀರಿನ ಟ್ಯಾಂಕರ್ ಒಳಗಡೆ ಸುಮಾರು 18 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಪತ್ತೆಯಾಗಿದೆ.
ಹೆಸಗೋಡು ಗ್ರಾಮ ನಿವಾಸಿ ವಕೀಲ ಮಹೇಂದ್ರ ಮನೆಯ ಟ್ಯಾಂಕರ್‍ನಲ್ಲಿ ಕಾಳಿಂಗ ಪತ್ತೆಯಾಗಿದೆ. ಕಾಳಿಂಗ ಸರ್ಪದ ಗಾತ್ರವನ್ನು ನೋಡಿದ ಗ್ರಾಮಸ್ಥರು ಗಾಬರಿಯಾಗಿದ್ದರು. ಮನೆಯವರು ಕೂಡಲೇ ಸ್ನೇಕ್ ಆರೀಫ್ ಹಾಗೂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಬಂದ ಸ್ನೇಕ್ ಆರೀಫ್ ಹಾಗೂ ಅರಣ್ಯ ಸಿಬ್ಬಂದಿ ಸುಮಾರು 45 ನಿಮಿಷ ಕಾರ್ಯಾಚರಣೆ ನಡೆಸಿದರು. ಕೆಲ ಸ್ಥಳೀಯರು ಅದರ ಜೊತೆಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು. ಬಳಿಕ ಕಾಳಿಂಗ ಸರ್ಪವನ್ನು ಅರಣ್ಯ ಇಲಾಖೆ ನೇತೃತ್ವದಲ್ಲಿ ಆರೀಫ್ ಚಾರ್ಮಾಡಿ ಅರಣ್ಯಕ್ಕೆ ಬಿಟ್ಟಿದ್ದಾರೆ.