ಬೆಳಗಾವಿ: ಆಟವಾಡುತ್ತಾ ಸಂಪ್‍ಗೆ (Sump) ಬಿದ್ದು 2 ವರ್ಷದ ಮಗು ಸಾವನ್ನಪ್ಪಿದ ದುರ್ಘಟನೆ ನಗರದ (Belagavi) ಕಂಗ್ರಾಳ ಗಲ್ಲಿಯಲ್ಲಿ ನಡೆದಿದೆ.
ಮೃತಮಗುವನ್ನು ಸಾಯೀಶಾ ಎಂದು ಗುರುತಿಸಲಾಗಿದೆ. ಆಟವಾಡುತ್ತಿದ್ದ ಮಗು ಕಣ್ಮರೆಯಾಗಿದ್ದು, ಪೋಷಕರಿಗೆ ತೀವ್ರ ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಿದರೂ ಮಗು ಕಾಣದಿದ್ದಾಗ ಸಂಪ್ ತೆರೆದು ನೋಡಿದಾಗ ಮಗು ಬಿದ್ದಿರುವುದು ಕಂಡಿದೆ. ಕೂಡಲೇ ಮಗುವನ್ನು ಮಗುವನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ ಆಸ್ಪತ್ರೆಗೆ ಕರೆತರುವ ಮುನ್ನವೇ ಮಗು ಸಾವಿಗೀಡಾಗಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಇದನ್ನೂ ಓದಿ: ಉಡುಪಿ ಹೈವೇಯಲ್ಲಿ ತಲ್ವಾರ್ ಹಿಡಿದು ಅಟ್ಟಹಾಸ – ಗರುಡ ಗ್ಯಾಂಗ್‍ನ 6 ಪುಡಿ ರೌಡಿಗಳು ಅರೆಸ್ಟ್
ಖಡೇ ಬಜಾರ್ ಪೊಲೀಸ್ (Khade Bazaar Police) ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ – ಸಿಐಡಿಗೆ ವರ್ಗಾವಣೆ