ಕೊಪ್ಪಳ: ಕಳೆದ ಒಂದು ವಾರದಿಂದ ಕೊಪ್ಪಳ (Koppal) ಜಿಲ್ಲೆಯ ಗಂಗಾವತಿ (Gangavathi) ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ 4 ವರ್ಷದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆಹಿಡಿದಿದ್ದಾರೆ.ಇದನ್ನೂ ಓದಿ: ಅನೈತಿಕ ಸಂಬಂಧ ಶಂಕೆ – ಪತ್ನಿ, ಸ್ನೇಹಿತನನ್ನು ಕಡಿದು ಹಾಕಿದ ಪತಿ
ಕಳೆದ ಒಂದು ವಾರದಿಂದ ಗಂಗಾವತಿ ಹೊರವಲಯದ ಜಯನಗರದಲ್ಲಿ 4 ವರ್ಷದ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದಾಗಿ ಅಲ್ಲಿನ ಜನ ಭಯಭೀತರಾಗಿದ್ದರು. ಹೀಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯನ್ನು ಸೆರೆಹಿಡಿಯುವಲ್ಲಿ ಕಾರ್ಯನಿರತರಾಗಿದ್ದರು. ಗಂಗಾವತಿ ವಲಯ ಅರಣ್ಯಾಧಿಕಾರಿ ಸುಭಾಸ್ ಚಂದ್ರ ನೇತೃತ್ವದಲ್ಲಿ ಇಂದು ಚಿರತೆಯನ್ನು ಸೆರೆಹಿಡಿಯಲಾಗಿದೆ.
ಬೋನಿಗೆ ಬಿದ್ದ ಚಿರತೆಯ ವೈದ್ಯಕೀಯ ತಪಾಸಣೆ ನಡೆಸಿ, ಬಳಿಕ ಅದನ್ನು ಕಾಡಿಗೆ ಅಥವಾ ಪ್ರಾಣಿಸಂಗ್ರಹಾಲಯಕ್ಕೆ ರವಾನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ನಾವು ಫಿಲ್ಟರ್ ಮಾಡ್ತಿಲ್ಲ, ಎಲ್ಲರಿಗೂ ಹಣ ಸಿಗುತ್ತೆ: ಲಕ್ಷ್ಮಿ ಹೆಬ್ಬಾಳ್ಕರ್