ಮುಂಬೈ: ಭಾರತದಲ್ಲಿ ಕಿಲ್ಲರ್ ಕೊರೊನಾಗೆ ಮೂರನೇ ಬಲಿಯಾಗಿದ್ದು, ಮಹಾರಾಷ್ಟ್ರದಲ್ಲಿ 64 ವರ್ಷದ ವೃದ್ಧ ಮೃತಪಟ್ಟಿದ್ದಾರೆ.
ವೃದ್ಧ ಮುಂಬೈನ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನಾ ಜೊತೆಗೆ ವೃದ್ಧನಿಗೆ ಬಿಪಿ, ಶುಗರ್ ಸೇರಿದಂತೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆದಾದ ಬಳಿಕ ಅವರಿಗೆ ಕೊರೊನಾ ಸೋಂಕು ತಗಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ಮೃತಪಟ್ಟಿದ್ದಾರೆ.
Maharashtra: A 64-year-old COVID-19 patient passes away at Mumbai's Kasturba hospital pic.twitter.com/E1X8Dj78n0
— ANI (@ANI) March 17, 2020
ಎಲ್ಲಾ ರೀತಿಯ ಕ್ರಮಕೈಗೊಂಡರೂ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು 39 ಮಂದಿಗೆ ಸೋಂಕು ತಗುಲಿದೆ. ಮಹಾರಾಷ್ಟ್ರದಲ್ಲಿ ಮೃತಪಟ್ಟ ವೃದ್ಧ ಕೊರೊನಾ ಜೊತೆಗೆ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸದ್ಯ ಕರ್ನಾಟಕ, ದೆಹಲಿ ನಂತರ ಮಹಾರಾಷ್ಟ್ರದಲ್ಲಿ ಕೊರೊನಾಗೆ ವೃದ್ಧರೊಬ್ಬರು ಬಲಿಯಾಗಿದ್ದಾರೆ.
ಭಾರತಕ್ಕೆ ಕಾಲಿಟ್ಟಿರುವ ಕೊರೊನಾ ವೈರಸ್‍ಗೆ ಈವರೆಗೆ 129 ಮಂದಿ ತುತ್ತಾಗಿದ್ದು, 13 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 114 ಮಂದಿ ಕೊರೊನಾದಿಂದ ಬಳಲುತ್ತಿದ್ದಾರೆ. ಕರ್ನಾಟದಲ್ಲಿ ಒಟ್ಟು 10 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ವಿಶ್ವದಾದ್ಯಂತ ಹರಡುತ್ತಿರುವ ಮಹಾಮಾರಿ ಕೊರೊನಾ ವೈರಸ್‍ಗೆ 162 ರಾಷ್ಟ್ರ ಹಾಗೂ ಪ್ರಾಂತ್ಯಗಳು ತುತ್ತಾಗಿವೆ. ಚೀನಾದಲ್ಲಿ ಮೊದಲು ಕಾಣಿಸಿಕೊಂಡ ಕೊರೊನಾ ಈಗ ವಿಶ್ವದೆಲ್ಲೆಡೆ ಹರುಡುತ್ತಿದ್ದು ತನ್ನ ಕರಾಳತೆಯನ್ನು ಪ್ರದರ್ಶಿಸುತ್ತಿದೆ. ಈವರೆಗೆ ಸೋಂಕಿಗೆ 7,171 ಮಂದಿ ಬಲಿಯಾಗಿದ್ದಾರೆ.