ಚಾಮರಾಜನಗರ: ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಗರ-ಮಾಂಬಳ್ಳಿ ಪೊಲೀಸರು ಬಂಧಿಸಿ, ಲಾಟರಿ ಟಿಕೆಟ್‌ಗಳು ಹಾಗೂ ನಗದನ್ನು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮುತ್ತುರಾಜು ಅವರ ನಿರ್ದೇಶನದ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ.
ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯ ಅರಕ್ಷಕ ಉಪನಿರೀಕ್ಷಕ ಕರಿಬಸಪ್ಪ ಅವರಿಗೆ ದೊರೆತ ಖಚಿತ ಮಾಹಿತಿಯಂತೆ, ಜುಲೈ 9ರಂದು ಠಾಣಾ ಸಿಬ್ಬಂದಿಯೊಂದಿಗೆ ಅಗರ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ದಾಳಿ ನಡೆಸಿದರು. ಈ ವೇಳೆ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದ್ದ ಈರಣ್ಣ (44) ಎಂಬ ವ್ಯಕ್ತಿಯನ್ನು ಬಂಧಿಸಿದರು.
ಬಂಧಿತ ಆರೋಪಿಯಿಂದ ಲಾಟರಿ ಟಿಕೆಟ್ ಹಾಗೂ ಮಾರಾಟದ ಹಣವನ್ನು ಕೂಡ ಪೊಲೀಸರು ವಶಪಡಿಸಿಕೊಂಡಿದ್ದಾರೆ.
