ಚಾಮರಾಜನಗರ: ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ ಆರೋಪಿ ಅಮೃತ್ ಬಿನ್ ಮಹೇಶ್ (24)ನನ್ನು ವಶಕ್ಕೆ ಪಡೆಯಲಾಗಿದೆ.
ಚಾಮರಾಜನಗರ (Chamarajanagara) ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಹೌಸಿಂಗ್ ಬೋರ್ಡ್ ಕಾಲೊನಿ, ಇಂದಿರಾನಗರ ಮತ್ತು ಕರಿನಂಜನಪುರ ಬಡಾವಣೆಗಳಲ್ಲಿ ಮಧ್ಯರಾತ್ರಿ ವೇಳೆ ಪುರುಷ ವ್ಯಕ್ತಿಯೊಬ್ಬ ಮಹಿಳೆಯಂತೆ ಬಟ್ಟೆ ಧರಿಸಿ ಅಕ್ರಮವಾಗಿ ನಿರ್ಜನ ಪ್ರದೇಶಗಳ ಮನೆಯ ಮುಂಭಾಗದಲ್ಲಿ ಒಗೆದು ಒಣಗಲು ಹಾಕಿದ್ದ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿರುವ ಬಗ್ಗೆ ಬಂದ ದೂರಿನ ಮೇರೆಗೆ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿತ್ತು. ವಿಶೇಷ ತಂಡ ರಚಿಸಿ ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ
ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದೇವೆ. ಈ ವಿಶೇಷ ತಂಡದ ಪತ್ತೆ ಕಾರ್ಯಕ್ಕೆ ಪೊಲೀಸ್ ಅಧೀಕ್ಷಕ ಮುತ್ತುರಾಜು.ಎಂ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

