ಹಾವೇರಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಐದು ವರ್ಷ ಕಠಿಣ ಸಜೆ ಹಾಗೂ 4,000 ರೂ. ದಂಡ ವಿಧಿಸಿ ಜಿಲ್ಲಾ ಸತ್ರ ಎಫ್‌ಟಿಎಸ್‌ಸಿ-1(ಪೋಕ್ಸೊ) ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಭೀಮಪ್ಪ ಕೋಟೆಪ್ಪ ಹೊಳಲ ಎಂಬಾತ ಶಿಕ್ಷೆಗೆ ಗುರಿಯಾದವ. ನ್ಯಾಯಾಧೀಶರಾದ ಕೆ.ಎಸ್.ಜ್ಯೋತಿಶ್ರೀ ಅವರು ತೀರ್ಪು ಪ್ರಕಟಿಸಿದ್ದಾರೆ. ಇದನ್ನೂ ಓದಿ: ಡಿಸಿ ಕಚೇರಿ ಎದುರೇ 2 ಗುಂಪುಗಳ ನಡುವೆ ಮಾರಾಮಾರಿ- ಪೊಲೀಸರಿಗೂ ಡೋಂಟ್ ಕೇರ್!
2020 ರ ಮಾರ್ಚ್ ತಿಂಗಳಲ್ಲಿ ಬೆಳವಿಗಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ಲೈಂಗಿಕ ಕಿರುಕುಳ ನೀಡಿದ್ದ. ಆತನ ವಿರುದ್ಧ ಹಾವೇರಿ ಪೊಲೀಸ್ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಸದರಿ ಪ್ರಕರಣದ ತನಿಖೆ ನಡೆಸಿದ ಪೊಲೀಸ್ ವೃತ್ತ ನಿರೀಕ್ಷಕರು ನ್ಯಾಯಾಲಯಕ್ಕೆ ಆರೋಪಿತನ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಇದನ್ನೂ ಓದಿ: ಲಾಕ್‌ಡೌನ್ ಇಲ್ಲ, ಊಹಾಪೋಹಗಳಿಗೆ ಜನ ಕಿವಿ ಕೊಡಬಾರದು: ಸಿಎಂ
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ವಿವಿಧ ಕಲಂಗಳಡಿ ಅಪರಾಧಿಗೆ ಐದು ವರ್ಷಗಳ ಕಠಿಣ ಶಿಕ್ಷೆ ಹಾಗೂ 4 ಸಾವಿರ ರೂ. ದಂಡ ವಿಧಿಸಿದ್ದು, ಭಾದಿತೆಗೆ 50 ಸಾವಿರ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದೆ. ಸರ್ಕಾರದ ಪರವಾಗಿ ಜಿಲ್ಲಾ ಸತ್ರ ಎಫ್‌ಟಿಎಸ್‌ಸಿ-1(ಪೋಕ್ಸೊ) ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.