ಮಗಳ ಬರ್ತ್‌ಡೇ ಆಚರಿಸಲು ಸುವರ್ಣ ಸೌಧ ಬಾಡಿಗೆಗೆ ಕೊಡಿ – ಸಭಾಪತಿಗೆ ವಕೀಲ ಮನವಿ ಪತ್ರ

Public TV
1 Min Read
advocate letter

ಬೆಳಗಾವಿ: ಮಗಳ ಬರ್ತ್‌ಡೇ ಆಚರಣೆಗೆ ಸುವರ್ಣ ಸೌಧವನ್ನು (Suvarna Vidhana Soudha) ಬಾಡಿಗೆಗೆ ನೀಡುವಂತೆ ವಿಧಾನ ಪರಿಷತ್‌ ಸಭಾಪತಿಗೆ (Legislative Council Chairman) ವಕೀಲರೊಬ್ಬರು ಮನವಿ ಪತ್ರ ಸಲ್ಲಿಸಿರುವ ವಿಚಿತ್ರ ಘಟನೆ ನಡೆದಿದೆ.

ಬೆಳಗಾವಿ (Belagavi) ಜಿಲ್ಲೆಯ ಗೋಕಾಕ ತಾಲೂಕಿನ ಬಡಿಗವಾಡ ಗ್ರಾಮದ ವಕೀಲ ಮಲ್ಲಿಕಾರ್ಜುನ ಚೌಕಾಶಿ ಹೆಸರಿನ ವ್ಯಕ್ತಿ ಸುವರ್ಣ ಸೌಧ ಬಾಡಿಗೆಗೆ ನೀಡುವಂತೆ ಸಭಾಪತಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ನಮ್ಮ ಮುಖ್ಯಮಂತ್ರಿ ದುರ್ಬಲರು.. ಅಮಿತ್ ಶಾ ಮಾತಿಗೆ ಕಿಮ್ಮತ್ತಿಲ್ಲ- ಸಿದ್ದರಾಮಯ್ಯ ವ್ಯಂಗ್ಯ

Suvarna Vidhana Soudha 2

ಪತ್ರದಲ್ಲಿ ಏನಿದೆ?
ನನ್ನ ಏಕೈಕ ಪುತ್ರಿಯಾದ ಮಣಿಶ್ರೀಗೆ ಜನವರಿ 30ಕ್ಕೆ 5 ವರ್ಷ ಮುಗಿದು 6ನೇ ವರ್ಷ ತುಂಬಲಿದ್ದು, ಅವಳು 1ನೇ ತರಗತಿಯ ಪ್ರವೇಶ ಪಡೆಯಬೇಕಿದೆ. ಇದು ಅವಳ ಜೀವನದ ಅಮೂಲ್ಯ ಕ್ಷಣ. ಹೀಗಾಗಿ ಅವಳ ಹುಟ್ಟುಹಬ್ಬವನ್ನು ಆಚರಿಸುವುದರೊಂದಿಗೆ ನಮ್ಮ ಭಾಗದಲ್ಲಿ ಚಿಕ್ಕ ಹೆಣ್ಣುಮಕ್ಕಳಿಗೆ ʼಹುಟ್ಟದಟ್ಟಿʼ ಮಾಡುವ ಪದ್ಧತಿಯಿದ್ದು, ಇದು ಕೂಡ ಜೀವನದಲ್ಲಿ ಒಮ್ಮೆ ಬರುವಂತಹದ್ದು. ಆದ್ದರಿಂದ ವರ್ಷದಲ್ಲಿ 15 ದಿನ ಕಲರವದಿಂದ ಕೂಡಿ ಉಳಿದ ದಿನ ಭೂತ ಬಂಗ್ಲೆಯಂತಿರುವ ಕರ್ನಾಟಕ ಸುವರ್ಣ ವಿಧಾನಸೌಧ ಸಭಾಂಗಣವನ್ನು ಬಾಡಿಗೆ ನೀಡಬೇಕೆಂದು ವಿನಂತಿ.

ಈ ರೀತಿ ಕಾರ್ಯಕ್ರಮಗಳಿಗೆ ಬಾಡಿಗೆ ನೀಡುವುದರಿಂದ ಸರ್ಕಾರಕ್ಕೆ ಹೊರೆಯಾಗುತ್ತಿರುವ ಆರ್ಥಿಕ ನಿರ್ವಹಣಾ ವೆಚ್ಚವನ್ನು ಉಳಿಸಬಹುದು. ಸದ್ಯ ಅಧಿವೇಶನ ನಡೆಯುತ್ತಿದ್ದು, ಸದನದಲ್ಲಿ ಈ ವಿಷಯವನ್ನು ಚರ್ಚಿಸಿ ನಮಗೆ ಬಾಡಿಗೆ ನೀಡಬೇಕೆಂದು ಕಳಕಳಿಯ ವಿನಂತಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜಿಲ್ಲೆ ಜನರಿಗೆ ಅನ್ಯಾಯ – ಶಾಸಕ ದಿನೇಶ್‌ ಗೂಳಿಗೌಡ ಅಸಮಾಧಾನ

ಸದ್ಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಸೇರಿದಂತೆ ಅನೇಕ ವಿಚಾರಗಳು ಚರ್ಚೆಯಾಗುತ್ತಿವೆ. ವಿವಿಧ ಅಭಿವೃದ್ಧಿ ವಿಷಯಗಳಿಗೆ ಸಂಬಂಧಿಸಿದಂತೆ ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರ ಕೂಡ ನಡೆಯುತ್ತಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *