ಬೆಂಗಳೂರು: ಗುರು ದೇವರ ಸಮಾನ ಎನ್ನುತ್ತಾರೆ ಆದರೆ ಸಿಲಿಕಾನ್ ಸಿಟಿಯಲ್ಲಿ ಕಾಮುಕ ಟ್ಯೂಷನ್ ಮಾಸ್ಟರ್ ಒಬ್ಬ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ಕೊಟ್ಟು ಅಮಾನವೀಯತೆ ಮರೆದಿದ್ದಾನೆ. ನಗರದ ಅನೇಪಾಳ್ಯದಲ್ಲಿ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಅನೇಪಾಳ್ಯದ ಮುನೀರ್ ಸಾಬ್ ಬಂಧಿತ ಟ್ಯೂಷನ್ ಮಾಸ್ಟರ್. ವಿದ್ಯಾರ್ಥಿಯ ಪೋಷಕರು ನೀಡಿದ್ದ ದೂರಿನ ಆಧಾರದ ಮೇಲೆ ಅಶೋಕನಗರ ಪೊಲೀಸರು ಮುನೀರ್ ಸಾಬ್‍ನನ್ನು ಬಂಧಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸಿದ್ದಾರೆ.
Advertisement
Advertisement
ಏನಿದು ಪ್ರಕರಣ?:
ಮುನೀರ್ ಸಾಬ್ ಅನೇಪಾಳ್ಯದಲ್ಲಿ ಟ್ಯೂಷನ್ ನಡೆಸುತ್ತಿದ್ದು ಈತನ ಕೇಂದ್ರಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಥಿ ಹೋಗುತ್ತಿದ್ದ. ತರಗತಿಯ ವೇಳೆ ಮುನೀರ್ ಸಾಬ್ ಹೆಚ್ಚಾಗಿ ಲೈಂಗಿಕ ಚಟುವಟಿಕೆಯ ಬಗ್ಗೆ ಮಾತನಾಡುತ್ತಿದ್ದ. ಅಷ್ಟೇ ಅಲ್ಲದೆ ತನ್ನ ಮೊಬೈಲ್‍ನಲ್ಲಿ ಸೆಕ್ಸ್ ವಿಡಿಯೋ ತೋರಿಸಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ.
Advertisement
ಟ್ಯೂಷನ್ ಮಾಸ್ಟರ್ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿ ಪೋಷಕರಿಗೆ ತಿಳಿಸಿದ್ದಾನೆ. ತಕ್ಷಣವೇ ಪೋಷಕರು ಅಶೋಕನಗರ ಠಾಣೆಗೆ ದೂರು ನೀಡಿದ್ದಾರೆ. ಈ ವೇಳೆ ವಿದ್ಯಾರ್ಥಿಯ ಹೇಳಿಕೆ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದು, ಮುನೀರ್ ಸಾಬ್‍ನನ್ನು ಬಂಧಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv