ಬೆಳಗಾವಿ: ಕನ್ನಡ ರಾಜ್ಯೋತ್ಸವ (Kannada Rajyotsava) ಮುಗಿಸಿಕೊಂಡು ಮರಳುತ್ತಿದ್ದ ವೇಳೆ, ಬೈಕ್‌ವೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದದಲ್ಲೇ ಮೃತಪಟ್ಟಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಿತ್ತೂರು (Kittur) ತಾಲೂಕಿನ ಎಂ.ಕೆ.ಹುಬ್ಬಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೇಲೆ ರಾತ್ರಿ 11 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಮೃತರು ಧಾರವಾಡ (Dharwad) ಜಿಲ್ಲೆಯ ನರೇಂದ್ರದ ಲಬೈಕ್ ಹಲಸಿಗರ ಹಾಗೂ ಬೆಳಗಾವಿ ತಾಲೂಕಿನ ಬಾಳೇಕುಂದ್ರಿ ಗ್ರಾಮದ ಶ್ರೀನಾಥ ಗುಜನಾಳ ಎಂದು ಗುರುತಿಸಲಾಗಿದೆ. ಘಟನೆಯಿಂದ ಧಾರವಾಡ ನಗರದ ಅಲ್ತಾಫ್ ನಾಲಬಂದ ಹಾಗೂ ಕಡತನ ಬಾಗೇವಾಡಿಯ ಅರ್ಜುನ ರಂಗಣ್ಣವರ್ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ: ಮೂವರು ಆರೋಪಿಗಳು ಅರೆಸ್ಟ್
- Advertisement
ಯುವಕರ ಮೃತದೇಹ ಬಿದ್ದ ಸ್ಥಳದಿಂದ 300 ಮೀಟರ್ ದೂರದಲ್ಲಿ ಬೈಕ್ ಪತ್ತೆಯಾಗಿದೆ. ಇಬ್ಬರು ಯುವಕರು ಬೈಕ್‌ನಲ್ಲಿ ವೇಗವಾಗಿ ಹೊರಟಿದ್ದರು. ಇದೇ ವೇಳೆ ಹೆದ್ದಾರಿ ಪಕ್ಕದ ಹೋಟೆಲ್‌ನಲ್ಲಿ ಊಟ ಮಾಡಿದ ಇಬ್ಬರು ಯುವಕರು ಹೆದ್ದಾರಿ ದಾಟುತ್ತಿದ್ದರು. ಆ ವೇಳೆ ಪಾದಚಾರಿಗಳಿಗೆ ಬೈಕ್ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸವಾರ ಹಾಗೂ ಓರ್ವ ಪಾದಚಾರಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಅಂತಾರಾಜ್ಯ ಅಡಿಕೆ ವ್ಯಾಪಾರಿಯ 1 ಕೋಟಿ ಹಣ ಕಳವು – ಮೂವರ ಬಂಧನ
- Advertisement