ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಪುರ್ಬಾ ವರ್ಧಮಾನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ರಾತ್ರಿ ಬಿಜೆಪಿ ಮುಖಂಡನನ್ನು (BJP Leader) ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.
ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ ಮತ್ತು ಅಕ್ರಮ ಕಲ್ಲಿದ್ದಲು ವ್ಯವಹಾರ ನಡೆಸುತ್ತಿರುವ ಆರೋಪ ಹೊತ್ತಿರುವ ರಾಜು ಝಾ (Raju Jha) ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ರಾಜು 2021ರ ರಾಜ್ಯ ಚುನಾವಣೆಗೆ ಮುನ್ನ ಬಿಜೆಪಿ ಸೇರಿದ್ದರು. ತಮ್ಮ ಸ್ನೇಹಿತನೊಂದಿಗೆ ಕೋಲ್ಕತ್ತಾಗೆ ಹೋಗುತ್ತಿದ್ದ ಸಂದರ್ಭ ಗುಂಡಿಕ್ಕಿ ಕೊಲ್ಲಲಾಗಿದೆ.
Advertisement
Advertisement
ರಾಜು ಝಾ ಮತ್ತು ಅವರ ಸ್ನೇಹಿತ ಕೋಲ್ಕತ್ತಾಗೆ ಹೋಗುತ್ತಿದ್ದಾಗ ಶಕ್ತಿಗಢದಲ್ಲಿ ಕಾರನ್ನು ನಿಲ್ಲಿಸಿದ್ದರು. ಅವರ ಕಾರನ್ನು ಹೆದ್ದಾರಿಯ ಪಕ್ಕ ನಿಲ್ಲಿಸಿದಾಗ ಮತ್ತೊಂದು ಕಾರು ಅದರ ಪಕ್ಕದಲ್ಲಿ ನಿಲ್ಲಿಸಲಾಗಿದ್ದು, ಅದರಲ್ಲಿದ್ದ ದುಷ್ಕರ್ಮಿಗಳು ಬಿಜೆಪಿ ಮುಖಂಡನ ಮೇಲೆ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಪಕ್ಷ ಬಿಟ್ಟ ಕಾರ್ಯಕರ್ತನಿಗೆ ನಯವಾದ ಬೆದರಿಕೆ ಹಾಕಿ ಮನವೊಲಿಸಿದ ಶಿವನಗೌಡ ನಾಯ್ಕ್
Advertisement
ದಾಳಿಯಲ್ಲಿ ಝಾ ಸಾವನ್ನಪ್ಪಿದರೆ, ಅವರ ಸ್ನೇಹಿತನಿಗೆ ಗುಂಡಿನ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪೊಲೀಸರು ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ವಾಹನದಲ್ಲಿ ಗುಂಡುಗಳು ಹೊಕ್ಕಿರುವ ಗುರುತುಗಳು ಕಂಡುಬಂದಿವೆ.
Advertisement
ಬಿಜೆಪಿ ನಾಯಕ ರಾಜು ಝಾ ಅವರನ್ನು ಪುರ್ಬಾ ಬರ್ಧಮಾನ್ನ ಶಕ್ತಿಗಢದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ. ಇದೊಂದು ದುರದೃಷ್ಟಕರ ಘಟನೆಯಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಹಂತಕರು ಇದ್ದ ವಾಹನವನ್ನು ಪತ್ತೆಹಚ್ಚಲು ಸ್ಥಳೀಯ ಅಂಗಡಿಗಳಲ್ಲಿ ವಿಚಾರಿಸಲಾಗುತ್ತಿದೆ. ಟೋಲ್ ಪ್ಲಾಜಾ ಸೇರಿದಂತೆ ಹತ್ತಿರದ ಪ್ರದೇಶಗಳ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಘಟನೆ ಬಗ್ಗೆ ಎಲ್ಲಾ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಗ ಸತ್ತಾಗ ಆತ್ಮಸ್ಥೈರ್ಯ ತುಂಬಿ ಜೊತೆಯಾಗಿದ್ದು, ಪ್ರಭುದೇವ: ಪ್ರಕಾಶ್ ರಾಜ್