ಬೆಂಗಳೂರು: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಭ್ರಷ್ಟ ಕಾಂಗ್ರೆಸ್ (Congress) ಸರ್ಕಾರವು ಹಣವನ್ನು ಲೂಟಿ ಮಾಡಿ, ಸಿದ್ದರಾಮಯ್ಯನವರು (Siddaramaiah) ಮತ್ತು ಡಿ.ಕೆ. ಶಿವಕುಮಾರ್ (DK Shivakumar) ಅವರು ಗಾಂಧಿ ಕುಟುಂಬಕ್ಕೆ ಕಪ್ಪ ಕಾಣಿಕೆ ಸಲ್ಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (BY Vijayendra) ಟೀಕಿಸಿದರು.
ಮೈಸೂರು ಚಲೋ (Mysuru Chalo) ಪಾದಯಾತ್ರೆಯ ಎರಡನೇ ದಿನವಾದ ಇಂದು (ಭಾನುವಾರ) ಬಿಡದಿಯಲ್ಲಿ ಪಾದಯಾತ್ರೆಗೆ ಚಾಲನೆ ಕೊಟ್ಟು ಅವರು ಮಾತನಾಡಿದರು. ಪರಿಶಿಷ್ಟ ಜಾತಿ, ಪಂಗಡದ ಪರವಾಗಿ, ಬಡ ಜನರ ಪರವಾಗಿ ಪ್ರಶ್ನಿಸಿದ ವಿಪಕ್ಷಕ್ಕೆ ಉತ್ತರ ಕೊಡಬೇಕಾದ ಆಡಳಿತ ಪಕ್ಷದವರು ವಿಪಕ್ಷಕ್ಕೇ ಮರುಪ್ರಶ್ನೆ ಹಾಕುತ್ತಿದ್ದಾರೆ ಎಂದು ಆಕ್ಷೇಪಿಸಿದರು. ಇದನ್ನೂ ಓದಿ: Dengue Alert: ಒಂದು ವರ್ಷದೊಳಗಿನ 10 ಮಕ್ಕಳಿಗೆ ಡೆಂಗ್ಯೂ – ಪ್ರಕರಣಗಳ ಸಂಖ್ಯೆ 19 ಸಾವಿರಕ್ಕೆ ಏರಿಕೆ
Advertisement
ಮಾನ್ಯ ಮುಖ್ಯಮಂತ್ರಿಯವರೇ, ನೀವು ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಹಿಂದ ಅಭಿವೃದ್ಧಿ ಹೆಸರಿನಿಂದ ಅಧಿಕಾರಕ್ಕೆ ಬಂದಿದ್ದೀರಿ. ನಿಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅವರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ಲೂಟಿ ಮಾಡಿದ್ದನ್ನು ಸ್ವತಃ ಮುಖ್ಯಮಂತ್ರಿಗಳಾದ ನೀವೇ ಸದನದಲ್ಲಿ ಒಪ್ಪಿಕೊಂಡಿದ್ದೀರಿ. ವಾಲ್ಮೀಕಿ ನಿಗಮದಲ್ಲಿ ಹಗರಣ ಆದುದನ್ನು ಒಪ್ಪಿಕೊಂಡಿದ್ದೀರಲ್ಲವೇ? ನೀವು ನಮಗೆ ಉತ್ತರ ಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ದಲಿತರಿಗೆ ಸೇರಬೇಕಾದ 68 ಎಕರೆ ಜಮೀನನ್ನ ಡಿಕೆಶಿ ಲಪಟಾಯಿಸಿದ್ದಾರೆ – ಹೆಚ್‌ಡಿಕೆ ಬಾಂಬ್
Advertisement
Advertisement
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅಧಿಕಾರದ ದರ್ಪ, ಅಧಿಕಾರದ ಅಹಂನಿಂದ ಉಪ ಮುಖ್ಯಮಂತ್ರಿಯವರು ಮಾತನಾಡುತ್ತಿದ್ದಾರೆ. ಅವರು ರಾಜ್ಯದ ಜನತೆಗೆ ಉತ್ತರ ಕೊಡಬೇಕಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಬಿಡದಿಯಲ್ಲಿರುವ ಟೊಯೊಟಾ ಫ್ಯಾಕ್ಟರಿ ಕೂಡ ಹೊರರಾಜ್ಯಕ್ಕೆ ಹೋಗುವ ಪರಿಸ್ಥಿತಿ ಉದ್ಭವವಾಗಿದೆ. ಹೊಸ ಉದ್ಯಮಗಳು, ಕೈಗಾರಿಕೆಗಳು ನಮ್ಮ ರಾಜ್ಯಕ್ಕೆ ಬರುತ್ತಿಲ್ಲ. ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ನಿಮ್ಮ ದುರಹಂಕಾರದ ನಡವಳಿಕೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಲೂಟಿ ಮಾಡುತ್ತ ಕುಳಿತಿದ್ದೀರಿ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: 2ನೇ ದಿನಕ್ಕೆ ಕಾಲಿಟ್ಟ ದೋಸ್ತಿ ನಾಯಕರ ಪಾದಯಾತ್ರೆ; ಇದು ಹಗರಣಗಳ ಕೂಪ ಅಂತ ವಿಜಯೇಂದ್ರ ವಾಗ್ದಾಳಿ
Advertisement