ಬೆಳಗಾವಿ: ಬೆಂಗಳೂರಿನ (Bengaluru) ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ (Electronic City) ಖಾಸಗಿ ಕಂಪನಿಯೊಂದಕ್ಕೆ ಯುವತಿಯೊಬ್ಬಳು ಬಾಂಬ್ ಬೆದರಿಕೆ (Bomb Threat) ಕರೆ (Call) ಮಾಡಿದ್ದು, ಯುವತಿ (Young Woman) ಬೆಳಗಾವಿ (Belagavi) ಮೂಲದವಳು ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ.
ಬೆಳಗಾವಿಯ ಶಾಹುನಗರ ನಿವಾಸಿ ಶೃತಿ ಶೆಟ್ಟಿ ಬೆಂಗಳೂರಿನ ಇಲೆಕ್ಟ್ರಾನಿಕ್ ಸಿಟಿಯಲ್ಲಿರುವ ಖಾಸಗಿ ಕಂಪನಿಗೆ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ. ಕರೆ ಮಾಡಿದ್ದ ಶೃತಿ ಬೆಂಗಳೂರಿನಲ್ಲಿ ಈ ಮೊದಲು ಅದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಳು. ಹೆಚ್ಚಿನ ವಿದ್ಯಾಭ್ಯಾಸಕ್ಕೆಂದು ಕೆಲಸ ತೊರೆದು ಶೃತಿ ಬಂದಿದ್ದಳು. ವಿದ್ಯಾಭ್ಯಾಸದ ಬಳಿಕ ಶೃತಿಯನ್ನು ರೀ ಜಾಯಿನ್ ಮಾಡಿಕೊಳ್ಳಲು ಕಂಪನಿ ಹಿಂದೇಟು ಹಾಕಿದೆ. ಇದರಿಂದ ಮಾನಸಿಕವಾಗಿ ಕುಗ್ಗಿ ಬಾಂಬ್ ಬೆದರಿಕೆ ಕರೆ ಮಾಡಿದ್ದಾಳೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ – ಆರೋಪಿ ಅರೆಸ್ಟ್
ಸದ್ಯ ಶೃತಿಯನ್ನು ವಶಕ್ಕೆ ಪಡೆಯಲು ಬೆಂಗಳೂರಿನ ಪೊಲೀಸ್ ತಂಡ ಬೆಳಗಾವಿಗೆ ಆಗಮಿಸಿತ್ತು. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯ ಪಿಎಸ್‌ಐ ಮೆಹಬೂಬ್ ಹಾಗೂ ಮಹಿಳಾ ಪೊಲೀಸ್ ಪೇದೆ, ಶೃತಿ ಮನೆಗೆ ಆಗಮಿಸಿದ್ದು, ಇವರಿಗೆ ಬೆಳಗಾವಿ ಎಪಿಎಂಸಿ ಠಾಣೆ ಸಿಪಿಐ, ಪಿಎಸ್‌ಐ ಸೇರಿ ಪೊಲೀಸ್ ಸಿಬ್ಬಂದಿ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಪಟಾಕಿ ಕಿಡಿಯಿಂದ ಹೊತ್ತಿ ಉರಿದ ಗುಜರಿ ಅಂಗಡಿ
ಯುವತಿ ಶೃತಿ ಶೆಟ್ಟಿಯನ್ನು ವಿಚಾರಣೆ ನಡೆಸಿದ ಪರಪ್ಪನ ಅಗ್ರಹಾರ ಪೊಲೀಸರು ಹುಸಿ ಬಾಂಬ್ ಕರೆ ಮಾಡಿರುವ ಕುರಿತು ಪ್ರಾಥಮಿಕ ಮಾಹಿತಿ ಪಡೆದಿದ್ದಾರೆ. ಈ ವೇಳೆ ಎರಡನೇ ಬಾರಿಗೆ ಕಂಪನಿಯಲ್ಲಿ ಕೆಲಸಕ್ಕೆ ಸೇರಿಸಿಕೊಳ್ಳದಿದ್ದಕ್ಕೆ ಕರೆ ಮಾಡಿರುವುದಾಗಿ ಯುವತಿ ಹೇಳಿದ್ದಾಳೆ. ತಾಯಿಯ ಮೊಬೈಲ್‌ನಿಂದ ಇಂದು ಬೆಳಗ್ಗೆ ಕರೆ ಮಾಡಿರುವುದಾಗಿ ಶೃತಿ ಹೇಳಿಕೆ ನೀಡಿದ್ದಾಳೆ. ಬಳಿಕ ಬುಧವಾರ ಪರಪ್ಪನ ಅಗ್ರಹಾರ ಠಾಣೆಗೆ ವಿಚಾರಣೆಗೆ ಆಗಮಿಸುವಂತೆ ಶೃತಿಗೆ ನೋಟಿಸ್ ನೀಡಲಾಗಿದೆ. ಯುವತಿ ಶೃತಿ, ಆಕೆಯ ತಂದೆ-ತಾಯಿಗೆ ಠಾಣೆಗೆ ಬರುವಂತೆ ಪೊಲೀಸರು ನೋಟಿಸ್ ನೀಡಿ ತೆರಳಿದ್ದಾರೆ. ಇದನ್ನೂ ಓದಿ: 1,20,000 ರೂ.ಗೆ ಭಾರತ-ನ್ಯೂಜಿಲೆಂಡ್ ಸೆಮಿಫೈನಲ್ ಟಿಕೆಟ್ ಮಾರಾಟ – ಓರ್ವ ಅರೆಸ್ಟ್