ಚಿತ್ರದುರ್ಗ: ವಿದ್ಯುತ್ ಕಂಬದಲ್ಲಿ (Electric Pole) ಸಿಲುಕಿದ್ದ ಪಾರಿವಾಳವನ್ನು (Pigeon) ರಕ್ಷಿಸಲು ಕಂಬ ಏರಿದ್ದ ಬಾಲಕನಿಗೆ (Boy) ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಮೊಳಕಾಲ್ಮೂರು (Molakalmuru) ತಾಲೂಕಿನ ಹನುಮಾಪುರ ಗ್ರಾಮದಲ್ಲಿ ನಡೆದಿದೆ.
ರಾಮಚಂದ್ರ (12) ಮೃತ ಬಾಲಕ. ಈತ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಗ್ರಾಮದ ವಿದ್ಯುತ್ ಕಂಬದಲ್ಲಿನ ತಂತಿಗೆ ಪಾರಿವಾಳವೊಂದು ಸಿಲುಕಿ ಜೀವನ್ಮರಣ ಮಧ್ಯೆ ಹೋರಾಡುತ್ತಿರುವುದನ್ನು ಗಮನಿಸಿದ ಈತ ಪಾರಿವಾಳವನ್ನು ರಕ್ಷಿಸಲೆಂದು ವಿದ್ಯುತ್ ಕಂಬ ಏರಿದ್ದ. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಡಿಕೆಶಿ ಭಾಷಣದ ವೇಳೆ ‘ಡಿ ಬಾಸ್.. ಡಿ ಬಾಸ್’ ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳು
ವಿದ್ಯುತ್ ಶಾಕ್‌ನಿಂದಾಗಿ ಬಾಲಕನ ಶವ ವಿದ್ಯುತ್ ಕಂಬದಲ್ಲಿನ ತಂತಿಗೆ ಸಿಲುಕಿ ನೇತಾಡುತ್ತಿದ್ದು, ಮಾನವೀಯತೆಯಿಂದ ಪಾರಿವಾಳದ ಜೀವ ಉಳಿಸಲು ಮುಂದಾಗಿದ್ದ ಬಾಲಕ ತನ್ನ ಜೀವವನ್ನೇ ಬಲಿ ನೀಡಿದ್ದಾನೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ರಾಂಪುರ ಪಿಎಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ