ರಾಮನಗರ: ಸ್ನೇಹಿತರ ಜೊತೆ ನದಿಯಲ್ಲಿ ಈಜಲು (Swimming) ಹೋಗಿದ್ದ ಬಾಲಕನೋರ್ವ ನೀರುಪಾಲಾದ ಘಟನೆ ರಾಮನಗರ (Ramanagara) ತಾಲೂಕಿನ ದ್ಯಾವರಸನೇಗೌಡನದೊಡ್ಡಿ ಬಳಿ ನಡೆದಿದೆ.
ರಾಮನಗರ ಟೌನ್‌ನ ವಿನಾಯಕನಗರ ನಿವಾಸಿ ಕಿಶೋರ್ (14) ಮೃತ ಬಾಲಕ. ಎಂಟನೇ ತರಗತಿ ಓದುತ್ತಿದ್ದ ಕಿಶೋರ್ ಭಾನುವಾರ ಮಧ್ಯಾಹ್ನ ಸ್ನೇಹಿತರ ಜೊತೆ ಈಜಲು ಹೋಗಿದ್ದ. ಅರ್ಕಾವತಿ ನದಿಯಲ್ಲಿ (River) ಈಜುತ್ತಿದ್ದ ಕಿಶೋರ್ ನೀರಿನಲ್ಲಿ ಮುಳುಗಿ (Drown) ನಾಪತ್ತೆಯಾಗಿದ್ದಾನೆ. ಇದರಿಂದ ಭಯಗೊಂಡ ಸ್ನೇಹಿತರು ಸ್ಥಳದಿಂದ ಜಾಗ ಖಾಲಿ ಮಾಡಿದ್ದಾರೆ. ಇದನ್ನೂ ಓದಿ: ಶಂಕಿತ ಉಗ್ರ ಅಬ್ದುಲ್ ಮತೀನ್ ತಂದೆ ನಿಧನ
ಕಿಶೋರ್ ನೀರಿನಲ್ಲಿ ಮುಳುಗಿರುವುದನ್ನು ಆತನ ಸ್ನೇಹಿತರು ಮನೆಯವರಿಗೂ ತಿಳಿಸಿರಲಿಲ್ಲ. ಇತ್ತ ಮಗನಿಗಾಗಿ ಹುಡುಕಾಡಿದ್ದ ಪೋಷಕರು ಮಗ ಕಾಣೆಯಾಗಿದ್ದಾನೆ ಎಂದು ರಾಮನಗರದ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆ ಸೊಮವಾರ ಕಿಶೋರ್ ಬಗ್ಗೆ ಸ್ನೇಹಿತರ ಬಳಿ ಪೊಲೀಸರು ವಿಚಾರಿಸಿದಾಗ ನೀರಿನಲ್ಲಿ ಮುಳುಗಿ ಹೋಗಿರುವ ಬಗ್ಗೆ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ: ಸಾಲ ನೀಡುವುದಾಗಿ ಹೇಳಿ ವ್ಯಕ್ತಿಯ ಖಾತೆಯಲ್ಲಿದ್ದ ಹಣ ಲಪಟಾಯಿಸಿದ ವಂಚಕರು
ವಿಷಯ ಅರಿತ ಬಳಿಕ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಅರ್ಕಾವತಿ ನದಿಯಿಂದ ಕಿಶೋರ್ ಮೃತ ದೇಹವನ್ನು ಹೊರತೆಗೆದಿದ್ದಾರೆ. ಈ ಸಂಬಂಧ ರಾಮನಗರ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಡಿವೈಡರ್‌ಗೆ ಡಿಕ್ಕಿ ಹೊಡೆದು ಕಾರು ಪಲ್ಟಿ – ಇಬ್ಬರ ಸಾವು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]