ಮಡಿಕೇರಿ: ಹಳೇ ದ್ವೇಷದ ಹಿನ್ನೆಲೆ ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ ಮಾಡಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajpet) ತಾಲೂಕಿನ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿ ನಡೆದಿದೆ.
ಕ್ರಿಸ್ಟಲ್ (28) ಹತ್ಯೆಯಾದ ದುರ್ದೈವಿ. ಗುರುವಾರ ರಾತ್ರಿ ಸಿದ್ದಾಪುರ ಗ್ರಾಮದ ಪಾಲಿಬೆಟ್ಟ ರಸ್ತೆಯಲ್ಲಿರುವ ಬಾರ್‌ವೊಂದರಲ್ಲಿ (Bar) ಕ್ರಿಸ್ಟಲ್ ಸ್ನೇಹಿತರು ಹಾಗೂ ರಂಜಿತ್ ಸ್ನೇಹಿತರು ಇಬ್ಬರು ಒಂದೇ ಬಾರಿನಲ್ಲಿ ಮದ್ಯಪಾನ ಮಾಡುತ್ತಿದ್ದ ಸಂದರ್ಭ ರಂಜಿತ್ ಹಾಗೂ ಕ್ರಿಸ್ಟಲ್ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಇದನ್ನೂ ಓದಿ: ಮಕ್ಕಳಿಗೆ ಜಾಮೂನಿನಲ್ಲಿ ವಿಷ ಹಾಕಿದ ತಂದೆ – ಬಳಿಕ ತಾನೂ ಆತ್ಮಹತ್ಯೆಗೆ ಯತ್ನ
Advertisement
Advertisement
ಗಲಾಟೆಯನ್ನು ಗಮನಿಸಿದ ಬಾರ್ ಮ್ಯಾನೇಜರ್ ಸಿದ್ದಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಸ್ಥಳಕ್ಕೆ ಆಗಮಿಸುವ ವೇಳೆ ಕ್ರಿಸ್ಟಲ್ ತಂಡ ಹಾಗೂ ರಂಜಿತ್ ತಂಡದ ಯುವಕರು ಬಾರ್ ಒಳಗೆ ನುಗ್ಗಿ ಇನ್ನಷ್ಟು ಗಲಾಟೆ ಮಾಡಿಕೊಂಡು ಬಾರ್‌ನ ಶೌಚಾಲಯದ ಬಾಗಿಲು ಮುರಿದಿದ್ದಾರೆ. ಬಳಿಕ ಪೊಲೀಸರು ಕ್ರಿಸ್ಟಲ್‌ನ ಜೊತೆ ಇದ್ದ ಮೈಕೆಲ್ ಹಾಗೂ ಮತ್ತೊಬ್ಬರನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿದ್ದಾರೆ. ಆದರೆ ಗಲಾಟೆ ಮಾಡಿದ ರಂಜಿತ್ ಹಾಗೂ ಕ್ರಿಸ್ಟಲ್ ಇಬ್ಬರಿಗೂ ಸ್ಥಳದಲ್ಲೇ ಬುದ್ದಿವಾದ ಹೇಳಿ ಮನೆಗೆ ಹೋಗುವಂತೆ ತಿಳಿಸಿದ್ದರು. ಇದನ್ನೂ ಓದಿ: ಕೊಂಬಿನಿಂದ ತಿವಿದು ಬಾಲಕಿಯನ್ನು ಬಿಸಾಕಿದ ಹಸು- ತಮಿಳುನಾಡಿನ ದೃಶ್ಯ ಭಾರೀ ವೈರಲ್
Advertisement
ಶುಕ್ರವಾರ ಬೆಳಗ್ಗೆ ಬಾರ್‌ನಲ್ಲಿ ಗಲಾಟೆ ಮಾಡಿಕೊಂಡಿದ್ದ ಕ್ರಿಸ್ಟಲ್ (28) ಮೃತದೇಹ ಪಾಲಿಬೆಟ್ಟ ರಸ್ತೆಯಲ್ಲಿ ಗೋಚರಿಸಿದೆ. ಯುವಕನ ಮರ್ಮಾಂಗಕ್ಕೆ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಸಿದ್ದಾಪುರ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಅಹಮದಾಬಾದ್‍ನಲ್ಲಿ ಭೀಕರ ಅಪಘಾತ – ಹತ್ತು ಮಂದಿ ಸಾವು
Advertisement
ಘಟನೆಯ ವಿವರ:
ಕಳೆದ ಎರಡು ಮೂರು ತಿಂಗಳ ಹಿಂದೆ ಕ್ರಿಸ್ಟಲ್ ಹಾಗೂ ರಂಜಿತ್ ತಂಡದ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಏರ್ಪಟ್ಟಿದ್ದು, ಇಬ್ಬರ ನಡುವೆ ನಡೆದ ಗಲಾಟೆ ನ್ಯಾಯಾಲಯದ ಮೆಟ್ಟಿಲೇರಿತ್ತು. ಗುರುವಾರವೂ ಹಳೆಯ ಗಲಾಟೆಗೆ ಸಂಬಂಧಿಸಿದಂತೆ ಕೋರ್ಟ್‌ನಲ್ಲಿ ವಿಚಾರಣೆಯನ್ನು ಮುಗಿಸಿಕೊಂಡು ಬಂದ ಇಬ್ಬರೂ ತಮ್ಮ ಸ್ನೇಹಿತರೊಂದಿಗೆ ರಾತ್ರಿ ಬಾರ್‌ನಲ್ಲಿ ಮುಖಾಮುಖಿ ಭೇಟಿಯಾಗಿ ಮತ್ತೊಮ್ಮೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಲಸಿಕೆ ಹಾಕ್ತಿದ್ದಾಗಲೇ ಕುಸಿದ ಅಂಗನವಾಡಿಯ ಮೇಲ್ಛಾವಣಿ- ಮಗುವಿನ ತಲೆಗೆ ಗಾಯ
ನಂತರ ಪೊಲೀಸರು ಬಂದು ಕ್ರಿಸ್ಟಲ್‌ನ ಜೊತೆಯಲ್ಲಿದ್ದ ಯುವಕರನ್ನು ಕರೆದುಕೊಂಡು ಹೋಗಿ ಕ್ರಿಸ್ಟಲ್‌ನನ್ನು ಮನೆಗೆ ಹೋಗುವಂತೆ ಹೇಳಿ ಹೋಗಿದ್ದಾರೆ. ಆದರೆ ಇಬ್ಬರ ನಡುವೆ ಗಲಾಟೆ ನಡೆದಿದ್ದು ಗೊತ್ತಾಗಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗದೆ ಪೊಲೀಸರು ಬಿಟ್ಟು ಹೋಗಿದ್ದರಿಂದ ರಾತ್ರಿ ಮತ್ತೊಮ್ಮೆ ರಸ್ತೆ ಮಧ್ಯದಲ್ಲೇ ಗಲಾಟೆ ನಡೆದು ಹತ್ಯೆ ಮಾಡಲಾಗಿದೆ. ಸಿದ್ದಾಪುರ ಪೊಲೀಸರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಕ್ರಿಸ್ಟಲ್ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಮಲಗಿದ್ದಲ್ಲೇ ಹೃದಯಾಘಾತ – ಪೊಲೀಸ್ ಕಾನ್ಸ್‌ಟೇಬಲ್ ನಿಧನ
ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ತನಿಖೆ ಕೈಗೊಂಡಿದ್ದು, ಆರೋಪಿಗಳ ಪತ್ತೆಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಟಿಕ್‌ಟಾಕ್ ಸುಂದರಿಗೆ ಕಂಟಕವಾಯ್ತು ಮೊಬೈಲ್ ಗೀಳು – ಪ್ರೀತಿಸಿ ಮದ್ವೆಯಾಗಿದ್ದ ಮಡದಿಯನ್ನೇ ಕೊಂದ ಪತಿ
Web Stories