ರಾಯಚೂರು: ನಗರದ ಹೊರವಲಯದ ರಾಯಚೂರು (Raichuru) ವಿವಿ ಬಳಿ ಬೈಕ್ಗೆ ಸರ್ಕಾರಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಬರಲ್ಲ; ಹೊಸ ಷರತ್ತು ಮುಂದಿಟ್ಟ ಬಿಸಿಸಿಐ
ಮೃತ ಬೈಕ್ ಸವಾರನನ್ನು ಗೋನವಾರ ಗ್ರಾಮದ 23 ವರ್ಷದ ತಿಮ್ಮಾರೆಡ್ಡಿ ಎಂದು ಗುರುತಿಸಲಾಗಿದೆ.
ರಾಯಚೂರಿನಿಂದ ಮಂತ್ರಾಲಯಕ್ಕೆ ಹೊರಟಿದ್ದ ರಾಜಹಂಸ ಬಸ್ ಬೈಕ್ಗೆ ಡಿಕ್ಕಿ ಹೊಡೆದಿದೆ. ಬೆಲ್ದಾರ್ ಕೆಲಸ ಮಾಡುತ್ತಿದ್ದ ಯುವಕ ಗ್ರಾಮದಿಂದ ಯರಗೇರಾಕ್ಕೆ ಹೊರಟಿದ್ದ ವೇಳೆ ಈ ಘಟನೆ ನಡೆದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಯರಗೇರಾ (Yargera) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಸಂಡೂರು ಅಖಾಡದಲ್ಲಿ ಪ್ರಚಾರ – 15 ದಿನದಲ್ಲಿ ಸಿದ್ದರಾಮಯ್ಯ ರಾಜೀನಾಮೆ : ಬಿಎಸ್ವೈ