ಗಾಂಧಿನಗರ: ಗುಜರಾತ್‌ನ (Gujarat) ಶ್ರೀಮಂತ ಉದ್ಯಮಿಯೊಬ್ಬರು (Businessman) ತಮ್ಮ 200 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ದಾನ ಮಾಡುವ ಮೂಲಕ ಪತ್ನಿಯೊಂದಿಗೆ ಸನ್ಯಾಸತ್ವದ (Monkhood) ದಾರಿ ಹಿಡಿದಿದ್ದಾರೆ.
ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ಉದ್ಯಮಿ ಭವೇಶ್ ಭಾಯ್ ಭಂಡಾರಿ (Bhavesh Bhandari) ಮತ್ತು ಅವರ ಪತ್ನಿ ಜೈನ ದೀಕ್ಷೆ ತೆಗೆದುಕೊಂಡು ಸನ್ಯಾಸಿಯಾಗಲು ಮುಂದಾಗಿದ್ದಾರೆ. ಸನ್ಯಾಸತ್ವ ಸ್ವೀಕಾರ ಹಿನ್ನೆಲೆ ಫೆಬ್ರವರಿಯಲ್ಲಿ ತಮ್ಮ 200 ಕೋಟಿ ರೂ. ಸಂಪತ್ತನ್ನು ದತ್ತಿ ಸಂಸ್ಥೆಗೆ ದಾನ ಮಾಡಿದ್ದು, ಈ ತಿಂಗಳ ಕೊನೆಯಲ್ಲಿ ಅಧಿಕೃತವಾಗಿ ಸನ್ಯಾಸತ್ವ ಸ್ವೀಕರಿಸಲಿದ್ದಾರೆ. ಭವೇಶ್ ದಂಪತಿಯ ಮಕ್ಕಳು ಸಹ 2 ವರ್ಷಗಳ ಹಿಂದೆ ದೀಕ್ಷೆ ಪಡೆದಿದ್ದರು. ಮಕ್ಕಳಿಂದ ಸ್ಫೂರ್ತಿ ಪಡೆದ ದಂಪತಿ ಕೂಡ ಇದೀಗ ಆಸ್ತಿ ಸಂಪತ್ತನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಭಾರತೀಯ ಸಿಬ್ಬಂದಿ ಭೇಟಿಗೆ ಅಧಿಕಾರಿಗಳಿಗೆ ಇರಾನ್ ಅವಕಾಶ
Advertisement
Advertisement
ಏಪ್ರಿಲ್ 22ರಂದು ಭವೇಶ್ ದಂಪತಿ ಸನ್ಯಾಸತ್ವ ತೆಗೆದುಕೊಳ್ಳಲಿದ್ದು, ಬಳಿಕ ಲೌಕಿಕ ಜೀವನವನ್ನು ತ್ಯಜಿಸಲಿದ್ದಾರೆ. ಜೈನ ಸಮಾಜದಲ್ಲಿ ದೀಕ್ಷೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ದೀಕ್ಷೆ ತೆಗೆದುಕೊಳ್ಳುವವರು ಭಿಕ್ಷೆ ಬೇಡುವ ಮೂಲಕ ಜೀವನ ಸಾಗಿಸಬೇಕು. ಐಷಾರಾಮಿ ಜೀವನವನ್ನು ತ್ಯಜಿಸಬೇಕು. ಅಷ್ಟೇ ಅಲ್ಲದೇ ಜೀವನ ಪರ್ಯಂತ ಬರಿಗಾಲಿನಲ್ಲಿ ಇಡೀ ಭಾರತದಾದ್ಯಂತ ತಿರುಗಾಡಬೇಕಾಗುತ್ತದೆ. ಇದನ್ನೂ ಓದಿ: ಸುಪ್ರೀಂನಿಂದ ಸದ್ಯಕ್ಕಿಲ್ಲ ರಿಲೀಫ್ – ಏ.29 ರಂದು ಕೇಜ್ರಿವಾಲ್ ಅರ್ಜಿ ವಿಚಾರಣೆ
Advertisement
Advertisement
ಹುಟ್ಟಿನಿಂದಲೇ ಶ್ರೀಮಂತ ಮನೆತನದಲ್ಲಿ ಬೆಳೆದ ಭವೇಶ್ ಭಂಡಾರಿ ಅವರ ಸನ್ಯಾಸತ್ವದ ನಿರ್ಧಾರ ಎಲ್ಲರ ಗಮನಸೆಳೆದಿದ್ದು, ಎಲ್ಲೆಡೆ ವೈರಲ್ ಆಗಿದೆ. ಅಲ್ಲದೇ ಭವೇಶ್ ದಂಪತಿ ಇತರೆ 35 ಮಂದಿಯೊಂದಿಗೆ ಸುಮಾರು 4 ಕಿ.ಮೀ ಮೆರವಣಿಗೆ ತೆರಳಿ ಬಳಿಕ ತಮ್ಮಲ್ಲಿದ್ದ ಮೊಬೈಲ್ ಸೇರಿದಂತೆ ಸಮಸ್ತ ಆಸ್ತಿಯನ್ನು ದಾನ ಮಾಡಿದ್ದಾರೆ. ಇದನ್ನೂ ಓದಿ: ರಾಗಾ ಹೆಲಿಕಾಪ್ಟರ್ ತಪಾಸಣೆ ನಡೆಸಿದ ಫ್ಲೈಯಿಂಗ್ ಸ್ಕ್ವಾಡ್ – ಮುಂದೇನಾಯ್ತು?