ಬೆಂಗಳೂರು: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿಯುರಿದ ಘಟನೆ ಬೆಂಗಳೂರಿನ (Bengaluru) ಕನಕಪುರ ರಸ್ತೆಯ (Kanakapura Road) ಕೋಣನಕುಂಟೆ ಕ್ರಾಸ್‌ನಲ್ಲಿ ನಡೆದಿದೆ.
ಕನಕಪುರ ರಸ್ತೆ ಕೋಣನಕುಂಟೆ ಕ್ರಾಸ್‌ನಲ್ಲಿ ಕೆಎ01ಎಂಸಿ4049 ನಂಬರ್‌ನ ವರ್ನಾ ಕಾರು ಚಲಿಸುತ್ತಿತ್ತು. ಈ ವೇಳೆ ಕಾರಿನ ಏಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದಿದೆ. ಇದನ್ನೂ ಓದಿ: ಇರಾನ್ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್ ತಿವಾರಿ
ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕಾರನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದು, ಪರಿಣಾಮ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

