– 7 ಮಂದಿಗೆ ಗಾಯ, ಮಾದಾವರ ಬಳಿ ಘಟನೆ
ಬೆಂಗಳೂರು: ನೆಲಮಂಗಲದ ಮಾದಾವರ (Madavara, Nelamangala) ಬಳಿ ಭಾರೀ ಅಪಘಾತ ಸಂಭವಿಸಿದೆ. ಸಹೋದರನ ಮನೆಯಿಂದ ಊಟ ಮುಗಿಸಿ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಹುಡುಗಿಯೊಬ್ಬಳು ಸುಟ್ಟು ಕರಕಲಾದ ದಾರುಣ ಘಟನೆ ನಡೆದಿದೆ.
Advertisement
ಬೆಂಗಳೂರು- ತುಮಕೂರು ಹೈವೆಯ ಮಾದಾವರ ಟೋಲ್ ಬಳಿ ರಾತ್ರಿ 10 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಓಮ್ನಿ ಕಾರಿಗೆ ಬಲೆನೋ ಕಾರು ಹಿಂಬದಿಯಿಂದ ಡಿಕ್ಕಿಯೊಡೆದ ಪರಿಣಾಮ ಓಮ್ನಿಕಾರು ಪಲ್ಟಿಯಾಗಿ ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿ ಒಟ್ಟು 8 ಜನ ಪ್ರಯಾಣ ಮಾಡ್ತಿದ್ರು. ಏಳು ಜನಕ್ಕೆ ಸುಟ್ಟ ಗಾಯಗಳಾಗಿದ್ರೇ 15 ವರ್ಷದ ಹುಡುಗಿಯೊಬ್ಬಳು ಸಜೀವ ದಹನವಾಗಿದ್ದಾಳೆ.
Advertisement
Advertisement
ಓಮ್ನಿ ಕಾರಿನಲ್ಲಿ ಪ್ರಯಾಣ ಮಾಡ್ತಿದ್ದ 8 ಜನರಲ್ಲಿ ದಿವ್ಯಾ ಸಾವನ್ನಪ್ಪಿದ್ರೆ ಮಾಯಾಂಕ್, ಮಂಜುಳ, ಸುನಿತಾ, ತರುಣ್, ಮಹೇಶ್, ನಮನ್ ಹಾಗೂ ಶಾಂತಿಲಾಲ್ ಗಾಯಾಳುಗಳಾಗಿದ್ದಾರೆ. ಇವರಲ್ಲಿ ನಮನ್, ಸುನಿತಾ, ಮಾಯಾಂಕ್ ಸ್ಥಿತಿ ಗಂಭೀರವಾಗಿದೆ. ಮಾದಾವರದ ಖಾಸಗಿ ಆಸ್ಪತ್ರೆಯಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳುಗಳೆಲ್ಲರೂ ಗುಜರಾತಿ ಮೂಲದ ಕುಟುಂಬದವರು. ಇದನ್ನೂ ಓದಿ: ಮುಸ್ಲಿಮರಿಗೆ ರಾಷ್ಟ್ರದ ಸಂಪತ್ತಿನ ಮೊದಲ ಹಕ್ಕು ಎಂದು ಕಾಂಗ್ರೆಸ್ ಹೇಳಿತ್ತು: ಮೋದಿ ಕಿಡಿ
Advertisement
ಸ್ಥಳಕ್ಕೆ ಬೇಟಿ ಕೊಟ್ಟು ಪರಿಶೀಲನೆ ನಡೆಸಿದ ಬೆಂಗಳೂರು ಗ್ರಾಮಾಂತರ ಎಸ್. ಪಿ ಮಲ್ಲಿಕಾರ್ಜುನ್ ಬಾಲಾದಂಡಿ ನಂತರ ಘಟನೆಯ ವಿವರ ನೀಡಿದ್ರು. ತುಮಕೂರು ರಸ್ತೆ ಹೈವೇಯಲ್ಲಿ 10ಗಂಟೆ ರಾತ್ರಿಯಲ್ಲಿ ಘಟನೆ ನಡೆದಿದೆ. ಬಲೆನೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಮುಂದಿದ್ದ ಕಾರು ಎರಡು ಮೂರು ಪಲ್ಟಿ ಆಗಿದ್ದು ನಂತರ ಬೆಂಕಿ ಹತ್ತಿಕೊಂಡಿದೆ.
ಇನ್ನು ಡಿಕ್ಕಿಯೊಡೆದ ಬಲೆನೋ ಕಾರಿನಲ್ಲಿದ್ದವರನ್ನು ಪರಿಶೀಲನೆ ನಡೆಸಬೇಕಿದೆ. ಅವರು ಮದ್ಯ ಸೇವಿಸಿ ಚಾಲನೆ ಮಾಡಿದ್ರಾ ಅನ್ನೋ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಸದ್ಯ ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ ಎಂದು ಮಾಹಿತಿ ನೀಡಿದ್ರು.
ಒಟ್ಟಾರೆ ಸಂಬಂಧಿಕರ ಮನೆಯಲ್ಲಿ ಊಟ ಮುಗಿಸಿ ಖುಷಿಯಿಂದ ಮನೆಗೆ ವಾಪಸ್ ಆಗುತ್ತಿದ್ದ ಕುಟುಂಬಕ್ಕೆ ದೊಡ್ಡ ಅಘಾತವಾಗಿದೆ. ಮನೆ ಮಗಳು ಧಗಧಗನೇ ಹೊತ್ತಿ ಉರಿಯುತ್ತಿದ್ರೂ ಕಾಪಾಡಲಾಗದ ದುಸ್ಥಿತಿ ನಿರ್ಮಾಣವಾಗಿದ್ದು ದುರಂತ.