ಮುಂಬೈ: ರಸ್ತೆಬದಿ ನಿಂತಿದ್ದ ಕಂಟೈನರ್ ಟ್ರಕ್‌ಗೆ (Container Truck) ಕಾರೊಂದು (Car) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ (Maharashtra) ನಾಸಿಕ್ (Nashik) ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ನಡೆದಿದೆ.
ಕಾರು ನಾಸಿಕ್‌ನಿಂದ ಧುಲೆ (Dhule) ಕಡೆಗೆ ತೆರಳುತ್ತಿದ್ದ ಸಂದರ್ಭ ಚಂದವಾಡ ತಾಲೂಕಿನ ಮಲ್ಸಾನೆ ಶಿವಾರ್ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ರಿಪೇರಿಗಾಗಿ ರಸ್ತೆ ಬದಿ ನಿಲ್ಲಿಸಿದ್ದ ಕಂಟೈನರ್ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಜೆಯಲ್ಲಿದ್ದ ಯೋಧನ ಮನೆಗೆ ನುಗ್ಗಿ ಕಿಡ್ನ್ಯಾಪ್ ಮಾಡಿ ಹತ್ಯೆ
ಮೃತರನ್ನು ಕಿರಣ್ ಅಹಿರಾರಾವ್ (47), ಕೃಷ್ಣಕಾಂತ್ ಮಾಲಿ (43), ಪ್ರವೀಣ್ ಪವಾರ್ (38) ಮತ್ತು ಅನಿಲ್ ಪಾಟೀಲ್ (38) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಮೂಲತಃ ಧುಲೆ ನಿವಾಸಿಗಳು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಲಕ್ನೋದಲ್ಲಿ ಇಲಿ ಹಿಡಿಯೋದಕ್ಕೆ 69 ಲಕ್ಷ ರೂ. ಖರ್ಚು ಮಾಡಿದ ರೈಲ್ವೆ
ಟೈರ್ ಪಂಚರ್ ಆದ ಕಾರಣ ಕಂಟೈನರ್ ಅನ್ನು ರಸ್ತೆಬದಿ ನಿಲ್ಲಿಸಿದ ಸಂದರ್ಭ ಘಟನೆ ನಡೆದಿದ್ದು, ಅಪಘಾತದಿಂದಾಗಿ ಮುಂಬೈ-ಆಗ್ರಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ಇದನ್ನೂ ಓದಿ: ಟೆರರಿಸ್ಟ್‌ಗಳು ಎಸ್ಕೇಪ್ ಆಗಲು ಪಾಕ್ ಸೇನೆ ನೆರವು – ಮೂವರು ಭಯೋತ್ಪಾದಕರ ಹೊಡೆದುರುಳಿಸಿದ ಭಾರತೀಯ ಸೇನೆ
Web Stories