ತುಮಕೂರು: ಕುಣಿಗಲ್ (Kunigal) ಪಟ್ಟಣದಲ್ಲಿ ಹಾಡಹಗಲೇ ವ್ಯಕ್ತಿಯ ಮೇಲೆ ಲಾಂಗ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಾರಿಯಾಗಿದ್ದ ನಾಲ್ಕು ಮಂದಿ ಆರೋಪಿಗಳನ್ನು ಕುಣಿಗಲ್ ಪೊಲೀಸರು ಬಂಧಿಸುವಲ್ಲಿ (Arrest) ಯಶಸ್ವಿಯಾಗಿದ್ದಾರೆ.
ಕೂತರಹಳ್ಳಿ ಗ್ರಾಮದ ಕೆಡಿ ಆಕಾಶ್, ಬಿಳಿದೇವಾಲಯ ಗ್ರಾಮದ ಸಾಗರ್, ಚಿಕ್ಕಕಲ್ಯಾ ಗ್ರಾಮದ ರಾಜಣ್ಣ, ಎಂಎಸ್ ಪ್ರಸಾದ್ ಬಂಧಿತ ಆರೋಪಿಗಳು. ಆಗಸ್ಟ್ 3 ರಂದು ಜಗದೀಶ್ ಎಂಬಾತ ಕುಣಿಗಲ್ ಪಟ್ಟಣದ ಎಲ್‌ಐಸಿ ಕಚೇರಿ ಬಳಿ ಚಹಾ ಕುಡಿಯುತ್ತಾ ನಿಂತಿದ್ದಾಗ ಬೈಕಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಲಾಂಗ್‌ನಿಂದ ಏಕಾಏಕಿ ಜಗದೀಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇದನ್ನೂ ಓದಿ: ಕೊಲೆ ಆರೋಪಿಯನ್ನು ಬಂಧಿಸಲು ಸಹಾಯ ಮಾಡಿದ ತಾರಾಗೆ ಭಾರೀ ಮೆಚ್ಚುಗೆ
ರಕ್ತದ ಮಡುವಿನಲ್ಲಿ ಬಿದ್ದಿದ್ದ ಜಗದೀಶ್‌ನನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತಲೆ ಮರೆಸಿಕೊಂಡಿದ್ದ ಆರೋಪಿಗಳು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಈ ನಡುವೆ ಗಾಯಾಳು ಜಗದೀಶ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾನೆ. ಇದನ್ನೂ ಓದಿ: ಗೂಡ್ಸ್ ವಾಹನ ಡಿಕ್ಕಿಯಾಗಿ ಮಕ್ಕಳಿಬ್ಬರ ದುರ್ಮರಣ
Web Stories