ಗದಗ: ಅಯೋಧ್ಯೆ (Ayodhya Ram Mandir) ಧಾಮ ರೈಲಿಗೆ ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನುಮಾನದ ಮೇರೆಗೆ ಗದಗ ನಿಲ್ದಾಣದಲ್ಲಿ ಓರ್ವನನ್ನು ರೈಲ್ವೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಅನ್ಯಕೋಮಿನ ನಾಲ್ವರು ಯುವಕರು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
Advertisement
ನಡೆದಿದ್ದೇನು..?: ಅಯೋಧ್ಯೆ ಧಾಮ ಟ್ರೈನ್ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಅನ್ಯಕೋಮಿನ ಯುವಕನೊಬ್ಬ ಟ್ರೈನ್‍ಗೆ ಬೆಂಕಿ ಹಚ್ಚುತ್ತೇನೆ ಎಂದು ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಚೈನ್ ಎಳೆದ ಕಾರಣ ರೈಲು ಸುಮಾರು 2 ಗಂಟೆಗಳ ಕಾಲ ತಡವಾಗಿ ಚಲಿಸಿದೆ. ಇದನ್ನೂ ಓದಿ: ಬೆಂಕಿ ಹಚ್ಚುತ್ತೇನೆಂದು ಅನ್ಯಕೋಮಿನ ಯುವಕನಿಂದ ಬೆದರಿಕೆ; ಮೈಸೂರು-ಅಯೋಧ್ಯೆ ರೈಲು 2 ಗಂಟೆ ಸ್ಥಗಿತ!
Advertisement
Advertisement
ಮೈಸೂರು- ಅಯೋಧ್ಯೆ ಧಾಮ ರೈಲಿನಲ್ಲಿ (Mysuru- Ayodhya Train) 1500 ರಾಮ ಭಕ್ತರು ಪ್ರಯಾಣ ಮಾಡುತ್ತಿದ್ದರು. ಈ ವೇಳೆಯಲ್ಲಿ ರಾಮ ಭಕ್ತರು ಮಾರ್ಗದುದ್ದಕ್ಕೂ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗಿದ್ದಾರೆ. ಇದರಿಂದ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ, ಸುಮಾರು 4 ಜನ ಅನ್ಯ ಕೋಮಿನ ಯುವಕರು ರಾಮ ಭಕ್ತರ ಜೊತೆಯಲ್ಲಿ ವಾಗ್ವಾದ ಆರಂಭ ಮಾಡಿದ್ದಾರೆ. ಈ ವೇಳೆಯಲ್ಲಿ ಹಿಂದೂ ಹಾಗೂ ಅನ್ಯಕೋಮಿನ ಯುವಕನ ಜೊತೆಯಲ್ಲಿ ವಾಗ್ವಾದ ಆರಂಭವಾಗಿದೆ. ಹಿಂದೂ ಕಾರ್ಯಕರ್ತರು ಹಾಗೂ ಅನ್ಯಕೋಮಿನ ಯುವಕರು ಪದೇ ಪದೇ ಚೈನ್ ಎಳೆದ ಕಾರಣ ಟ್ರೈನ್ ಮುಂದೆ ಸಾಗಲು ತೊಂದರೆಯಾಗಿದೆ.
Advertisement
ಹಿಂದೂಪರ ಕಾರ್ಯಕರ್ತರು ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಆರಂಭ ಮಾಡುತ್ತಿದ್ದಂತೆಯೇ ಅಲ್ಲಿಂದ ಅನ್ಯಕೋಮಿನ ಯುವಕರು ಪರಾರಿಯಾಗಿದ್ದಾರೆ. ಇದರಿಂದ ಕೆರಳಿದ ರಾಮ ಭಕ್ತರು ರೈಲು ನಿಲ್ದಾಣದಲ್ಲಿ ಪ್ರತಿಭಟನೆ ಮಾಡಲು ಆರಂಭ ಮಾಡಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತೆರಳುವ ಮುನ್ನವೇ ಸ್ಥಳಕ್ಕೆ ಆಗಮಿಸಿದ ಎಸ್‍ಪಿ ಶ್ರೀಹರಿಬಾಬು ಹಾಗೂ ಸಿಬ್ಬಂದಿ ಎಲ್ಲರ ಮನವೊಲಿಸಿ, ರೈಲು ಚಲಿಸುವಂತೆ ಮಾಡಿದ್ದಾರೆ. ಈ ನಡುವೆ ರೈಲು ನಿಲ್ದಾಣದಲ್ಲಿ ಹಿಂದೂ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಂತೆ ಗಲಾಟೆ ಮಾಡಿದ ಅನ್ಯಕೋಮಿನ ನಾಲ್ವರು ಯುವಕರು ಪರಾರಿಯಾಗಿದ್ದಾರೆ.